ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 11:45 am
ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 28th, 11:30 am
ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿ ಅವರು ನವೆಂಬರ್ 25 ರಂದು ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ
November 24th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.