ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ಭಾರತ-ಮಾರಿಷಸ್‌ ಜಂಟಿ ಘೋಷಣೆ; ವಿಶೇಷ ಆರ್ಥಿಕ ಪ್ಯಾಕೇಜ್

September 11th, 01:53 pm

ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಸನ್ಮಾನ್ಯ ಡಾ. ನವೀನ್‌ಚಂದ್ರ ರಾಮಗೂಲಂ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ಇಬ್ಬರೂ ಪ್ರಧಾನಮಂತ್ರಿ ಇಂದು ವಾರಣಾಸಿಯಲ್ಲಿ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ ವಿಷಯಗಳ ಕುರಿತು ತುಂಬಾ ಫಲಪ್ರದ ಸಮಾಲೋಚನೆಗಳನ್ನು ನಡೆಸಿದರು. ಮಾರಿಷಸ್ ಸರ್ಕಾರ ಸಲ್ಲಿಸಿದ ಮನವಿ ಆಧರಿಸಿ ಭಾರತ ಮತ್ತು ಮಾರಿಷಸ್ ಜಂಟಿಯಾಗಿ ಕಾರ್ಯಗತಗೊಳಿಸಲು ಈ ಕೆಳಗಿನ ಯೋಜನೆಗಳನ್ನು ತಾತ್ವಿಕವಾಗಿ ಒಪ್ಪಿಕೊಂಡಿವೆ.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 10th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.

79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದೆಲ್ಲೆಡೆಗಿನ ನಾಯಕರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು

August 15th, 07:26 pm

79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದೆಲ್ಲೆಡೆಗಿನ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದರು.

ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು

June 24th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 06th, 08:04 pm

ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.

ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 06th, 08:00 pm

ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.

ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 08th, 08:30 pm

ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ

April 08th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಮಹಾಕುಂಭ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

March 18th, 01:05 pm

ಪ್ರಯಾಗ್ರಾಜ್ ನಲ್ಲಿ ನಡೆದ ಭವ್ಯ ಮಹಾಕುಂಭದ ಬಗ್ಗೆ ಹೇಳಿಕೆ ನೀಡಲು ನಾನು ಇಲ್ಲಿದ್ದೇನೆ. ಈ ಗೌರವಾನ್ವಿತ ಸದನದ ಮೂಲಕ, ಮಹಾಕುಂಭವನ್ನು ಯಶಸ್ವಿಗೊಳಿಸಿದ ಲಕ್ಷಾಂತರ ದೇಶವಾಸಿಗಳಿಗೆ ನನ್ನ ವಂದನೆಗಳನ್ನು ಸಲ್ಲಿಸುತ್ತೇನೆ. ಮಹಾಕುಂಭದ ಯಶಸ್ಸನ್ನು ಖಚಿತಪಡಿಸಿಕೊಳ್ಳುವಲ್ಲಿ ಅನೇಕ ವ್ಯಕ್ತಿಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ನಾನು ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರನ್ನು ಅಭಿನಂದಿಸುತ್ತೇನೆ. ದೇಶದಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್ ರಾಜ್ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಮಹಾ ಕುಂಭ ಮೇಳ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 18th, 12:10 pm

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಯಶಸ್ವಿಯಾಗಿ ಸಮಾರೋಪಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಮಹಾಕುಂಭದ ಅದ್ಧೂರಿ ಯಶಸ್ಸಿಗೆ ಕಾರಣರಾದ ದೇಶದ ಅಸಂಖ್ಯಾತ ನಾಗರಿಕರಿಗೆ ಪ್ರಧಾನಿ ತಮ್ಮ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು. ಮಹಾಕುಂಭವನ್ನು ಯಶಸ್ವಿಗೊಳಿಸುವಲ್ಲಿ ವಿವಿಧ ವ್ಯಕ್ತಿಗಳು ಮತ್ತು ಗುಂಪುಗಳ ಸಾಮೂಹಿಕ ಕೊಡುಗೆಗಳು ಮಹತ್ತರವಾಗಿವೆ. ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರ ಪ್ರಯತ್ನಗಳನ್ನು ಅವರು ಗುರುತಿಸಿದರು ಮತ್ತು ಶ್ಲಾಘಿಸಿದರು. ದೇಶಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್ ನಾಗರಿಕರ ಅಮೂಲ್ಯ ಬೆಂಬಲ ಮತ್ತು ಪರಿಶ್ರಮಕ್ಕಾಗಿ ಶ್ರೀ ಮೋದಿ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಗಂಗಾ ತಲಾವ್ ಗೆ ಪ್ರಧಾನಮಂತ್ರಿ ಭೇಟಿ

