ಮಹರ್ಷಿ ದಯಾನಂದ ಸರಸ್ವತಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 12th, 10:17 am
ಮಹರ್ಷಿ ದಯಾನಂದ ಸರಸ್ವತಿ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣವನ್ನು ಉತ್ತೇಜಿಸುವಲ್ಲಿ ಮಾತ್ರವಲ್ಲದೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಶ್ರೀಮಂತಗೊಳಿಸುವಲ್ಲಿಯೂ ಅವರು ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದರು. ಸಾಮಾಜಿಕ ಸುಧಾರಣೆಗಾಗಿ ಅವರ ಪ್ರಯತ್ನಗಳು ದೇಶದ ಜನರಿಗೆ ಸದಾ ಸ್ಫೂರ್ತಿಯ ಮೂಲವಾಗಿ ಮುಂದುವರಿಯುತ್ತವೆ ಎಂದು ಶ್ರೀ ಮೋದಿ ಅವರು ಹೇಳಿದರು.ವೇದಗಳ ಕಾಲಾತೀತ ಬುದ್ಧಿವಂತಿಕೆಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
February 12th, 08:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೇದಗಳ ಕಾಲಾತೀತ ಬುದ್ಧಿವಂತಿಕೆಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.ಮಹರ್ಷಿ ದಯಾನಂದ ಸರಸ್ವತಿ ಜನ್ಮ ದಿನಾಚರಣೆಗೆ ಪ್ರಧಾನಮಂತ್ರಿ ಗೌರವ ನಮನ
February 12th, 02:24 pm
ಮಹಾನ್ ಚಿಂತಕ, ಸಾಮಾಜಿಕ ಸುಧಾರಕ ಮತ್ತು ಉತ್ಕಟ ರಾಷ್ಟ್ರೀಯವಾದಿ ಮಹರ್ಷಿ ದಯಾನಂದ ಸರಸ್ವತಿ ಅವರಿಗೆ ಜನ್ಮ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.