PM chairs CCS Meeting to review the situation in context of ongoing West Asia Conflict
July 30th, 07:38 pm
Prime Minister Shri Narendra Modi today chaired a meeting of the Cabinet Committee on Security (CSS) to review the situation in the context of ongoing West Asia conflict and measures taken by various Ministries and Departments. This was the 4th special CCS meeting on the issue.Participants of Viksit Vibrant Village Programme share their experiences with PM Modi
July 26th, 10:27 pm
PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha BharatThe Vibrant Village Programme is giving further momentum to the development of border villages: PM Modi
July 26th, 05:00 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.PM Modi Interacts with Participants of Viksit Vibrant Village Programme 2026
July 26th, 04:30 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ರಾಜಸ್ಥಾನದ ಬಲೋತ್ರಾದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 12:50 pm
ಈ ಭೂಮಿ ಅಸಂಖ್ಯಾತ ವೀರರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಈ ಯುದ್ಧಭೂಮಿಯ ಪ್ರತಿಯೊಂದು ಕಣವು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನ ಕಾಪಾಡಲು ನಮಗೆ ಕಲಿಸಿದೆ. ಸ್ವಾಭಿಮಾನ - ಅದು ವ್ಯಕ್ತಿಯಾಗಿರಲಿ ಅಥವಾ ರಾಷ್ಟ್ರವಾಗಿರಲಿ - ಅದು ಸ್ವಾವಲಂಬಿಯಾಗಿದ್ದಾಗ ಮಾತ್ರ, ಸಾಧ್ಯವಾದಷ್ಟು ಇತರರ ಮೇಲೆ ಕಡಿಮೆ ಅವಲಂಬಿತವಾದಾಗ ಮಾತ್ರ ಉನ್ನತ ಸ್ಥಾನದಲ್ಲಿ ಉಳಿಯುತ್ತದೆ. ಇಂದು ರಾಜಸ್ಥಾನದ ಮಣ್ಣಿನಿಂದ ಭಾರತವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿಯಾಗುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಇಂದು ಈ ಸಂಸ್ಕರಣಾಗಾರವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಈ ಸಂಸ್ಕರಣಾಗಾರವು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ಒದಗಿಸುತ್ತದೆ. ಈ ಸಂಸ್ಕರಣಾಗಾರಕ್ಕಾಗಿ ನಾನು ರಾಜಸ್ಥಾನದ ಯುವಕರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಉಪಕ್ರಮಗಳಿಗೆ ಹೆಚ್ಚು ಸಹಯೋಗದ ಶಕ್ತಿಯನ್ನು ನೀಡುವ ಇಂಗಿತವನ್ನು ತಮ್ಮ ಉತ್ಸಾಹದ ಮಾತುಗಳಲ್ಲಿ ವ್ಯಕ್ತಪಡಿಸಿದರು. ಬೇಸಿಗೆಯ ತೀವ್ರ ಬಿಸಿಲಿನ ಬಿಸಿಲಿನ ತಾಪವನ್ನು ಧೈರ್ಯದಿಂದ ನಿಭಾಯಿಸಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಬೃಹತ್ ಪ್ರಮಾಣದ ಜನಸಮೂಹದ ಪಾಲ್ಗೊಳ್ಳುವಿಕೆಯು ಪ್ರಸ್ತುತ ಆಡಳಿತಕ್ಕೆ ನೀಡಿರುವ ಬೆಂಬಲದ ದೃಢೀಕರಣವಾಗಿದೆ ಎಂದು ವ್ಯಾಖ್ಯಾನಿಸಿದರು. ಈ ಅಪಾರ ಬೆಂಬಲಕ್ಕಾಗಿ ನಾನು ರಾಜಸ್ಥಾನದ ಮಣ್ಣಿಗೆ ಸಂಪೂರ್ಣವಾಗಿ ಋಣಿಯಾಗಿದ್ದೇನೆ, ಇದು ನಮ್ಮ ಸರ್ಕಾರದ ಪ್ರಯತ್ನಗಳಲ್ಲಿ ನಿಮ್ಮ ಅತ್ಯುನ್ನತ ನಂಬಿಕೆಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 16th, 10:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರು 2026ರ ಜೂನ್ 16 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು.ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 15th, 03:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿ ನೀಡಿದರು. ಅವರನ್ನು ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 03:45 pm
ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಪರಾಮರ್ಶೆಗಾಗಿ ತಮ್ಮ ನೇತೃತ್ವದಲ್ಲಿ ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್) ಸಭೆಯ ನಡೆಸಿದ ಪ್ರಧಾನಮಂತ್ರಿ
April 01st, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ವಿವಿಧ ಸಚಿವಾಲಯಗಳು/ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಾಮರ್ಶೆಗಾಗಿ ಇಂದು ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಬಿಕ್ಕಟ್ಟು ಎದುರಿಸಲು ಮುಂದೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಈ ವಿಷಯದ ಬಗ್ಗೆ ನಡೆದ ಎರಡನೇ ವಿಶೇಷ ʻಸಿಸಿಎಸ್ʼ ಸಭೆ ಇದಾಗಿದೆ.ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು
March 27th, 09:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತು ಭಾರತದ ಮೇಲೆ ಅದರ ಸಂಭವನೀಯ ಪರಿಣಾಮಗಳ ಕುರಿತು ಸಿದ್ಧತೆಗಳನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 24th, 02:05 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರಿಂದ ಉಂಟಾಗುವ ಸನ್ನಿವೇಶಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇಂದು ನಾನು ಈ ಗಂಭೀರ ಪರಿಸ್ಥಿತಿಗಳ ಕುರಿತು ಸರ್ಕಾರದ ನಿಲುವು ಹಂಚಿಕೊಳ್ಳಲು ಸಂಸತ್ತಿನ ಮೇಲ್ಮನೆಯ ಮುಂದೆ ಮತ್ತು ನನ್ನ ಸಹ ನಾಗರಿಕರ ಮುಂದೆ ನಿಂತಿದ್ದೇನೆ. ಈ ಯುದ್ಧವು ಈಗ 3 ವಾರಗಳಿಗೂ ಹೆಚ್ಚು ಕಾಲದಿಂದ ಮುಂದುವರೆದಿದೆ. ಇದು ವಿಶ್ವಾದ್ಯಂತ ತೀವ್ರ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಭಾರತಕ್ಕೂ ಈ ಪರಿಸ್ಥಿತಿ ಚಿಂತಾಜನಕವಾಗಿದೆ. ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ. ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗಳು ಅಸ್ತವ್ಯಸ್ತಗೊಂಡಿವೆ. ಸುಮಾರು 1 ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಜೀವನೋಪಾಯ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಒಂದು ಪ್ರಮುಖ ಕಾಳಜಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅನೇಕ ಹಡಗುಗಳು ಸಿಲುಕಿಕೊಂಡಿವೆ, ಅದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಇದ್ದಾರೆ. ಇದು ಭಾರತಕ್ಕೂ ಗಂಭೀರ ಕಳವಳದ ವಿಷಯವಾಗಿದೆ. ಇಂತಹ ಭೀಕರ ಸಂದರ್ಭಗಳಲ್ಲಿ ಸಂಸತ್ತಿನ ಈ ಮೇಲ್ಮನೆಯಿಂದ ಶಾಂತಿ ಮತ್ತು ಸಂವಾದಕ್ಕಾಗಿ ಒಗ್ಗಟ್ಟಿನ ಧ್ವನಿ ಇಡೀ ಜಗತ್ತನ್ನು ತಲುಪುವುದು ಅತ್ಯಗತ್ಯವಾಗಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು
