Rashtra Prerna Sthal gives the message that every step, every effort must be dedicated to nation-building: PM Modi in Lucknow
December 25th, 06:16 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.Prime Minister Shri Narendra Modi inaugurates Rashtra Prerna Sthal in Lucknow, UP
December 25th, 05:23 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.ಪುಣೆ ಮೆಟ್ರೋ ರೈಲು ಯೋಜನೆಯ 2ನೇ ಹಂತದ ಖರಾಡಿ-ಖಡಕವಾಸಲಾ (ಮಾರ್ಗ 4) ಮತ್ತು ನಾಲ್ ಸ್ಟಾಪ್-ವಾರ್ಜೆ-ಮಾಣಿಕ್ ಬಾಗ್ (ಮಾರ್ಗ 4ಎ) ಗೆ ಸಂಪುಟ ಅನುಮೋದನೆ
November 26th, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಪುಣೆ ಮೆಟ್ರೋ ರೈಲು ಯೋಜನೆಯ 2ನೇ ಹಂತದ ಅಡಿಯಲ್ಲಿ ಮಾರ್ಗ 4 (ಖರಾಡಿ–ಹಡಪ್ಸರ್–ಸ್ವರ್ಗೇಟ್–ಖಡಕವಾಸಲಾ) ಮತ್ತು ಮಾರ್ಗ 4ಎ (ನಾಲ್ ಸ್ಟಾಪ್–ವಾರ್ಜೆ–ಮಾಣಿಕ್ ಬಾಗ್) ಗೆ ಅನುಮೋದನೆ ನೀಡಿದ್ದು, ಪುಣೆ ತನ್ನ ಸಾರ್ವಜನಿಕ ಸಾರಿಗೆ ಜಾಲದಲ್ಲಿ ಮತ್ತೊಂದು ಪ್ರಮುಖ ಉತ್ತೇಜನಕ್ಕೆ ಸಜ್ಜಾಗಿದೆ. ಮಾರ್ಗ 2ಎ (ವನಜ್–ಚಂದಾನಿ ಚೌಕ್) ಮತ್ತು ಮಾರ್ಗ 2ಬಿ (ರಾಮ್ವಾಡಿ–ವಾಘೋಲಿ/ವಿಠ್ಠಲವಾಡಿ) ಮಂಜೂರಾದ ನಂತರ, ಹಂತ-2 ರ ಅಡಿಯಲ್ಲಿ ಅನುಮೋದಿಸಲಾದ ಎರಡನೇ ಪ್ರಮುಖ ಯೋಜನೆ ಇದು.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.Our government is making the vision of women-led development the axis of development: PM Modi in Bhopal, Madhya Pradesh
May 31st, 11:00 am
PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು
May 31st, 10:27 am
ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಿದರು. ಅವರು ಭೋಪಾಲ್ ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಮಾ ಭಾರತಿ'ಗೆ ಗೌರವ ಸಲ್ಲಿಸುವ ಮೂಲಕ ಮತ್ತು ಭಾರತದ ಮಹಿಳೆಯರ ಶಕ್ತಿಯನ್ನು ಅಂಗೀಕರಿಸುವ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮವನ್ನು ಆಶೀರ್ವದಿಸಲು ಬಂದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ದೊಡ್ಡ ಗುಂಪಿಗೆ ಅವರು ಕೃತಜ್ಞತೆ ಸಲ್ಲಿಸಿದರು, ಅವರ ಉಪಸ್ಥಿತಿಯಿಂದ ತಮಗೆ ಗೌರವವಿದೆ ಎಂದು ಹೇಳಿದರು. ಇಂದು ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ, ಇದು 140 ಕೋಟಿ ಭಾರತೀಯರಿಗೆ ಸ್ಫೂರ್ತಿಯ ಸಂದರ್ಭ ಮತ್ತು ರಾಷ್ಟ್ರ ನಿರ್ಮಾಣದ ಸ್ಮರಣೀಯ ಪ್ರಯತ್ನಗಳಿಗೆ ಕೊಡುಗೆ ನೀಡುವ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇವಿ ಅಹಲ್ಯಾಬಾಯಿ ಅವರನ್ನು ಉಲ್ಲೇಖಿಸಿದ ಅವರು, ನಿಜವಾದ ಆಡಳಿತ ಎಂದರೆ ಜನರ ಸೇವೆ ಮತ್ತು ಅವರ ಜೀವನವನ್ನು ಸುಧಾರಿಸುವುದು ಎಂದು ಪುನರುಚ್ಚರಿಸಿದರು. ಇಂದಿನ ಕಾರ್ಯಕ್ರಮವು ಅವರ ದೃಷ್ಟಿಕೋನವನ್ನು ಸಾಕಾರಗೊಳಿಸುತ್ತದೆ ಮತ್ತು ಅವರ ಆದರ್ಶಗಳನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು. ಇಂದೋರ್ ಮೆಟ್ರೋಗೆ ಚಾಲನೆ ನೀಡಿರುವುದನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ದಾತಿಯಾ ಮತ್ತು ಸತ್ನಾಕ್ಕೆ ವಾಯು ಸಂಪರ್ಕವನ್ನು ಸೇರಿಸಲಾಯಿತು. ಈ ಯೋಜನೆಗಳು ಮಧ್ಯಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸುತ್ತವೆ, ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಹಾಜರಿದ್ದ ಎಲ್ಲರಿಗೂ ಅವರು ಅಭಿನಂದನೆ ಸಲ್ಲಿಸಿದರು.ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
May 30th, 03:29 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ಶ್ರೀ ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವರೇ, ಸಂಸದರೇ, ಶಾಸಕರೇ, ಮತ್ತು ಕಾನ್ಪುರದಿಂದ ಇಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ
May 30th, 03:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ 2025ರ ಏಪ್ರಿಲ್ 24 ರಂದು ಆರಂಭದಲ್ಲಿ ನಿಗದಿಯಾಗಿದ್ದ ಕಾನ್ಪುರ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂದು ತಿಳಿಸಿದರು. ಈ ಅನಾಗರಿಕ ಕೃತ್ಯಕ್ಕೆ ಬಲಿಯಾದ ಕಾನ್ಪುರದ ಪುತ್ರ ಶ್ರೀ ಶುಭಂ ದ್ವಿವೇದಿಗೆ ಅವರು ಗೌರವ ಸಲ್ಲಿಸಿದರು. ದೇಶಾದ್ಯಂತ ಸಹೋದರಿಯರು ಮತ್ತು ಹೆಣ್ಣುಮಕ್ಕಳ ನೋವು, ಸಂಕಟ, ಕೋಪ ಮತ್ತು ಸಾಮೂಹಿಕ ಯಾತನೆಯನ್ನು ತಾವು ಆಳವಾಗಿ ಅನುಭವಿಸಿರುವುದಾಗಿ ಪ್ರಧಾನಿ ಹೇಳಿದರು. ಆಪರೇಷನ್ ಸಿಂದೂರ್ ನಡೆದಾಗ ಈ ಸಾಮೂಹಿಕ ಕೋಪವು ವಿಶ್ವಾದ್ಯಂತ ಕಂಡುಬಂದಿತು ಎಂದು ಅವರು ಹೇಳಿದರು.ಮೇ 31ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
May 30th, 11:15 am
ಲೋಕಮಾತಾ ದೇವಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 31ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಗ್ಗೆ 11:15ರ ಸುಮಾರಿಗೆ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತಿಕರಣ ಮಹಾಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಭೋಪಾಲ್ ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಗುಜರಾತ್‌ನ ದಾಹೋದ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 11:45 am
ಗುಜರಾತ್‌ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು
May 26th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.