ಪ್ರಧಾನಮಂತ್ರಿ ಅವರನ್ನು ಭೇಟಿಯಾದ 2024ನೇ ಬ್ಯಾಚ್‌ನ ಐ.ಎಫ್.ಎಸ್ ಅಧಿಕಾರಿ ತರಬೇತಿದಾರರು
August 19th, 08:34 pm
ಭಾರತೀಯ ವಿದೇಶಾಂಗ ಸೇವೆ (ಐ.ಎಫ್.ಎಸ್)ಯ 2024ರ ಬ್ಯಾಚ್ ನ ಅಧಿಕಾರಿ ತರಬೇತಿದಾರರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅವರ 7, ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾದರು. 2024ರ ಈ ಬ್ಯಾಚ್‌ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ 33 ಐ.ಎಫ್.ಎಸ್ ಅಧಿಕಾರಿ ತರಬೇತಿದಾರರಿದ್ದಾರೆ.ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಮಂತ್ರಿಗೆ ರಾಮ ಮಂದಿರದ ಪ್ರತಿರೂಪ ಮತ್ತು ಪವಿತ್ರ ಜಲ ಉಡುಗೊರೆಯಾಗಿ ನೀಡಿದ ಪ್ರಧಾನಮಂತ್ರಿ
July 04th, 08:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಗೌರವಾರ್ಥವಾಗಿ ಆಯೋಜಿಸಲಾದ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರಿಗೆ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ, ಅವರು ಸರಯು ನದಿಯಿಂದ ಮತ್ತು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಸಮರ್ಪಿಸಿದರು.ಬವಾಲಿಯಾಲಿ ಧಾಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 20th, 04:35 pm
ಮಹಂತ್ ಶ್ರೀ ರಾಮ್ ಬಾಪು ಜಿ, ಸಮಾಜದ ಗೌರವಾನ್ವಿತ ಸದಸ್ಯರೆ ಮತ್ತು ಇಲ್ಲಿ ನೆರೆದಿರುವ ಲಕ್ಷಾಂತರ ಶ್ರದ್ಧಾಭಕ್ತಿಯುಳ್ಳ ಸಹೋದರ ಸಹೋದರಿಯರೆ - ನಮಸ್ಕಾರ ಮತ್ತು ಜೈ ಠಾಕುರ್!ಬವಾಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
March 20th, 04:30 pm
ಗುಜರಾತ್‌ನ ಭರ್ವಾಡ್ ಸಮುದಾಯದ ಬವಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ಮಹಾಂತ ಶ್ರೀ ರಾಮ್ ಬಾಪು ಜಿ, ಸಮುದಾಯದ ಮುಖಂಡರು ಮತ್ತು ಸಾವಿರಾರು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ ಮತ್ತು ಈ ಸಂಪ್ರದಾಯಗಳನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಸಂತರು ಮತ್ತು ಮಹಾಂತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ, ಐತಿಹಾಸಿಕ ಮಹಾಕುಂಭದ ಅಪಾರ ಸಂತೋಷ ಮತ್ತು ಹೆಮ್ಮೆಯನ್ನು ಪ್ರಸ್ತಾಪಿಸಿದರು. ಈ ಪವಿತ್ರ ಕಾರ್ಯಕ್ರಮದ ಸಮಯದಲ್ಲಿ ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಿ ಗೌರವಿಸಿದ ಮಹತ್ವದ ಸಂದರ್ಭವನ್ನು ಪ್ರಸ್ತಾಪಿಸಿದರು. ಇದು ಒಂದು ಸ್ಮರಣೀಯ ಸಾಧನೆ ಮತ್ತು ಎಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ಸಮುದಾಯದ ಕುಟುಂಬಗಳಿಗೆ ಮಹಾಂತ ಶ್ರೀ ರಾಮ್ ಬಾಪು ಜಿ ಅವರ ಕೊಡುಗೆಗಳು ಮತ್ತು ಸಾಧನೆಗಳನ್ನು ಆಚರಿಸುವ ಸಂದರ್ಭದಲ್ಲಿ ಅವರು ಶುಭಾಶಯಗಳನ್ನು ತಿಳಿಸಿದರು.ಮಹಾಕುಂಭ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
March 18th, 01:05 pm
