ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

November 23rd, 12:45 pm

ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್‌.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ

November 23rd, 12:30 pm

ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್‌.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

November 22nd, 09:57 pm

ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.

ಜೋಹಾನ್ಸ್‌ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

November 22nd, 09:35 pm

ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 19th, 07:01 pm

ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

November 19th, 02:30 pm

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ನವದೆಹಲಿಯಲ್ಲಿ ನಡೆದ ಕೃಷಿ ಕಾರ್ಯಕ್ರಮದಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಅವರು ನಡೆಸಿದ ಸಂವಾದದ ಕನ್ನಡ ಅವತರಣಿಕೆ

October 12th, 06:45 pm

ರಾಮ್-ರಾಮ್! ನಾನು ಹರಿಯಾಣದ ಹಿಸಾರ್ ಜಿಲ್ಲೆಯವನು. ನಾನು ಕಾಬೂಲಿ ಚನಾ (ಕಡಲೆ) ಕೃಷಿಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಸ್ವಲ್ಪ ಮಾತ್ರ ಇತ್ತು..

ಕೃಷಿ ಕ್ಷೇತ್ರದಲ್ಲಿ ₹35,440 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು

October 12th, 06:25 pm

ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮವು ರೈತರ ಕಲ್ಯಾಣ, ಕೃಷಿಯಲ್ಲಿ ಸ್ವಾವಲಂಬನೆ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರಿಗಿರುವ ನಿರಂತರ ಬದ್ಧತೆಯನ್ನು ಸಾರುತ್ತದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ನಂತರ ಕೃಷಿ ವಲಯಕ್ಕಾಗಿ ₹35,440 ಕೋಟಿ ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. ಅವರು ₹24,000 ಕೋಟಿ ವೆಚ್ಚದ 'ಪಿ.ಎಂ. ಧನ ಧಾನ್ಯ ಕೃಷಿ ಯೋಜನೆ' ಹಾಗೂ ₹11,440 ಕೋಟಿ ವೆಚ್ಚದ 'ಬೇಳೆಕಾಳುಗಳಲ್ಲಿ ಆತ್ಮನಿರ್ಭರತೆ ಮಿಷನ್' ಅನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣಾ ವಲಯಗಳಿಗೆ ಸಂಬಂಧಿಸಿದ ₹5,450 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಜೊತೆಗೆ, ಸುಮಾರು ₹815 ಕೋಟಿ ಮೌಲ್ಯದ ಹೆಚ್ಚುವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 06:16 pm

ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 25th, 06:15 pm

ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 07th, 09:20 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 07th, 09:00 am

ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 28th, 11:15 am

ಶ್ರವಣಬೆಳಗೊಳದ ಸ್ವಾಮಿ ಚಾರುಕೀರ್ತಿ ಜಿ ಮುಖ್ಯಸ್ಥರಾದ ಪರಮ ಶ್ರದ್ಧೆಯ ಆಚಾರ್ಯ ಶ್ರೀ ಪ್ರಜ್ಞಾಸಾಗರ ಮಹಾರಾಜ್ ಜಿ, ನನ್ನ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜಿ, ನನ್ನ ಸಹ ಸಂಸದ ನವೀನ್ ಜೈನ್ ಜಿ, ಭಗವಾನ್ ಮಹಾವೀರ ಅಹಿಂಸಾ ಭಾರತಿ ಟ್ರಸ್ಟ್‌ ಅಧ್ಯಕ್ಷ ಪ್ರಿಯಾಂಕ್ ಜೈನ್ ಜಿ, ಕಾರ್ಯದರ್ಶಿ ಮಮತಾ ಜೈನ್ ಜಿ, ಇತರೆ ಗೌರವಾನ್ವಿತ ಗಣ್ಯರೆ, ಪೂಜ್ಯ ಸಾಧು ಸಂತರೆ, ಮಹಿಳೆಯರೆ ಮತ್ತು ಮಹನೀಯರೆ, ಜೈ ಜಿನೇಂದ್ರ!

ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

June 28th, 11:01 am

ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಆಚಾರ್ಯ ಶ್ರೀ ವಿದ್ಯಾನಂದ ಜಿ ಮುನಿರಾಜ್ ಅವರ ಶತಮಾನೋತ್ಸವ ಆಚರಣೆಯ ಪಾವಿತ್ರ್ಯವನ್ನು ಪ್ರಸ್ತಾಪಿಸಿದ ಅವರು, ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಒಂದು ಮಹತ್ವದ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿದೆ. ಪೂಜ್ಯ ಆಚಾರ್ಯರ ಅಮರ ಸ್ಫೂರ್ತಿಯಿಂದ ತುಂಬಿರುವ ಈ ಕಾರ್ಯಕ್ರಮವು ಅಸಾಧಾರಣ ಮತ್ತು ಉನ್ನತಿಗೇರಿಸುವ ವಾತಾವರಣವನ್ನು ಸೃಷ್ಟಿಸುತ್ತಿದೆ. ಇಲ್ಲಿ ನೆರೆದಿರುವ ಎಲ್ಲಾ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಕ್ಕ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 01st, 11:00 am

ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.

ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 01st, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

February 10th, 11:30 am

ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.