The courage, confidence and innovation of startups are shaping India's future: PM Modi
January 16th, 01:30 pm
On the occasion of National Startup Day, PM Modi addressed a programme marking a decade of the Startup India initiative in New Delhi. Highlighting the significant rise in the number of startups and unicorns over the past decade, the PM noted the growing participation of women in the startups. As India is set to host the AI Impact Summit in February 2026, the PM remarked that it presents a great opportunity for the youth and urged them to work hard and innovate.PM Modi addresses the programme marking a decade of Startup India in New Delhi
January 16th, 01:00 pm
On the occasion of National Startup Day, PM Modi addressed a programme marking a decade of the Startup India initiative in New Delhi. Highlighting the significant rise in the number of startups and unicorns over the past decade, the PM noted the growing participation of women in the startups. As India is set to host the AI Impact Summit in February 2026, the PM remarked that it presents a great opportunity for the youth and urged them to work hard and innovate.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.