March 12th, 05:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನ ಪವಿತ್ರ ಗಂಗಾ ತಲಾವ್‌ ಗೆ ಭೇಟಿ ನೀಡಿದರು. ಅಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು ಮತ್ತು ಭಾರತದ ಪವಿತ್ರ ತ್ರಿವೇಣಿ ಸಂಗಮದ ಪುಣ್ಯ ತೀರ್ಥವನ್ನು ಅರ್ಪಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ​​​​​​​ ಶ್ರೀ ನವೀನಚಂದ್ರ ರಾಮಗೂಲಮ್‌ ಅವರು ಮಾರಿಷಸ್‌ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು

March 12th, 03:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಶ್ರೀ ನವೀನಚಂದ್ರ ರಾಮಗೂಲಮ್ ಅವರು ಇಂದು ಮಾರಿಷಸ್‌ ನ ರೆಡ್ಯೂಟ್‌ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ-ಮಾರಿಷಸ್ ಅಭಿವೃದ್ಧಿ ಸಹಭಾಗಿತ್ವದ ಅಡಿಯಲ್ಲಿ ಜಾರಿಗೆ ತರಲಾದ ಈ ಮಹತ್ವದ ಯೋಜನೆಯು ಸಾಮರ್ಥ್ಯ ವೃದ್ಧಿಗೆ ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ದಿನಾಚರಣೆಯಲ್ಲಿ ಮಾರಿಷಸ್‌ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದರು

March 12th, 03:12 pm

ಸಮಾರಂಭದಲ್ಲಿ, ಮಾರಿಷಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಧರ್ಮಬೀರ್ ಗೋಖೂಲ್ ಅವರು ಪ್ರಧಾನಿ ಮೋದಿಯವರಿಗೆ ಮಾರಿಷಸ್‌ ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಇಂಡಿಯನ್ ಓಷನ್ (ಜಿ.ಸಿ.ಎಸ್.ಕೆ) ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತದ ನಾಯಕರೊಬ್ಬರು ಈ ಗೌರವಕ್ಕೆ ಪಾತ್ರರಾಗುತ್ತಿರುವುದು ಇದೇ ಮೊದಲು.

ಗ್ರ್ಯಾಂಡ್‌ ಕಮಾಂಡರ್‌ ಆಫ್‌ ದಿ ಆರ್ಡರ್‌ ಆಫ್‌ ದಿ ಸ್ಟಾರ್‌ ಮತ್ತು ಕೀ ಆಫ್‌ ಇಂಡಿಯನ್ ಓಷನ್‌ (ಜಿ ಸಿ ಎಸ್ ಕೆ ) ಗೌರವ ಪಡೆದ ಪ್ರಧಾನಮಂತ್ರಿಯವರ ಸ್ವೀಕಾರದ ನುಡಿಗಳು

