Cabinet approves 4 lane construction from Barabanki to Bahraich in Uttar Pradesh worth Rs.6969.04 crore
March 18th, 04:10 pm
The Cabinet Committee on Economic Affairs, chaired by PM Narendra Modi has approved construction of 4-Lane Access-Controlled National Highway-927 from Barabanki to Bahraich in Uttar Pradesh worth Rs.6969.04 crore. The project will bypass major habitations, increase average travel speeds, reduce travel time to about one hour, and improve overall road safety, fuel efficiency, and vehicle operating costs.ಜನವರಿ 17-18 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
January 16th, 02:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 17-18, ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ಡಿಸೆಂಬರ್ 25 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
December 24th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನಾಚರಣೆಯ ಪ್ರಯುಕ್ತ 2025ರ ಡಿಸೆಂಬರ್ 25 ರಂದು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಪ್ರಧಾನಮಂತ್ರಿ ಅವರು ʻರಾಷ್ಟ್ರ ಪ್ರೇರಣಾ ಸ್ಥಳʼವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 08th, 12:30 pm
ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
December 08th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಲಕ್ನೋವನ್ನು ಯುನೆಸ್ಕೋದ ಕ್ರಿಯೇಟಿವ್ ಸಿಟಿ ಆಫ್ ಗ್ಯಾಸ್ಟ್ರೊನಮಿ ಎಂದು ಹೆಸರಿಸಿದ್ದಕ್ಕೆ ಪ್ರಧಾನಮಂತ್ರಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ
November 01st, 02:13 pm
ಲಕ್ನೋವನ್ನು ಯುನೆಸ್ಕೋದ ಕ್ರಿಯೇಟಿವ್ ಸಿಟಿ ಆಫ್ ಗ್ಯಾಸ್ಟ್ರೊನಮಿ ಎಂದು ಹೆಸರಿಸಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
May 30th, 03:29 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ಶ್ರೀ ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವರೇ, ಸಂಸದರೇ, ಶಾಸಕರೇ, ಮತ್ತು ಕಾನ್ಪುರದಿಂದ ಇಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ
May 30th, 03:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ 2025ರ ಏಪ್ರಿಲ್ 24 ರಂದು ಆರಂಭದಲ್ಲಿ ನಿಗದಿಯಾಗಿದ್ದ ಕಾನ್ಪುರ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂದು ತಿಳಿಸಿದರು. ಈ ಅನಾಗರಿಕ ಕೃತ್ಯಕ್ಕೆ ಬಲಿಯಾದ ಕಾನ್ಪುರದ ಪುತ್ರ ಶ್ರೀ ಶುಭಂ ದ್ವಿವೇದಿಗೆ ಅವರು ಗೌರವ ಸಲ್ಲಿಸಿದರು. ದೇಶಾದ್ಯಂತ ಸಹೋದರಿಯರು ಮತ್ತು ಹೆಣ್ಣುಮಕ್ಕಳ ನೋವು, ಸಂಕಟ, ಕೋಪ ಮತ್ತು ಸಾಮೂಹಿಕ ಯಾತನೆಯನ್ನು ತಾವು ಆಳವಾಗಿ ಅನುಭವಿಸಿರುವುದಾಗಿ ಪ್ರಧಾನಿ ಹೇಳಿದರು. ಆಪರೇಷನ್ ಸಿಂದೂರ್ ನಡೆದಾಗ ಈ ಸಾಮೂಹಿಕ ಕೋಪವು ವಿಶ್ವಾದ್ಯಂತ ಕಂಡುಬಂದಿತು ಎಂದು ಅವರು ಹೇಳಿದರು.ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
