ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ
June 28th, 08:24 pm
ಇಂದು ನೀವು ನಿಮ್ಮ ಮಾತೃಭೂಮಿ ಭಾರತದ ಭೂಮಿಯಿಂದ ದೂರದಲ್ಲಿದ್ದೀರಿ, ಆದರೆ ನೀವು ಭಾರತೀಯರ ಹೃದಯಗಳಿಗೆ ಹತ್ತಿರವಾಗಿದ್ದೀರಿ. ನಿಮ್ಮ ಹೆಸರಿನಲ್ಲೇ ಶುಭವಿದೆ, ನಿಮ್ಮ ಪ್ರಯಾಣ ಹೊಸ ಯುಗದ ಆರಂಭವೂ ಆಗಿದೆ. ಈ ಸಮಯದಲ್ಲಿ ನಾವಿಬ್ಬರೂ ಮಾತನಾಡುತ್ತಿದ್ದೇವೆ, ಆದರೆ 140 ಕೋಟಿ ಭಾರತೀಯರ ಭಾವನೆಗಳು ನನ್ನೊಂದಿಗಿವೆ. ನನ್ನ ಧ್ವನಿಯು ಎಲ್ಲಾ ಭಾರತೀಯರ ಉತ್ಸಾಹ ಮತ್ತು ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಬಾಹ್ಯಾಕಾಶದಲ್ಲಿ ಭಾರತದ ಧ್ವಜ ಹಾರಿಸಿದ್ದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಾನು ಹೆಚ್ಚು ಸಮಯ ತೆಗೆದುಕೊಳ್ಳುತ್ತಿಲ್ಲ, ಆದ್ದರಿಂದ ಮೊದಲು ನನಗೆ ಹೇಳಿ, ಅಲ್ಲಿ ಎಲ್ಲವೂ ಸರಿಯಾಗಿದೆಯೇ? ನೀವು ಚೆನ್ನಾಗಿದ್ದೀರಾ?ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
June 28th, 08:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಶುಭಾಂಶು ಅವರು ಪ್ರಸ್ತುತ ಭಾರತದ ಮಾತೃಭೂಮಿಯಿಂದ ಅತಿ ದೂರದಲ್ಲಿದ್ದರೂ, ಅವರು ಸಮಸ್ತ ಭಾರತೀಯರ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದಾರೆ, ಎಂದು ಬಣ್ಣಿಸಿದರು. ಶುಭಾಂಶು ಎಂಬ ಹೆಸರೇ ಶುಭ ಸೂಚಕವಾಗಿದ್ದು, ಅವರ ಈ ಪಯಣವು ಒಂದು ನವಯುಗದ ಆರಂಭಕ್ಕೆ ಮುನ್ನುಡಿಯಾಗಿದೆ, ಎಂದು ಶ್ರೀ ಮೋದಿ ನುಡಿದರು. ಇದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಭಾಷಣೆಯಾಗಿದ್ದರೂ, ಇದರಲ್ಲಿ 140 ಕೋಟಿ ಭಾರತೀಯರ ಭಾವನೆಗಳು ಮತ್ತು ಉತ್ಸಾಹ ಅಡಗಿದೆ. ಶುಭಾಂಶು ಅವರೊಂದಿಗೆ ಮಾತನಾಡುತ್ತಿರುವ ಈ ಧ್ವನಿಯು, ಇಡೀ ರಾಷ್ಟ್ರದ ಸಾಮೂಹಿಕ ಹುಮ್ಮಸ್ಸು ಮತ್ತು ಹೆಮ್ಮೆಯನ್ನು ಹೊತ್ತಿದೆ, ಎಂದು ಅವರು ಹೇಳಿದರು. ಬಾಹ್ಯಾಕಾಶದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದ್ದಕ್ಕಾಗಿ ಶುಭಾಂಶು ಅವರಿಗೆ ಪ್ರಧಾನಿಯವರು ಹೃತ್ಪೂರ್ವಕ ಅಭಿನಂದನೆಗಳನ್ನು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದರು. ಕೊನೆಯಲ್ಲಿ, ಪ್ರಧಾನಿಯವರು ಶುಭಾಂಶು ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಬಾಹ್ಯಾಕಾಶ ನಿಲ್ದಾಣದಲ್ಲಿ ಎಲ್ಲವೂ ಸುಸೂತ್ರವಾಗಿದೆಯೇ ಎಂದು ಕೇಳಿದರು.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.