Prime Minister Narendra Modi to visit Kerala

January 22nd, 02:23 pm

PM Modi will visit Thiruvananthapuram, Kerala, on 23rd January to launch multiple developmental projects across key sectors, including rail connectivity, urban livelihoods, science and innovation, citizen-centric services and advanced healthcare. During the visit, he will flag off four new train services, including three Amrit Bharat Express trains and one passenger train and will disburse PM SVANidhi loans to one lakh beneficiaries, including street vendors from Kerala.

ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 19th, 08:11 pm

ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್‌ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

December 19th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.