List of Outcomes: Prime Minister’s visit to Indonesia
July 07th, 01:03 pm
The state visit of PM Modi to Indonesia resulted in the signing of 14 agreements, strengthening India-Indonesia cooperation across key sectors. Major announcements include the restoration of Prambanan Temple, the Tagore-Dewantara Year of Cultural and Educational Diplomacy, an IIM Bangalore campus in Indonesia and the launch of the Indonesia Open Network in India.ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರಿಗೆ ಶುಭ ಕೋರಿದ ಪ್ರಧಾನಮಂತ್ರಿ
July 01st, 12:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ದೇಶಾದ್ಯಂತದ ವೈದ್ಯರಿಗೆ ಶುಭ ಹಾರೈಸಿದರು ಮತ್ತು ರಾಷ್ಟ್ರದ ಪ್ರಗತಿಗಾಗಿ ಅವರ ಅಚಲ ಸೇವೆ, ಸಹಾನುಭೂತಿ ಮತ್ತು ಬದ್ಧತೆಗೆ ಕೃತಜ್ಞತೆ ಸಲ್ಲಿಸಿದರು.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಗುಣಮಟ್ಟದ ಆರೋಗ್ಯ ಸೇವೆಯನ್ನು ಹೆಚ್ಚು ಲಭ್ಯ ಮತ್ತು ಕೈಗೆಟಕುವಂತಾಗಿಸಲು ಕಳೆದ 12 ವರ್ಷಗಳಲ್ಲಿ ಮಾಡಿರುವ ಪ್ರಯತ್ನಗಳನ್ನು ವಿವರಿಸಿರುವ ಪ್ರಧಾನಮಂತ್ರಿ
June 14th, 01:27 pm
ಭಾರತದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕಳೆದ 12 ವರ್ಷಗಳಲ್ಲಿ ಶ್ರಮಿಸಲಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ. ಅತ್ಯಂತ ದುರ್ಬಲ ವರ್ಗದವರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಆಯುಷ್ಮಾನ್ ಭಾರತ್ ಯೋಜನೆಯು ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಣಾ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸತತ ಅವಧಿಗಳಿಗೆ ಅತ್ಯಂತ ದೀರ್ಘಕಾಲ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟದಿಂದ ನಿರ್ಣಯ ಅಂಗೀಕಾರ
June 10th, 01:50 pm
ಕೇಂದ್ರ ಸಚಿವ ಸಂಪುಟವು ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಜೂನ್ 10, 2026ರ ದಿನವನ್ನು ಭಾರತೀಯ ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿ ಗುರುತಿಸಲಾಗಿದ್ದು, ಶ್ರೀ ನರೇಂದ್ರ ಮೋದಿಯವರು ದೇಶದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಲಾಗಿದೆ. ಚುನಾಯಿತ ಪ್ರಧಾನಿಯಾಗಿ ಸತತ 4,399 ದಿನಗಳ ಕಾಲ ನಿರಂತರ ಸೇವೆ ಸಲ್ಲಿಸುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಅವರು ಶ್ರೀ ಜವಾಹರಲಾಲ್ ನೆಹರೂ ಅವರ ಹೆಸರಲ್ಲಿದ್ದ ಹಿಂದಿನ ದಾಖಲೆಯನ್ನು ಮೀರಿದ್ದಾರೆ. ನೆಹರೂ ಅವರು 1952 ರಿಂದ 1964 ರವರೆಗೆ ಸತತ 4,398 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭವು ಭಾರತದ ಪ್ರಜಾಪ್ರಭುತ್ವದ ಜಾಗೃತಿ, ಸಾರ್ವಜನಿಕರ ನಂಬಿಕೆ ಮತ್ತು ದೇಶದ ಜನರ ಭಾಗವಹಿಸುವಿಕೆಯ ಶಕ್ತಿಯ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಇದು 'ರಾಷ್ಟ್ರ ಮೊದಲು' ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯುವ ನಾಯಕನಿಗೆ ದೇಶದ ಜನತೆ ನೀಡಿದ ಅಭೂತಪೂರ್ವ ಬೆಂಬಲವನ್ನು ತೋರಿಸುತ್ತದೆ.Criminals who have been sheltered under TMC will be punished: PM Modi in Jadavpur, West Bengal
April 24th, 11:45 am
Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.Bengal’s industries and MSMEs have been destroyed under TMC: PM Modi in Dum Dum
April 24th, 11:35 am
Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.PM Modi ignites Dum Dum and Jadavpur with fiery addresses
April 24th, 11:30 am
Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 24th, 02:05 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರಿಂದ ಉಂಟಾಗುವ ಸನ್ನಿವೇಶಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇಂದು ನಾನು ಈ ಗಂಭೀರ ಪರಿಸ್ಥಿತಿಗಳ ಕುರಿತು ಸರ್ಕಾರದ ನಿಲುವು ಹಂಚಿಕೊಳ್ಳಲು ಸಂಸತ್ತಿನ ಮೇಲ್ಮನೆಯ ಮುಂದೆ ಮತ್ತು ನನ್ನ ಸಹ ನಾಗರಿಕರ ಮುಂದೆ ನಿಂತಿದ್ದೇನೆ. ಈ ಯುದ್ಧವು ಈಗ 3 ವಾರಗಳಿಗೂ ಹೆಚ್ಚು ಕಾಲದಿಂದ ಮುಂದುವರೆದಿದೆ. ಇದು ವಿಶ್ವಾದ್ಯಂತ ತೀವ್ರ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಭಾರತಕ್ಕೂ ಈ ಪರಿಸ್ಥಿತಿ ಚಿಂತಾಜನಕವಾಗಿದೆ. ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ. ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗಳು ಅಸ್ತವ್ಯಸ್ತಗೊಂಡಿವೆ. ಸುಮಾರು 1 ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಜೀವನೋಪಾಯ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಒಂದು ಪ್ರಮುಖ ಕಾಳಜಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅನೇಕ ಹಡಗುಗಳು ಸಿಲುಕಿಕೊಂಡಿವೆ, ಅದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಇದ್ದಾರೆ. ಇದು ಭಾರತಕ್ಕೂ ಗಂಭೀರ ಕಳವಳದ ವಿಷಯವಾಗಿದೆ. ಇಂತಹ ಭೀಕರ ಸಂದರ್ಭಗಳಲ್ಲಿ ಸಂಸತ್ತಿನ ಈ ಮೇಲ್ಮನೆಯಿಂದ ಶಾಂತಿ ಮತ್ತು ಸಂವಾದಕ್ಕಾಗಿ ಒಗ್ಗಟ್ಟಿನ ಧ್ವನಿ ಇಡೀ ಜಗತ್ತನ್ನು ತಲುಪುವುದು ಅತ್ಯಗತ್ಯವಾಗಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು
March 24th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸಿದ ಪರಿಸ್ಥಿತಿಯ ಕುರಿತು ಸರ್ಕಾರದ ನಿಲುವನ್ನು ಮಂಡಿಸಿದರು. ಮೂರು ವಾರಗಳಿಗೂ ಹೆಚ್ಚು ಕಾಲದಿಂದ ಭುಗಿಲೆದ್ದಿರುವ ಈ ಯುದ್ಧವು ಭಾರತದ ಮೇಲೆ ತೀವ್ರ ಆತಂಕಕಾರಿ ಪರಿಣಾಮಗಳನ್ನು ಬೀರುವ ಸೂಚನೆಗಳೊಂದಿಗೆ ತೀವ್ರ ಜಾಗತಿಕ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ ಎಂಬುದನ್ನು ತಿಳಿಸಿದ ಪ್ರಧಾನಮಂತ್ರಿ ಮೋದಿ ಅವರು, ಈ ಸಂಘರ್ಷವು ಭಾರತದ ವ್ಯಾಪಾರ ಮಾರ್ಗಗಳನ್ನು ಅಡ್ಡಿಪಡಿಸುತ್ತಿದೆ ಮತ್ತು ಪೆಟ್ರೋಲ್, ಡೀಸೆಲ್, ಅನಿಲ ಹಾಗೂ ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಕೆಲಸ ಮಾಡುತ್ತಿರುವುದರಿಂದ, ಅವರ ಸುರಕ್ಷತೆ ಮತ್ತು ಜೀವನೋಪಾಯವು ತೀವ್ರ ಕಳವಳದ ವಿಷಯವಾಗಿ ಮೂಡಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ, ಹಡಗುಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ಸದಸ್ಯರ ಬಗ್ಗೆಯೂ ಗಮನ ಸೆಳೆದರು. ಇಂತಹ ಗಂಭೀರ ಸಂದರ್ಭದಲ್ಲಿ, ಭಾರತ ಸಂಸತ್ತಿನ ಈ ಘನ ಮೇಲ್ಮನೆಯಿಂದ ಇಡೀ ಜಗತ್ತಿಗೆ ಶಾಂತಿ ಮತ್ತು ಸಂವಾದದ ಏಕೀಕೃತ ಧ್ವನಿ ಹೊರಹೊಮ್ಮುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಶ್ರೀ. ಮೋದಿ ಅವರು ದೃಢಪಡಿಸಿದರು.ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 23rd, 08:30 pm
ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಟಿವಿ9 ನೆಟ್‌ವರ್ಕ್ ಶೃಂಗಸಭೆ ಉದ್ದೇಶಿಸಿ ಭಾಷಣ
March 23rd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಭಾರತ ಮತ್ತು ವಿಶ್ವ' (India and the World) ಎಂಬ ವಿಷಯದ ಮೇಲೆ ನಡೆದ ಟಿವಿ9 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಭೂತಪೂರ್ವ ಮತ್ತು ಗಂಭೀರವಾದ ಜಾಗತಿಕ ಸಂದರ್ಭಗಳನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಈ ನಿರ್ಣಾಯಕ ಸಮಯದಲ್ಲಿ ವಿಚಾರ ವಿನಿಮಯಕ್ಕಾಗಿ ಪ್ರಮುಖ ವೇದಿಕೆಯನ್ನು ಸೃಷ್ಟಿಸಿದ್ದಕ್ಕಾಗಿ ಟಿವಿ9 ನೆಟ್ ವರ್ಕ್ ಅನ್ನು ಶ್ಲಾಘಿಸಿದರು. ಇಂದು ವಿಶ್ವವು ಸಾಗುತ್ತಿರುವ ಗಂಭೀರ ಪರಿಸ್ಥಿತಿಗಳು ಅಭೂತಪೂರ್ವ ಮತ್ತು ಅತ್ಯಂತ ಗಂಭೀರವಾಗಿವೆ ಮತ್ತು ಇವುಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗಾಗಿ ಅತ್ಯಂತ ಪ್ರಮುಖವಾದ ವೇದಿಕೆಯನ್ನು ಸೃಷ್ಟಿಸಿದೆ, ಎಂದು ಶ್ರೀ ಮೋದಿ ತಿಳಿಸಿದರು.ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 01st, 12:00 pm
ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ
February 09th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 09th, 01:00 pm
ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.