ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
February 13th, 06:55 pm
ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 13th, 06:30 pm
ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
January 30th, 07:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು. ಬಾಪೂ ಅವರ ಪ್ರಯತ್ನಗಳು ನಮ್ಮ ಸ್ವಾತಂತ್ರ್ಯ ಹೋರಾಟದ ದಿಕ್ಕನ್ನು ಮರುರೂಪಗೊಳಿಸಿವೆ ಮತ್ತು ಭಾರತದ ಪ್ರಯಾಣದ ಮೇಲೆ ಗಾಢವಾದ ಗುರುತು ಬಿಟ್ಟಿವೆ, ಅದು ತಲೆಮಾರಿನಿಂದ ತಲೆಮಾರಿಗೆ ಇನ್ನೂ ಅನುಭವಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.ರಾಜ್‌ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು
January 30th, 01:54 pm
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಪ್ರಧಾನಮಂತ್ರಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಗೌರವ ನಮನ ಸಲ್ಲಿಸಿದರು
January 30th, 10:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿದರು. ಬಾಪು ಅವರು ಯಾವಾಗಲೂ ಸ್ವದೇಶಿಯ ಮೇಲೆ ಬಲವಾದ ಒತ್ತು ನೀಡುತ್ತಿದ್ದರು, ಇದು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತಕ್ಕಾಗಿ ನಮ್ಮ ಸಂಕಲ್ಪದ ಮೂಲಭೂತ ಆಧಾರಸ್ತಂಭವೂ ಆಗಿದೆ. ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ದೇಶದ ಜನರನ್ನು ಕರ್ತವ್ಯದ ಹಾದಿಯಲ್ಲಿ ನಡೆಯಲು ಸದಾ ಪ್ರೇರೇಪಿಸುತ್ತಲೇ ಇರುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಬಾಪು ಅವರ ಅಹಿಂಸೆಯ ಸಂದೇಶದ ಮಹತ್ವವನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
January 30th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೂಜ್ಯ ಬಾಪು ಅವರು ಮಾನವೀಯತೆಯ ರಕ್ಷಣೆಗಾಗಿ ಅಹಿಂಸೆಗೆ ಒತ್ತು ನೀಡಿರುವುದನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:ಪ್ರಧಾನಿ ಮೋದಿ, ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು
January 12th, 03:04 pm
ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅವರು ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 08th, 12:30 pm
ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
December 08th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.