ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 01st, 12:00 pm
ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
December 11th, 10:29 am
ಇಂದು ಮಹಾಕವಿ ಶ್ರೀ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸುಬ್ರಮಣ್ಯ ಭಾರತಿ ಅವರ ವಚನಗಳು ಧೈರ್ಯವನ್ನು ಹುಟ್ಟುಹಾಕಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಸುಬ್ರಹ್ಮಣ್ಯ ಭಾರತಿ ಅವರು, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅವರ ಕೊಡುಗೆಗಳು ಅಪ್ರತಿಮವಾಗಿವೆ ಎಂದು ಹೇಳಿದ್ದಾರೆ,