ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ
June 28th, 11:30 am
‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.ಮಾರ್ಚ್ 13-14 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
March 12th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 13-14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಕೊಕ್ರಝಾರ್, ಗುವಾಹಟಿ ಮತ್ತು ಸಿಲ್ಚಾರ್‌ನಲ್ಲಿ ₹47,800 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ, ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ, ಶಿಲಾನ್ಯಾಸ ಮಾಡುತ್ತಾರೆ, ಹಾಗು ಭೂಮಿ ಪೂಜೆ ಮಾಡುತ್ತಾರೆ ಮತ್ತು ಹಸಿರು ನಿಶಾನೆ ತೋರಲಿದ್ದಾರೆ. .ಶಿಲ್ಲಾಂಗ್ ಕ್ಷೇತ್ರದ ಲೋಕಸಭಾ ಸಂಸದ ಡಾ. ರಿಕ್ಕಿ ಎ.ಜೆ. ಸಿಂಗ್‌ಕಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
February 20th, 09:31 am
ಶಿಲ್ಲಾಂಗ್‌ನ ಲೋಕಸಭಾ ಸದಸ್ಯರಾದ ಡಾ. ರಿಕ್ಕಿ ಎ.ಜೆ. ಸಿಂಗ್‌ಕಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದರು.ಮೇಘಾಲಯದ ಪೂರ್ವ ಜೈಂಟಿಯಾ ಗುಡ್ಡದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
February 05th, 08:36 pm
ಮೇಘಾಲಯದ ಪೂರ್ವ ಜೈಂಟಿಯಾ ಗುಡ್ಡದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ( ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಪ್ರಕಟಿಸಿದ್ದಾರೆ.ಮೇಘಾಲಯದ ಮುಖ್ಯಮಂತ್ರಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
January 29th, 08:27 pm
ಮೇಘಾಲಯದ ಮುಖ್ಯಮಂತ್ರಿಗಳಾದ ಶ್ರೀ ಕಾನ್ರಾಡ್ ಸಂಗ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ನಿರಂತರ ಪ್ರಯತ್ನ ಮತ್ತು ಪ್ರಗತಿಯ ಮನೋಭಾವವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಹಂಚಿಕೊಂಡಿದ್ದಾರೆ; ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ರಾಜ್ಯೋತ್ಸವದ ಶುಭಾಶಯಗಳನ್ನು ಸಹ ಅಲ್ಲಿನ ಜನತೆಗೆ ತಿಳಿಸಿದ್ದಾರೆ
January 21st, 09:28 am
ಮೂರು ಈಶಾನ್ಯ ರಾಜ್ಯಗಳು ತಮ್ಮ ರಾಜ್ಯೋತ್ಸವ ದಿನವನ್ನು ಆಚರಿಸುತ್ತಿರುವುದರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ಜನರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ.ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಅವರು ಶುಭಾಶಯ ಕೋರಿದ್ದಾರೆ
January 21st, 09:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನವಾದ ಇಂದು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
January 21st, 08:44 am
ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಮೇಘಾಲಯ ರಾಜ್ಯಪಾಲರಿಂದ ಪ್ರಧಾನಮಂತ್ರಿ ಭೇಟಿ
August 03rd, 10:05 pm
ಮೇಘಾಲಯದ ರಾಜ್ಯಪಾಲರಾದ ಶ್ರೀ. ಸಿ.ಎಚ್.ವಿಜಯ್ ಶಂಕರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಾರ್ಖಂಡ್ ಮುಖ್ಯಮಂತ್ರಿ
July 15th, 12:18 pm
ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಹೇಮಂತ್ ಸೊರೆನ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಮೇಘಾಲಯದ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು
January 21st, 09:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ರಾಜ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಆ ರಾಜ್ಯದ ಜನತೆಗೆ ಶುಭಾಶಯ ಕೋರಿದರು.“ನೀವು ನಿಮ್ಮ ಹಳ್ಳಿಯ ಮೋದಿ” ಮೇಘಾಲಯದ ರಿ ಭೋಯ್ ನ ಸಿಲ್ಮೆ ಮರಕ್ ಅವರ ಕಾರ್ಯಚಟುವಟಿಕೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಮಂತ್ರಿ
January 18th, 03:47 pm
ವಿಕಸಿತ ಭಾರತ ಸಂಕಲ್ಪ ಯಾತ್ರೆ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದರು. ದೇಶಾದ್ಯಂತ ಸಹಸ್ರಾರು ಮಂದಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಪ್ರತಿನಿಧಿಗಳು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ತ್ರಿಪುರಾದ ಖೋವಾಯಿ-ಹರಿನಾ ರಸ್ತೆಯ 135 ಕಿ.ಮೀ. ವಿಸ್ತರಣೆ ಮತ್ತು ಸುಧಾರಣೆಗೆ ಸಂಪುಟದ ಅನುಮೋದನೆ
December 27th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಭೆ, ತ್ರಿಪುರಾ ರಾಜ್ಯದಲ್ಲಿ ಒಟ್ಟು 134.913 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ-208ರ ಕಿ.ಮೀ 101.300 (ಖೋವಾಯಿ) ರಿಂದ ಕಿ.ಮೀ 236.213 (ಹರಿನಾ) ವರೆಗಿನ ರಸ್ತೆಯನ್ನು ಎರಡು ಪಥಗಳಾಗಿ ಅಭಿವೃದ್ಧಿಪಡಿಸಲು ಮತ್ತು ಅಗಲೀಕರಣ ಮಾಡಲು ತನ್ನ ಅನುಮೋದನೆ ನೀಡಿದೆ.ಪ್ರಧಾನಿ ಭೇಟಿ ಮಾಡಿದ ಮೇಘಾಲಯ ಮುಖ್ಯಮಂತ್ರಿ
December 14th, 04:28 pm
ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಸಂಗ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮೇಘಾಲಯದ ಅನಾನಸ್‌ಗಳು ದೇಶ-ವಿದೇಶಗಳಲ್ಲಿ ಅರ್ಹ ಮನ್ನಣೆ ಗಳಿಸುತ್ತಿರುವುದು ಸಂತೋಷದ ವಿಚಾರ: ಪ್ರಧಾನಿ ಮೋದಿ
August 19th, 11:10 am
ಮೇಘಾಲಯದ ಅನಾನಸ್‌ಗೆ ದೇಶ-ವಿದೇಶಗಳಲ್ಲಿ ಅರ್ಹ ಮನ್ನಣೆ ಸಿಗುತ್ತಿರುವುದನ್ನು ನೋಡಲು ಸಂತೋಷವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಮುಖ್ಯಮಂತ್ರಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಮತ್ತು ಮೇಘಾಲಯ ಸರ್ಕಾರದ ಸಚಿವರು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದರು.
August 08th, 04:30 pm
ಮೇಘಾಲಯದ ಮುಖ್ಯಮಂತ್ರಿ ಶ್ರೀ ಕೆ ಸಂಗ್ಮಾ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ಥಾಮಸ್ ಎ ಸಂಗ್ಮಾ ಮತ್ತು ಮೇಘಾಲಯ ಸರ್ಕಾರದ ಸಚಿವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಅಸ್ಸಾಂನ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 29th, 12:22 pm
ಅಸ್ಸಾಂ ರಾಜ್ಯಪಾಲ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಮುಖ್ಯಮಂತ್ರಿ ಭಾಯ್ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ಸದಸ್ಯರಾದ ಅಶ್ವಿನಿ ವೈಷ್ಣವ್ ಜೀ, ಸರ್ಬಾನಂದ ಸೋನೊವಾಲ್ ಜಿ, ರಾಮೇಶ್ವರ್ ತೆಲಿ ಜಿ, ನಿಸಿತ್ ಪ್ರಮಾಣಿಕ್ ಜಿ, ಜಾನ್ ಬಾರ್ಲಾ ಜೀ, ಇತರ ಎಲ್ಲ ಸಚಿವರು, ಸಂಸದರು, ಶಾಸಕರು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!