November 29th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಲಕ್ನೋದಲ್ಲಿ ದುರ್ಘಟನೆಯಲ್ಲಿ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಂಬನಿ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ
September 08th, 01:13 pm
ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಕಟ್ಟಡ ಕುಸಿದು ಮೃತಪಟ್ಟವರ ಬಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.1000 ವರ್ಷಗಳ ಗುಲಾಮಗಿರಿಯ ಮನಸ್ಥಿತಿಯಿಂದ ದೇಶವನ್ನು ಮುಕ್ತಗೊಳಿಸಲು ಈ ಚುನಾವಣೆ: ಆಯೋನ್ಲಾದಲ್ಲಿ ಪ್ರಧಾನಿ
April 25th, 01:07 pm
ಅಯೋನ್ಲಾ ರ್ಯಾಲಿಯಲ್ಲಿ, ಪಿಎಂ ಮೋದಿ ಅವರು ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷವಾಗಲಿ ಪ್ರತಿಪಕ್ಷಗಳನ್ನು ಟೀಕಿಸುವುದನ್ನು ಮುಂದುವರೆಸಿದರು, ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ಎಂದು ಹೇಳಿದ್ದಾರೆ. ಅವರು ಹೇಳಿದರು, “ಈ ಜನರಿಗೆ, ಅವರ ಕುಟುಂಬವೇ ಸರ್ವಸ್ವ, ಮತ್ತು ಅವರು ಬೇರೆಯವರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷವು ತಮ್ಮ ಕುಟುಂಬದ ಹೊರತಾಗಿ ಒಬ್ಬ ಯಾದವನಿಗೆ ಟಿಕೆಟ್ ನೀಡಬಹುದೆಂದು ಕಂಡುಬಂದಿಲ್ಲ. ಬದೌನ್, ಮೈನ್‌ಪುರಿ, ಕನೌಜ್, ಅಜಂಗಢ, ಫಿರೋಜಾಬಾದ್ ಹೀಗೆ ಎಲ್ಲ ಕಡೆ ಒಂದೇ ಕುಟುಂಬದವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಅಂತಹ ಜನರು ಯಾವಾಗಲೂ ತಮ್ಮ ಸ್ವಂತ ಕುಟುಂಬದ ಕಲ್ಯಾಣಕ್ಕೆ ಆದ್ಯತೆ ನೀಡುತ್ತಾರೆ ಮತ್ತು ಅವರಿಗೆ, ಅವರ ಕುಟುಂಬದ ಹೊರಗಿನವರು ಯಾವುದೇ ಪ್ರಾಮುಖ್ಯತೆಯನ್ನು ಹೊಂದಿಲ್ಲ.ಉತ್ತರ ಪ್ರದೇಶದ ಆಗ್ರಾ, ಅಯೋನ್ಲಾ ಮತ್ತು ಷಹಜಹಾನ್‌ಪುರ್‌ನಲ್ಲಿ ನಡೆದ ರೋಮಾಂಚಕ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಿ ಮೋದಿ ಅವರು ಬೃಹತ್ ಪ್ರೇಕ್ಷಕರನ್ನು ಆಕರ್ಷಿಸಿದರು
April 25th, 12:45 pm
2024 ರ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಆಗ್ರಾ, ಅಯೋನ್ಲಾ ಮತ್ತು ಷಹಜಹಾನ್‌ಪುರದಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಸ್ಫೂರ್ತಿದಾಯಕ ಭಾಷಣಗಳನ್ನು ಮಾಡಿದರು. ಪ್ರೀತಿ ಮತ್ತು ಗೌರವದ ಹೊರಹರಿವಿನ ಮಧ್ಯೆ, ಪ್ರಧಾನಿ ಮೋದಿ ಅವರು ವಿಕ್ಷಿತ್ ಉತ್ತರ ಪ್ರದೇಶ ಮತ್ತು ವಿಕ್ಷಿತ್ ಭಾರತಕ್ಕಾಗಿ ಪಾರದರ್ಶಕ ದೃಷ್ಟಿಯನ್ನು ಅನಾವರಣಗೊಳಿಸಿದರು. ಪ್ರತಿಪಕ್ಷಗಳ ಕುತಂತ್ರ ಮತ್ತು ಅವರ ಲೂಟಿ ವ್ಯವಸ್ಥೆ ಯ ಕಠೋರ ಸತ್ಯಗಳನ್ನು ಪ್ರಧಾನಿ ತೆರೆದಿಟ್ಟರು.ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ 4ನೇ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 19th, 03:00 pm
