ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 12th, 12:49 pm
ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಅವರಿಂದ ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ
September 20th, 09:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ ನಡೆಸಿದರು. ಈ ಸಂಕೀರ್ಣದ ಕಾಮಗಾರಿ ಪೂರ್ಣಗೊಂಡ ನಂತರ ಇದು ವಿಶ್ವದ ಅತಿದೊಡ್ಡ ಕಡಲ ವಸ್ತುಸಂಗ್ರಹಾಲಯವಾಗಲಿದೆ. ಇದು ಪ್ರವಾಸೋದ್ಯಮ, ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯ ಕೇಂದ್ರವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಭಾರತದ ಪ್ರಾಚೀನ ಸಾಗರ ಸಾಂಪ್ರದಾಯಿಕತೆಗಳನ್ನೂ ಪ್ರದರ್ಶಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಸೆಪ್ಟೆಂಬರ್ 20ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
September 19th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 20ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಭಾವನಗರದಲ್ಲಿ ಬೆಳಗ್ಗೆ 10:30ರ ಸುಮಾರಿಗೆ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್‌ನ ಭುಜ್‌ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್‌ನ ಭುಜ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್‌ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.ಫಲಪ್ರದ ಕಾರ್ಯಯೋಜನೆಗಳ ಪಟ್ಟಿ: ಪ್ರಧಾನಮಂತ್ರಿಯವರ ಥೈಲ್ಯಾಂಡ್ ಭೇಟಿ
April 03rd, 08:36 pm
ಭಾರತ-ಥೈಲ್ಯಾಂಡ್ ದೇಶಗಳ ನಡುವಿನ ಕಾರ್ಯತಂತ್ರದ ಹಾಗೂ ಸಹಭಾಗಿತ್ವ ಪ್ರಾರಂಭ ಕುರಿತು ಜಂಟಿ ಘೋಷಣೆಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
October 31st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು."ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "
October 31st, 07:00 pm
ಗುಜರಾತ್ ನ ಕಚ್ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣ ನಿರ್ಮಾಣದ ಬಗ್ಗೆ ಲಿಂಕ್ಡ್ ಇನ್ ಪೋಸ್ಟ್ ಮಾಡಿದ್ದಾರೆ
October 15th, 03:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣವನ್ನು ಅಭಿವೃದ್ಧಿಪಡಿಸುವ ವಿಷಯಗಳನ್ನು ವಿವರಿಸಿ ಲಿಂಕ್ಡ್ ಇನ್ ನಲ್ಲಿ ಪೋಸ್ಟ್ ಮಾಡಿದ್ದಾರೆ.ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ
July 21st, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ
July 21st, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.