ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ

September 26th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.

ತಾಂತ್ರಿಕ ಶಿಕ್ಷಣದಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ಸಂಶೋಧನಾ ಸುಧಾರಣೆ (MERITE) ಯೋಜನೆಗೆ 4200 ಕೋಟಿ ರೂ.ಗಳ ಬಜೆಟ್ ಬೆಂಬಲಕ್ಕೆ ಸಂಪುಟದ ಅನುಮೋದನೆ

August 08th, 04:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 175 ಎಂಜಿನಿಯರಿಂಗ್ ಸಂಸ್ಥೆಗಳು ಮತ್ತು 100 ಪಾಲಿಟೆಕ್ನಿಕ್‌ಗಳನ್ನು ಒಳಗೊಂಡು 275 ತಾಂತ್ರಿಕ ಸಂಸ್ಥೆಗಳಲ್ಲಿ 'ತಾಂತ್ರಿಕ ಶಿಕ್ಷಣದಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ಸಂಶೋಧನಾ ಸುಧಾರಣೆ' (MERITE) ಯೋಜನೆಯನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ. ರಾಷ್ಟ್ರೀಯ ಶೈಕ್ಷಣಿಕ ನೀತಿ-2020 (NEP-2020) ಗೆ ಅನುಗುಣವಾಗಿ ಮಧ್ಯಪ್ರವೇಶಗಳನ್ನು ಅನುಷ್ಠಾನಗೊಳಿಸುವ ಮೂಲಕ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ತಾಂತ್ರಿಕ ಶಿಕ್ಷಣದಲ್ಲಿ ಗುಣಮಟ್ಟ, ಸಮಾನತೆ ಮತ್ತು ಆಡಳಿತವನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ.