ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

August 17th, 12:45 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು

August 17th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್‌ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದೇಶವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ

August 16th, 08:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು.

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 06th, 07:00 pm

ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 06th, 06:30 pm

ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್‌ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 14th, 11:00 am

ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

April 14th, 10:16 am

ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಬವಾಲಿಯಾಲಿ ಧಾಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 20th, 04:35 pm

ಮಹಂತ್ ಶ್ರೀ ರಾಮ್ ಬಾಪು ಜಿ, ಸಮಾಜದ ಗೌರವಾನ್ವಿತ ಸದಸ್ಯರೆ ಮತ್ತು ಇಲ್ಲಿ ನೆರೆದಿರುವ ಲಕ್ಷಾಂತರ ಶ್ರದ್ಧಾಭಕ್ತಿಯುಳ್ಳ ಸಹೋದರ ಸಹೋದರಿಯರೆ - ನಮಸ್ಕಾರ ಮತ್ತು ಜೈ ಠಾಕುರ್!

ಬವಾಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

March 20th, 04:30 pm

ಗುಜರಾತ್‌ನ ಭರ್ವಾಡ್ ಸಮುದಾಯದ ಬವಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ಮಹಾಂತ ಶ್ರೀ ರಾಮ್ ಬಾಪು ಜಿ, ಸಮುದಾಯದ ಮುಖಂಡರು ಮತ್ತು ಸಾವಿರಾರು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ ಮತ್ತು ಈ ಸಂಪ್ರದಾಯಗಳನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಸಂತರು ಮತ್ತು ಮಹಾಂತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ, ಐತಿಹಾಸಿಕ ಮಹಾಕುಂಭದ ಅಪಾರ ಸಂತೋಷ ಮತ್ತು ಹೆಮ್ಮೆಯನ್ನು ಪ್ರಸ್ತಾಪಿಸಿದರು. ಈ ಪವಿತ್ರ ಕಾರ್ಯಕ್ರಮದ ಸಮಯದಲ್ಲಿ ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಿ ಗೌರವಿಸಿದ ಮಹತ್ವದ ಸಂದರ್ಭವನ್ನು ಪ್ರಸ್ತಾಪಿಸಿದರು. ಇದು ಒಂದು ಸ್ಮರಣೀಯ ಸಾಧನೆ ಮತ್ತು ಎಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ಸಮುದಾಯದ ಕುಟುಂಬಗಳಿಗೆ ಮಹಾಂತ ಶ್ರೀ ರಾಮ್ ಬಾಪು ಜಿ ಅವರ ಕೊಡುಗೆಗಳು ಮತ್ತು ಸಾಧನೆಗಳನ್ನು ಆಚರಿಸುವ ಸಂದರ್ಭದಲ್ಲಿ ಅವರು ಶುಭಾಶಯಗಳನ್ನು ತಿಳಿಸಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಜನ್ಮಾಷ್ಟಮಿ ಅಂಗವಾಗಿ ಸರ್ವರಿಗೂ ಪ್ರಧಾನ ಮಂತ್ರಿ ಶುಭಾಶಯ

August 26th, 08:16 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಸರ್ವರಿಗೂ ಶುಭಾಶಯ ಕೋರಿದ್ದಾರೆ.

ಮೋದಿ ಬದುಕಿರುವವರೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ: ನಂದೂರ್‌ಬಾರ್‌ನಲ್ಲಿ ಪ್ರಧಾನಿ ಮೋದಿ

May 10th, 12:00 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಪೂರ್ತಿದಾಯಕ ನಾಯಕರಾದ ಜನನಾಯಕ್ ಕೃಷ್ಣಾಜಿ ರಾವ್ ಸಾಬಳೆ, ಮಹಾತ್ಮ ಜ್ಯೋತಿಬಾ ಫುಲೆ, ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಅವರು ನಮನ ಸಲ್ಲಿಸಿದರು. ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯ ಶುಭ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಾವು ಪಡೆಯುವ ಆಶೀರ್ವಾದಗಳು ಶಾಶ್ವತವಾಗುತ್ತವೆ ಎಂದು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

May 10th, 11:33 am

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಪೂರ್ತಿದಾಯಕ ನಾಯಕರಾದ ಜನನಾಯಕ್ ಕೃಷ್ಣಾಜಿ ರಾವ್ ಸಾಬಳೆ, ಮಹಾತ್ಮ ಜ್ಯೋತಿಬಾ ಫುಲೆ, ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಅವರು ನಮನ ಸಲ್ಲಿಸಿದರು. ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯ ಶುಭ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಾವು ಪಡೆಯುವ ಆಶೀರ್ವಾದಗಳು ಶಾಶ್ವತವಾಗುತ್ತವೆ ಎಂದು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.