ಪ್ರಯಾಗ್ರಾಜ್ ನಲ್ಲಿ ನಡೆದ ಭವ್ಯ ಮಹಾಕುಂಭದ ಬಗ್ಗೆ ಹೇಳಿಕೆ ನೀಡಲು ನಾನು ಇಲ್ಲಿದ್ದೇನೆ. ಈ ಗೌರವಾನ್ವಿತ ಸದನದ ಮೂಲಕ, ಮಹಾಕುಂಭವನ್ನು ಯಶಸ್ವಿಗೊಳಿಸಿದ ಲಕ್ಷಾಂತರ ದೇಶವಾಸಿಗಳಿಗೆ ನನ್ನ ವಂದನೆಗಳನ್ನು ಸಲ್ಲಿಸುತ್ತೇನೆ. ಮಹಾಕುಂಭದ ಯಶಸ್ಸನ್ನು ಖಚಿತಪಡಿಸಿಕೊಳ್ಳುವಲ್ಲಿ ಅನೇಕ ವ್ಯಕ್ತಿಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ನಾನು ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರನ್ನು ಅಭಿನಂದಿಸುತ್ತೇನೆ. ದೇಶದಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್ ರಾಜ್ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಮಹಾ ಕುಂಭ ಮೇಳ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 18th, 12:10 pm
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಯಶಸ್ವಿಯಾಗಿ ಸಮಾರೋಪಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಮಹಾಕುಂಭದ ಅದ್ಧೂರಿ ಯಶಸ್ಸಿಗೆ ಕಾರಣರಾದ ದೇಶದ ಅಸಂಖ್ಯಾತ ನಾಗರಿಕರಿಗೆ ಪ್ರಧಾನಿ ತಮ್ಮ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು. ಮಹಾಕುಂಭವನ್ನು ಯಶಸ್ವಿಗೊಳಿಸುವಲ್ಲಿ ವಿವಿಧ ವ್ಯಕ್ತಿಗಳು ಮತ್ತು ಗುಂಪುಗಳ ಸಾಮೂಹಿಕ ಕೊಡುಗೆಗಳು ಮಹತ್ತರವಾಗಿವೆ. ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರ ಪ್ರಯತ್ನಗಳನ್ನು ಅವರು ಗುರುತಿಸಿದರು ಮತ್ತು ಶ್ಲಾಘಿಸಿದರು. ದೇಶಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್ ನಾಗರಿಕರ ಅಮೂಲ್ಯ ಬೆಂಬಲ ಮತ್ತು ಪರಿಶ್ರಮಕ್ಕಾಗಿ ಶ್ರೀ ಮೋದಿ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಮಹಾಕುಂಭ ಮೇಳ ಮುಕ್ತಾಯದ ಬಳಿಕ ಗುಜರಾತ್‌ನ ಸೋಮನಾಥ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
March 02nd, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್‌ನಲ್ಲಿ ಮಹಾಕುಂಭ ಮುಕ್ತಾಯದ ನಂತರ ಗುಜರಾತ್‌ನ ಸೋಮನಾಥ ಮಂದಿರಕ್ಕೆ ಭೇಟಿ ನೀಡಿದರು. ದೇವಾಲಯವು ನಮ್ಮ ಸಂಸ್ಕೃತಿಯ ಕಾಲಾತೀತ ಪರಂಪರೆ ಮತ್ತು ಧೈರ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಅವರು ಹೇಳಿದರು.ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 06:11 pm
ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು
February 23rd, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.The people of Delhi have suffered greatly because of AAP-da: PM Modi during Mera Booth Sabse Mazboot programme
January 22nd, 01:14 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.PM Modi Interacts with BJP Karyakartas Across Delhi under Mera Booth Sabse Mazboot via NaMo App
January 22nd, 01:00 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 14th, 02:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 13th, 12:30 pm
ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
January 13th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
December 12th, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್‌ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ ಅವರು ಪ್ರಯಾಗ್‌ರಾಜ್‌ನಲ್ಲಿ 5,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.