ಇಂದು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಉತ್ತರ ಪ್ರದೇಶವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ನಾವು ಇಲ್ಲಿ ಒಂದಾಗಿದ್ದೇವೆ. ಪ್ರಸ್ತುತ, ತಂತ್ರಜ್ಞಾನದ ಮೂಲಕ, ಉತ್ತರ ಪ್ರದೇಶದ 400ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇದ್ದಾರೆ. ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ನಾನು ಆತ್ಮೀಯ ಸ್ವಾಗತ ಕೋರುತ್ತೇನೆ. ಏಳೆಂಟು ವರ್ಷಗಳ ಹಿಂದೆ ಇದ್ದ ಉತ್ತರ ಪ್ರದೇಶಕ್ಕೂ, ಹೂಡಿಕೆ ಮತ್ತು ಉದ್ಯೋಗಾವಕಾಶಗಳ ಪ್ರಸ್ತುತ ವಾತಾವರಣವನ್ನು ನಾವು ಊಹಿಸಲು ಸಾಧ್ಯವಾಗುತ್ತಿಲ್ಲ. ಅಪರಾಧಗಳು, ಗಲಭೆಗಳು ಮತ್ತು ಕಳ್ಳತನಗಳ ವರದಿಗಳು ಹೇರಳವಾಗಿದ್ದವು. ಆ ಸಮಯದಲ್ಲಿ, ಯಾರಾದರೂ ಉತ್ತರ ಪ್ರದೇಶವನ್ನು ಅಭಿವೃದ್ಧಿಪಡಿಸುವ ಆಕಾಂಕ್ಷೆಗಳನ್ನು ವ್ಯಕ್ತಪಡಿಸಿದ್ದರೆ, ಕೆಲವರು ಕೇಳುತ್ತಿದ್ದರು, ನಂಬುವುದನ್ನೇ ಬಿಟ್ಟುಬಿಟ್ಟಿದ್ದರು. ಆದರೆ, ಇಂದು ಉತ್ತರ ಪ್ರದೇಶಕ್ಕೆ ಲಕ್ಷಾಂತರ ಕೋಟಿ ರೂಪಾಯಿಗಳ ಹೂಡಿಕೆ ಹರಿದು ಬರುತ್ತಿದೆ. ಉತ್ತರ ಪ್ರದೇಶದ ಸಂಸದನಾಗಿ, ನನ್ನ ರಾಜ್ಯದ ಬೆಳವಣಿಗೆಗಳನ್ನು ನೋಡುವುದು ನನಗೆ ಅಪಾರ ಸಂತೋಷ ತುಂಬುತ್ತದೆ. ಇಂದು ಸಾವಿರಾರು ಯೋಜನೆಗಳ ಕಾಮಗಾರಿ ಆರಂಭವಾಗಿದೆ. ಮುಂಬರುವ ಈ ಕಾರ್ಖಾನೆಗಳು ಮತ್ತು ಕೈಗಾರಿಕೆಗಳು ಉತ್ತರ ಪ್ರದೇಶದ ಭೂದೃಶ್ಯವನ್ನು ಪರಿವರ್ತಿಸಲು ಸಿದ್ಧವಾಗಿವೆ. ಎಲ್ಲಾ ಹೂಡಿಕೆದಾರರಿಗೆ, ವಿಶೇಷವಾಗಿ ಉತ್ತರ ಪ್ರದೇಶದ ಯುವಕರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಉತ್ತರ ಪ್ರದೇಶದ ಲಕ್ನೋದಲ್ಲಿ ʻವಿಕಸಿತ ಭಾರತ-ವಿಕಸಿತ ಉತ್ತರ ಪ್ರದೇಶʼ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 19th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ ʻವಿಕಸಿತ ಭಾರತ ವಿಕಸಿತ ಉತ್ತರ ಪ್ರದೇಶʼ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. 2023ರ ಫೆಬ್ರವರಿಯಲ್ಲಿ ನಡೆದ ನಾಲ್ಕನೇ ʻಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023ʼರ ಉದ್ಘಾಟನಾ ಸಮಾರಂಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ 10 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 14000 ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳು ಉತ್ಪಾದನೆ, ನವೀಕರಿಸಬಹುದಾದ ಇಂಧನ; ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಆಧರಿತ ಸೇವೆಗಳು(ಐಟಿಇಎಸ್), ಆಹಾರ ಸಂಸ್ಕರಣೆ; ವಸತಿ ಮತ್ತು ರಿಯಲ್ ಎಸ್ಟೇಟ್; ಆತಿಥ್ಯ ಮತ್ತು ಮನರಂಜನೆ ಹಾಗೂ ಶಿಕ್ಷಣದಂತಹ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿವೆ.Today every corner of India is brimming with self-confidence: PM Modi during Mann Ki Baat
December 31st, 11:30 am
In the 108th ‘Mann Ki Baat’ episode, PM Modi highlighted India's achievements, including the Nari Shakti Vandan Act and economic growth. Messages on fitness from Sadhguru, Harmanpreet Kaur, Viswanathan Anand, Akshay Kumar and Rishabh Malhotra were featured. The PM emphasized mental health, showcased health startups, and discussed about Bhashini, the AI for real-time translation. He also paid tribute to Savitribai Phule and Rani Velu Nachiyar.