ಬ್ರೆಜಿಲ್ ಅಧ್ಯಕ್ಷರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ
January 22nd, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಒಕ್ಕೂಟ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 23rd, 12:45 pm
ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
November 23rd, 12:30 pm
ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ಅಧ್ಯಕ್ಷರಿಂದ ದೂರವಾಣಿ ಕರೆ
August 07th, 09:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 09th, 06:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
July 09th, 05:55 am
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.ಪ್ರಧಾನಮಂತ್ರಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವ - "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಪ್ರದಾನ
July 09th, 12:58 am
ಬ್ರೆಜಿಲ್ ಅಧ್ಯಕ್ಷರಾದ ಗೌರವಾನ್ವಿತ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಅನ್ನು ಪ್ರದಾನ ಮಾಡಿದರು.ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 08th, 08:30 pm
ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ಪ್ರಧಾನಿ ಮೋದಿ ಬ್ರೆಜಿಲ್‌ನ ಬ್ರೆಜಿಲಿಯಾಕ್ಕೆ ಆಗಮಿಸಿದರು
July 08th, 02:55 am
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಅಧಿಕೃತ ಭೇಟಿಗಾಗಿ ಬ್ರೆಜಿಲಿಯಾಕ್ಕೆ ಆಗಮಿಸಿದರು. ಅವರು ಭಾರತ-ಬ್ರೆಜಿಲ್ ಸಂಬಂಧಗಳ ವಿವಿಧ ಅಂಶಗಳ ಕುರಿತು ಅಧ್ಯಕ್ಷ ಲುಲಾ ಅವರೊಂದಿಗೆ ವಿವರವಾದ ಮಾತುಕತೆ ನಡೆಸಲಿದ್ದಾರೆ.ಶಾಂತಿ ಮತ್ತು ಭದ್ರತೆ ಕುರಿತ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
July 06th, 11:07 pm
ಜಾಗತಿಕ ಶಾಂತಿ ಮತ್ತು ಭದ್ರತೆ ಕೇವಲ ಆದರ್ಶಗಳಲ್ಲ, ಬದಲಿಗೆ ಅವು ನಮ್ಮ ಹಂಚಿಕೆಯ ಹಿತಾಸಕ್ತಿಗಳು ಮತ್ತು ಭವಿಷ್ಯದ ಅಡಿಪಾಯವಾಗಿದೆ. ಶಾಂತಿಯುತ ಮತ್ತು ಸುಭದ್ರ ವಾತಾವರಣದಲ್ಲಿ ಮಾತ್ರ ಮಾನವೀಯತೆಯ ಪ್ರಗತಿ ಸಾಧ್ಯ. ಈ ಉದ್ದೇಶವನ್ನು ಈಡೇರಿಸುವಲ್ಲಿ ಬ್ರಿಕ್ಸ್ ಬಹಳ ಮುಖ್ಯವಾದ ಪಾತ್ರವನ್ನು ಹೊಂದಿದೆ. ನಾವೆಲ್ಲರೂ ಒಗ್ಗೂಡಲು, ನಮ್ಮ ಪ್ರಯತ್ನಗಳನ್ನು ಒಗ್ಗೂಡಿಸಲು ಮತ್ತು ನಾವೆಲ್ಲರೂ ಎದುರಿಸುತ್ತಿರುವ ಸವಾಲುಗಳನ್ನು ಸಾಮೂಹಿಕವಾಗಿ ಎದುರಿಸಲು ಇದು ಸುಸಮಯ. ನಾವು ಒಟ್ಟಾಗಿ ಮುಂದೆ ಸಾಗಬೇಕು.ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲಿಷ್ ಅನುವಾದ: ಜಾಗತಿಕ ಆಡಳಿತದ ಸುಧಾರಣೆ
July 06th, 09:41 pm
17ನೇ ಬ್ರಿಕ್ಸ್ ಶೃಂಗಸಭೆಯ ಅತ್ಯುತ್ತಮ ಸಂಘಟನೆಗಾಗಿ ಅಧ್ಯಕ್ಷ ಲೂಲಾ ಅವರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರೆಜಿಲ್‌ನ ಕ್ರಿಯಾತ್ಮಕ ಅಧ್ಯಕ್ಷತೆಯಲ್ಲಿ, ನಮ್ಮ ಬ್ರಿಕ್ಸ್ ಸಹಕಾರವು ಹೊಸ ಆವೇಗ ಮತ್ತು ಚೈತನ್ಯವನ್ನು ಪಡೆದುಕೊಂಡಿದೆ. ನಾವು ಪಡೆದ ಶಕ್ತಿಯು ಕೇವಲ ಎಸ್ಪ್ರೆಸೊ ಅಲ್ಲ; ಇದು ಡಬಲ್ ಎಸ್ಪ್ರೆಸೊ ಶಾಟ್! ಇದಕ್ಕಾಗಿ, ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಅವರ ಅಚಲ ಬದ್ಧತೆಯನ್ನು ನಾನು ಶ್ಲಾಘಿಸುತ್ತೇನೆ. ಭಾರತದ ಪರವಾಗಿ, ಬ್ರಿಕ್ಸ್ ಕುಟುಂಬದಲ್ಲಿ ಇಂಡೋನೇಷ್ಯಾ ಸೇರ್ಪಡೆಗಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪ್ರಬೋವೊ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ.ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಹೇಳಿಕೆ: ಬಹುಪಕ್ಷೀಯತೆ, ಆರ್ಥಿಕ ಹಣಕಾಸು ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆಯನ್ನು ಬಲಪಡಿಸುವುದು
July 06th, 09:40 pm
ವಿಸ್ತೃತ ಬ್ರಿಕ್ಸ್ ಕುಟುಂಬದ ನನ್ನ ಸ್ನೇಹಿತರೊಂದಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಬಹಳ ಸಂತೋಷವಾಗಿದೆ. ಬ್ರಿಕ್ಸ್ ಔಟ್ರೀಚ್ ಶೃಂಗಸಭೆಯಲ್ಲಿ ಲ್ಯಾಟಿನ್ ಅಮೆರಿಕ, ಆಫ್ರಿಕಾ ಮತ್ತು ಏಷ್ಯಾದ ಸ್ನೇಹಪರ ರಾಷ್ಟ್ರಗಳೊಂದಿಗೆ ನನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ನೀಡಿದ ಅಧ್ಯಕ್ಷ ಲೂಲಾ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದ್ದರು
July 06th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಲೈ 6-7, 2025 ರಂದು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು. ಜಾಗತಿಕ ಆಡಳಿತದ ಸುಧಾರಣೆ, ಗ್ಲೋಬಲ್ ಸೌತ್ ನ (ದಕ್ಷಿಣದ ದೇಶಗಳ) ಧ್ವನಿಯನ್ನು ಹೆಚ್ಚಿಸುವುದು, ಶಾಂತಿ ಮತ್ತು ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಅಭಿವೃದ್ಧಿ ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಬ್ರಿಕ್ಸ್ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳ ಕುರಿತು ನಾಯಕರು ಫಲಪ್ರದ ಚರ್ಚೆಗಳನ್ನು ನಡೆಸಿದರು. ಪ್ರಧಾನಮಂತ್ರಿಯವರು, ಬ್ರೆಜಿಲ್ ಅಧ್ಯಕ್ಷರ ಆತ್ಮೀಯ ಆತಿಥ್ಯಕ್ಕೆ ಹಾಗೂ ಶೃಂಗಸಭೆಯ ಯಶಸ್ವಿ ಆಯೋಜನೆಗೆ ಧನ್ಯವಾದಗಳನ್ನು ಅರ್ಪಿಸಿದರು.ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 02nd, 07:34 am
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)
June 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಜಿ7 ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 03:05 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ವಿಸ್ತಾರವಾದ ಮತ್ತು ಹೃತ್ಪೂರ್ವಕ ಸಂಭಾಷಣೆಗಳನ್ನು ನಡೆಸಿದರು. ಜಾಗತಿಕ ದಕ್ಷಿಣದ ಉದ್ದೇಶವನ್ನು ಸಮರ್ಥಿಸುವ ಭಾರತದ ಅಚಲ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಶಸ್ತ್ರಚಿಕಿತ್ಸೆಯ ನಂತರ ಬ್ರೆಜಿಲ್ ಅಧ್ಯಕ್ಷರು ಉತ್ತಮ ಆರೋಗ್ಯವನ್ನು ಹೊಂದಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿಯವರಿಂದ ಹಾರೈಕೆ
December 12th, 09:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬ್ರೆಜಿಲ್ ಅಧ್ಯಕ್ಷರಾದ ಲುಲಾ ಡಾ ಸಿಲ್ವಾ ಅವರು ಶಸ್ತ್ರಚಿಕಿತ್ಸೆಯ ನಂತರ ಉತ್ತಮ ಆರೋಗ್ಯವನ್ನು ಹೊಂದಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.ಪ್ರಧಾನಮಂತ್ರಿ ಅವರಿಂದ ಬ್ರೆಜಿಲ್ ಅಧ್ಯಕ್ಷರ ಭೇಟಿ
November 20th, 08:05 pm
ರಿಯೊ ಡಿ ಜನೈರೊದಲ್ಲಿ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ನವೆಂಬರ್ 19 ರಂದು ಭೇಟಿಯಾದರು. ಅಧ್ಯಕ್ಷ ಲುಲಾ ಅವರ ಆತಿಥ್ಯಕ್ಕಾಗಿ ಪ್ರಧಾನಮಂತ್ರಿಗಳು ಧನ್ಯವಾದ ಅರ್ಪಿಸಿ ಬ್ರೆಜಿಲ್ನ ಜಿ-20 ಮತ್ತು ಐ ಬಿ ಎಸ್ ಎ ಅಧ್ಯಕ್ಷತೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು. ಬಡತನ ಮತ್ತು ಹಸಿವಿನ ವಿರುದ್ಧ ಜಾಗತಿಕ ಒಕ್ಕೂಟವನ್ನು ಸ್ಥಾಪಿಸುವ ಬ್ರೆಜಿಲಿಯನ್ ಉಪಕ್ರಮವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಅದಕ್ಕೆ ಭಾರತದ ದೃಢ ಬೆಂಬಲವನ್ನು ತಿಳಿಸಿದರು. ಜಿ 20 ತ್ರಿ ಸದಸ್ಯ ರಾಷ್ಟ್ರವಾಗಿ, ಜಾಗತಿಕ ದಕ್ಷಿಣದ ಒಳಿತಿಗೆ ಆದ್ಯತೆ ನೀಡಿರುವ ಸುಸ್ಥಿರ ಅಭಿವೃದ್ಧಿ ಮತ್ತು ಜಾಗತಿಕ ಆಡಳಿತ ಸುಧಾರಣೆಯ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ನ ಜಿ 20 ಕಾರ್ಯಸೂಚಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು, ಮುಂದಿನ ವರ್ಷ ಬ್ರಿಕ್ಸ್ ಮತ್ತು ಸಿಒಪಿ 30ರ ಬ್ರೆಜಿಲ್ ನ ನಾಯಕತ್ವಕ್ಕಾಗಿ ಅವರು ಶುಭ ಕೋರಿದರು ಮತ್ತು ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಧಾನಿ ಭರವಸೆ ನೀಡಿದರು."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.