ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
June 03rd, 01:04 pm
ಇಂದು ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಅತ್ಯಂತ ದುಃಖಕರವೆಂದು ಬಣ್ಣಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸಿದ್ದಾರೆ. ಅವಘಡದಿಂದ ಸಂತ್ರಸ್ತರಾದವರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.