March 24th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸಿದ ಪರಿಸ್ಥಿತಿಯ ಕುರಿತು ಸರ್ಕಾರದ ನಿಲುವನ್ನು ಮಂಡಿಸಿದರು. ಮೂರು ವಾರಗಳಿಗೂ ಹೆಚ್ಚು ಕಾಲದಿಂದ ಭುಗಿಲೆದ್ದಿರುವ ಈ ಯುದ್ಧವು ಭಾರತದ ಮೇಲೆ ತೀವ್ರ ಆತಂಕಕಾರಿ ಪರಿಣಾಮಗಳನ್ನು ಬೀರುವ ಸೂಚನೆಗಳೊಂದಿಗೆ ತೀವ್ರ ಜಾಗತಿಕ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ ಎಂಬುದನ್ನು ತಿಳಿಸಿದ ಪ್ರಧಾನಮಂತ್ರಿ ಮೋದಿ ಅವರು, ಈ ಸಂಘರ್ಷವು ಭಾರತದ ವ್ಯಾಪಾರ ಮಾರ್ಗಗಳನ್ನು ಅಡ್ಡಿಪಡಿಸುತ್ತಿದೆ ಮತ್ತು ಪೆಟ್ರೋಲ್, ಡೀಸೆಲ್, ಅನಿಲ ಹಾಗೂ ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಕೆಲಸ ಮಾಡುತ್ತಿರುವುದರಿಂದ, ಅವರ ಸುರಕ್ಷತೆ ಮತ್ತು ಜೀವನೋಪಾಯವು ತೀವ್ರ ಕಳವಳದ ವಿಷಯವಾಗಿ ಮೂಡಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ, ಹಡಗುಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ಸದಸ್ಯರ ಬಗ್ಗೆಯೂ ಗಮನ ಸೆಳೆದರು. ಇಂತಹ ಗಂಭೀರ ಸಂದರ್ಭದಲ್ಲಿ, ಭಾರತ ಸಂಸತ್ತಿನ ಈ ಘನ ಮೇಲ್ಮನೆಯಿಂದ ಇಡೀ ಜಗತ್ತಿಗೆ ಶಾಂತಿ ಮತ್ತು ಸಂವಾದದ ಏಕೀಕೃತ ಧ್ವನಿ ಹೊರಹೊಮ್ಮುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಶ್ರೀ. ಮೋದಿ ಅವರು ದೃಢಪಡಿಸಿದರು.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 23rd, 02:15 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಎದುರಾಗಿರುವ ಸವಾಲುಗಳ ಕುರಿತು ಮಾತನಾಡಲು ನಾನು ಈ ಗೌರವಾನ್ವಿತ ಸದನದ ಮುಂದೆ ಬಂದಿದ್ದೇನೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ತುಂಬಾ ಕಳವಳಕಾರಿಯಾಗಿದೆ. ಕಳೆದ 2-3 ವಾರಗಳಲ್ಲಿ ಶ್ರೀ ಜೈಶಂಕರ್ ಜಿ ಮತ್ತು ಶ್ರೀ ಹರ್‌ದೀಪ್ ಪುರಿ ಅವರು ಪರಿಷ್ಕೃತ ವಿಷಯಗಳನ್ನು ಸದನಕ್ಕೆ ಒದಗಿಸಿದ್ದಾರೆ. ಬಿಕ್ಕಟ್ಟು 3 ವಾರಗಳಿಗೂ ಹೆಚ್ಚು ಕಾಲ ಇರುವುದರಿಂದ, ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ಅದರ ಪ್ರತಿಕೂಲ ಪರಿಣಾಮವು ಸ್ಪಷ್ಟವಾಗಿದೆ. ಈ ಬಿಕ್ಕಟ್ಟಿಗೆ ತ್ವರಿತ ಪರಿಹಾರಕ್ಕಾಗಿ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಾ ಬಂದಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 23rd, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಒಡ್ಡುತ್ತಿರುವ ವ್ಯಾಪಕ ಸವಾಲುಗಳ ಬಗ್ಗೆ ಪ್ರಸ್ತಾಪಿಸಿದರು. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದು, ಜಾಗತಿಕ ಆರ್ಥಿಕತೆ ಮತ್ತು ಮಾನವ ಜೀವಗಳ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಇದರ ಪರಿಹಾರದ ತುರ್ತು ಅಗತ್ಯವನ್ನು ಒತ್ತಿಹೇಳಿದರು. ಪರಿಸ್ಥಿತಿಯ ಗಂಭೀರತೆಯನ್ನು ಉಲ್ಲೇಖಿಸುತ್ತಾ ಶ್ರೀ ಮೋದಿಯವರು, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸುವಂತೆ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಿದೆ ಎಂದು ಹೇಳಿದರು.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.