March 12th, 03:00 pm

ಮಾರಿಷಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಇದು ಕೇವಲ ನನಗೆ ಸಂದಿರುವ ಗೌರವವಲ್ಲ. ಇದು 1.4 ಶತಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಭಾರತ ಮತ್ತು ಮಾರಿಷಸ್ ನಡುವಿನ ಶತಮಾನಗಳ ಹಳೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಬಾಂಧವ್ಯದ ಗೌರವ ಸೂಚಕವಾಗಿದೆ. ಇದು ಪ್ರಾದೇಶಿಕ ಶಾಂತಿ, ಪ್ರಗತಿ, ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಗೆ ನಮ್ಮ ಹಂಚಿತ ಬದ್ಧತೆಯ ಗುರುತಿಸುವಿಕೆ ಹಾಗೂ ಜಾಗತಿಕ ದಕ್ಷಿಣದ ಹಂಚಿತ ಭರವಸೆಗಳು ಮತ್ತು ಆಕಾಂಕ್ಷೆಗಳ ಸಂಕೇತವಾಗಿದೆ. ನಾನು ಈ ಪ್ರಶಸ್ತಿಯನ್ನು ಪೂರ್ಣ ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಶತಮಾನಗಳ ಹಿಂದೆ ಭಾರತದಿಂದ ಮಾರಿಷಸ್‌ಗೆ ಬಂದ ನಿಮ್ಮ ಪೂರ್ವಜರಿಗೆ ಮತ್ತು ಅವರ ಎಲ್ಲಾ ಪೀಳಿಗೆಗೆ ನಾನು ಅದನ್ನು ಅರ್ಪಿಸುತ್ತೇನೆ. ತಮ್ಮ ಕಠಿಣ ಪರಿಶ್ರಮದ ಮೂಲಕ ಅವರು ಮಾರಿಷಸ್ ಅಭಿವೃದ್ಧಿಯಲ್ಲಿ ಸುವರ್ಣ ಅಧ್ಯಾಯವನ್ನು ಬರೆದಿದ್ದಾರೆ ಮತ್ತು ಅದರ ರೋಮಾಂಚಕ ವೈವಿಧ್ಯತೆಗೆ ಕೊಡುಗೆ ನೀಡಿದ್ದಾರೆ.

ವ್ಯೂಹಾತ್ಮಕ ಪಾಲುದಾರಿಕೆ ವೃದ್ಧಿಗಾಗಿ ಭಾರತ-ಮಾರಿಷಸ್ ಜಂಟಿ ದೂರದೃಷ್ಟಿ

March 12th, 02:13 pm

ಗೌರವಾನ್ವಿತ ಮಾರಿಷಸ್ ಪ್ರಧಾನಿ ಡಾ. ನವೀನ್ ಚಂದ್ರ ರಾಮ್‌ಗೂಲಮ್, ಜಿಸಿಎಸ್‌ಕೆ, ಎಫ್‌ಆರ್‌ಸಿಪಿ ಮತ್ತು ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಮಾರ್ಚ್ 11ರಿಂದ 12ರವರೆಗೆ ಮಾರಿಷಸ್‌ಗೆ ಪ್ರಧಾನಿ ಮೋದಿ ಅವರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾರಿಷಸ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯ ಬಗ್ಗೆ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.

ಮಾರಿಷಸ್ ಗೆ ಪ್ರಧಾನಮಂತ್ರಿಯವರ ಭೇಟಿ: ಫಲಪ್ರದತೆಯ ವಿವರ

March 12th, 01:56 pm

ಗಡಿಯಾಚೆಗಿನ ವಹಿವಾಟುಗಳಿಗೆ ಸ್ಥಳೀಯ ಕರೆನ್ಸಿಗಳ (ಭಾರತೀಯ ರೂಪಾಯಿ ಅಥವಾ ಮಾರಿಷಿಯನ್‌ ರೂಪಾಯಿ) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನೀತಿ ಚೌಕಟ್ಟು ರೂಪಿಸಲು ʻಭಾರತೀಯ ರಿಸರ್ವ್ ಬ್ಯಾಂಕ್ʼ ಮತ್ತು ʻಬ್ಯಾಂಕ್ ಆಫ್ ಮಾರಿಷಸ್ʼ ನಡುವೆ ಒಪ್ಪಂದ.

ಭಾರತ - ಮಾರಿಷಸ್ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ

March 12th, 12:30 pm

140 ಕೋಟಿ ಭಾರತೀಯರ ಪರವಾಗಿ, ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಮತ್ತೊಮ್ಮೆ ಮಾರಿಷಸ್‌ ಗೆ ಭೇಟಿ ನೀಡುತ್ತಿರುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ. ಈ ಗೌರವಕ್ಕಾಗಿ ಪ್ರಧಾನಿ ನವೀನಚಂದ್ರ ರಾಮಗೂಲಮ್ ಮತ್ತು ಮಾರಿಷಸ್ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.