ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಭಾರತದ ವ್ಯಾಕ್ಸಿನೇಷನ್ ಅಭಿಯಾನವು ಜಗತ್ತಿಗೆ ಒಂದು ಅಧ್ಯಯನವಾಗಬಹುದು: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
June 27th, 11:30 am
ಮನ್ ಕಿ ಬಾತ್ ಸಂದರ್ಭದಲ್ಲಿ, ಮುಂಬರುವ ಟೋಕಿಯೊ ಒಲಿಂಪಿಕ್ಸ್ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು, ದಿವಂಗತ ಮಿಲ್ಖಾ ಸಿಂಗ್ ಮತ್ತು ಅವರ ಕೊಡುಗೆಯನ್ನು ನೆನಪಿಸಿಕೊಂಡರು. ನಡೆಯುತ್ತಿರುವ ಲಸಿಕೆ ಅಭಿಯಾನದ ಬಗ್ಗೆ ಪ್ರಧಾನಿ ಮೋದಿ ಬೆಳಕು ಚೆಲ್ಲಿದರು ಮತ್ತು ಇದು ಜಗತ್ತಿಗೆ ಒಂದು ಅಧ್ಯಯನವಾಗಬಹುದು ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರೊಂದಿಗೆ ಮಾತನಾಡಿದ ಅವರು ಯಾವುದೇ ವದಂತಿಗಳಿಗೆ ಬಲಿಯಾಗದಂತೆ ಮತ್ತು ಲಸಿಕೆ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ನೀರಿನ ಸಂರಕ್ಷಣೆ, ಅಮೃತ್ ಮಹೋತ್ಸವ್ ಮತ್ತು ಹೆಚ್ಚಿನವುಗಳ ಬಗ್ಗೆ ಪ್ರಧಾನಿ ಮಾತನಾಡಿದರು.ಹಿರಿಯ ಅಥ್ಲೀಟ್, ಕ್ರೀಡಾ ದಿಗ್ಗಜ ಶ್ರೀ ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
June 19th, 08:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಆಥ್ಲೀಟ್, ಕ್ರೀಡಾದಿಗ್ಗಜ ಶ್ರೀ ಮಿಲ್ಖಾ ಸಿಂಗ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು, ಮಿಲ್ಕಾ ಸಿಂಗ್ ಅವರನ್ನು ಇಡೀ ರಾಷ್ಟ್ರದ ಕಲ್ಪನೆಯನ್ನು ಸೆರೆಹಿಡಿದ ಮತ್ತು ಅಸಂಖ್ಯಾತ ಭಾರತೀಯರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದ ಹಿರಿಯ ಕ್ರೀಡಾದಿಗ್ಗಜ ಎಂದು ಬಣ್ಣಿಸಿದ್ದಾರೆ.