ಅಮ್ಮನ 70 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ವೀಡಿಯೊ ಸಂದೇಶದ ಕನ್ನಡ ಅನುವಾದ

October 03rd, 02:00 pm

ಸೇವೆ ಮತ್ತು ಆಧ್ಯಾತ್ಮಿಕತೆಯ ಪ್ರತೀಕವಾದ ಅಮ್ಮ, ಮಾತಾ ಅಮೃತಾನಂದಮಯಿ ಅವರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಅವರ ಎಪ್ಪತ್ತನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ನಾನು ಅಮ್ಮನಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಬಯಸುತ್ತೇನೆ. ಪ್ರಪಂಚದಾದ್ಯಂತ ಪ್ರೀತಿ ಮತ್ತು ಸಹಾನುಭೂತಿಯನ್ನು ಹರಡುವ ಅವರ ಧ್ಯೇಯವು ಬೆಳೆಯುತ್ತಲೇ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಅಮ್ಮನ ಅನುಯಾಯಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಇಲ್ಲಿ ನೆರೆದಿರುವ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಶುಭ ಹಾರೈಸುತ್ತೇನೆ.

​​​​​​​ ಅಮ್ಮ ಅವರ 70 ನೇ ಜನ್ಮ ದಿನ ಸಂದರ್ಭದಲ್ಲಿ ಭಾಷಣ ಮಾಡಿದ ಪ್ರಧಾನಮಂತ್ರಿ

October 03rd, 01:40 pm

ಅಮ್ಮ ಮಾತಾ ಅಮೃತಾನಂದಮಯಿ ಅವರ 70 ನೇ ಜನ್ಮ ದಿನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶ ನೀಡಿದರು.