ಪ್ರಧಾನಮಂತ್ರಿ ಜನವರಿ 11 ರಂದು ರಾಜ್‌ಕೋಟ್‌ಗೆ ಭೇಟಿ
January 09th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 11 ರಂದು ರಾಜ್‌ಕೋಟ್‌ಗೆ ಭೇಟಿ ನೀಡಲಿದ್ದಾರೆ ಮತ್ತು ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಅವರು ಸಮ್ಮೇಳನದಲ್ಲಿ ವ್ಯಾಪಾರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಆನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್‌ಕೋಟ್‌ನ ಮಾರ್ವಾಡಿ ವಿಶ್ವವಿದ್ಯಾಲಯದಲ್ಲಿ ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು 14 ಗ್ರೀನ್‌ಫೀಲ್ಡ್ ಸ್ಮಾರ್ಟ್ ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಜಿಐಡಿಸಿ) ಎಸ್ಟೇಟ್‌ಗಳ ಅಭಿವೃದ್ಧಿಯನ್ನು ಘೋಷಿಸಲಿದ್ದಾರೆ ಮತ್ತು ರಾಜ್‌ಕೋಟ್‌ನಲ್ಲಿ ಜಿಐಡಿಸಿಯ ವೈದ್ಯಕೀಯ ಸಾಧನಗಳ ಪಾರ್ಕ್ ಅನ್ನು ಉದ್ಘಾಟಿಸಲಿದ್ದಾರೆ.