ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ

July 11th, 08:06 am

ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.

ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ

July 11th, 08:03 am

ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ

July 11th, 07:59 am

ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ಫಲಿತಾಂಶಗಳ ಪಟ್ಟಿ

July 09th, 12:34 pm

ಭದ್ರತೆಯ ಮೇಲಿನ ಅಸ್ತಿತ್ವದಲ್ಲಿರುವ ಜಂಟಿ ಘೋಷಣೆಯನ್ನು (2009) ನವೀಕರಿಸುತ್ತದೆ. ಇದು ಪಡೆಗಳ ಪರಸ್ಪರ ಕಾರ್ಯಾಚರಣೆ, ಸಾಮರ್ಥ್ಯ ನಿರ್ಮಾಣ, ಕಡಲ ವಲಯ, ರಕ್ಷಣಾ ಕೈಗಾರಿಕಾ ಸಹಯೋಗ, ಸೈಬರ್ ಭದ್ರತೆ ಮತ್ತು ತಂತ್ರಜ್ಞಾನ, ಭಯೋತ್ಪಾದನೆ ನಿಗ್ರಹ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಮತ್ತು UNCLOS, ಆಸಿಯಾನ್, ಪಿಐಎಫ್, ಐ ಒ ಆರ್‌ ಎ ಗಳಲ್ಲಿ ಏಕೀಕೃತ ವಿಧಾನವನ್ನು ಸಹಕಾರದ ಕ್ಷೇತ್ರಗಳಾಗಿ ಗುರುತಿಸುತ್ತದೆ.

ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 11:47 pm

ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!

ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

July 07th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.

India-Indonesia Joint Statement on the State Visit by Prime Minister of India to Indonesia

July 07th, 05:15 pm

At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 07th, 11:21 am

2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.

ಫಲಿತಾಂಶಗಳ ಪಟ್ಟಿ: 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್ ಪ್ರಧಾನಮಂತ್ರಿಯವರ ಭಾರತ ಭೇಟಿ

July 02nd, 10:39 pm

ಸೆಮಿಕಂಡಕ್ಟರ್‌ಗಳು, ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆ, ಶುದ್ಧ ಇಂಧನ ಮತ್ತು ಔಷಧಗಳು ಸೇರಿದಂತೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಯೋಜನೆ ಆಧಾರಿತ ಸಹಯೋಗವನ್ನು ಉತ್ತೇಜಿಸುತ್ತದೆ. ಭಾರತ-ಜಪಾನ್‌ ಫ್ಯಾಕ್ಟ್ ಶೀಟ್‌ 2.0 ಈ ನಿರ್ಣಾಯಕ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಭಾರತ-ಜಪಾನ್‌ ಜಿ2ಜಿ ಮತ್ತು ಬಿ 2 ಬಿ ಕಾರ್ಯಕ್ರಮಗಳನ್ನು ಸೆರೆಹಿಡಿಯುತ್ತದೆ.

16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ

July 02nd, 10:22 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.

ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 21st, 12:51 pm

ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು

June 21st, 12:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್‌ಎಸ್‌ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.

ಸಿ.ಎಂ.ಎ ಸಿ.ಜಿ.ಎಂ ಅಧ್ಯಕ್ಷರು ಮತ್ತು ಸಿ.ಇ.ಒ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ ಮತ್ತು ಸಹಯೋಗದ ಅವಕಾಶಗಳ ಕುರಿತು ಚರ್ಚೆ ನಡೆಸಿದ ಪ್ರಧಾನಮಂತ್ರಿ

June 18th, 06:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿ.ಎಂ.ಎ ಸಿ.ಜಿ.ಎಂ (CMA CGM) ನ ಅಧ್ಯಕ್ಷರಾದ ಶ್ರೀ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ, ಜಾಗತಿಕ ಹಡಗು ಪ್ರವೃತ್ತಿಗಳು ಮತ್ತು ಭಾರತದ ವೇಗವಾಗಿ ಬೆಳೆಯುತ್ತಿರುವ ಕಡಲ ವಲಯದಲ್ಲಿ ಉದಯೋನ್ಮುಖ ಅವಕಾಶಗಳ ಕುರಿತು ಫಲಪ್ರದ ಚರ್ಚೆ ನಡೆಸಿದರು.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ

June 04th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 23rd, 11:15 am

ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.