ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)
June 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಚಿಲಿ ಅಧ್ಯಕ್ಷರ ಭಾರತ ಭೇಟಿ - ಸಭಾ ಒಪ್ಪಂದಗಳ ಪಟ್ಟಿ
April 01st, 06:45 pm
ಅಂಟಾರ್ಟಿಕಾ ಸಹಕಾರದ ತಿಳುವಳಿಕೆ ಪತ್ರಭಾರತ - ಚಿಲಿ ಜಂಟಿ ಹೇಳಿಕೆ
April 01st, 06:11 pm
ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಚಿಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಭಾರತ ಮತ್ತು ಚಿಲಿ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ 76 ವರ್ಷಗಳ ಪೂರ್ಣಗೊಂಡ ನೆನಪಿಗಾಗಿ 2025ರ ಏಪ್ರಿಲ್ 1 ರಿಂದ 5 ರವರೆಗೆ ಭಾರತಕ್ಕೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಅಧ್ಯಕ್ಷ ಬೋರಿಕ್ ಅವರೊಂದಿಗೆ ವಿದೇಶಾಂಗ ಸಚಿವರು, ಕೃಷಿ ಸಚಿವರು, ಗಣಿಗಾರಿಕೆ ಸಚಿವರು, ಮಹಿಳಾ ಮತ್ತು ಲಿಂಗ ಸಮಾನತೆ ಸಚಿವರು ಮತ್ತು ಸಂಸ್ಕೃತಿ, ಕಲೆ ಮತ್ತು ಪರಂಪರೆ ಸಚಿವರು, ಸಂಸತ್ ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಉದ್ಯಮಿ ನಾಯಕರು ಬಂದಿದ್ದಾರೆ. ನವದೆಹಲಿಯ ಹೊರತಾಗಿ, ಅಧ್ಯಕ್ಷ ಬೋರಿಕ್ ಅವರು ಆಗ್ರಾ, ಮುಂಬೈ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಇದು ಅಧ್ಯಕ್ಷ ಬೋರಿಕ್ ಅವರ ಮೊದಲ ಭಾರತ ಭೇಟಿಯಾಗಿದೆ. ಅಧ್ಯಕ್ಷ ಬೋರಿಕ್ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ಮೊದಲು 2024 ರ ನವೆಂಬರ್ನಲ್ಲಿ ರಿಯೋ ಡಿ ಜನೈರೊದಲ್ಲಿ ನಡೆದ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾಗಿದ್ದರು.ಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 28th, 11:30 am
ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.ಸಿಡ್ನಿಯಲ್ಲಿ ವ್ಯಾಪಾರ ದುಂಡುಮೇಜಿನ ಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ
May 24th, 04:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಉನ್ನತ ಕಂಪನಿಗಳ ಸಿಇಒಗಳೊಂದಿಗೆ ವ್ಯಾಪಾರ ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ರಾಜಸ್ಥಾನದ ನಾಥದ್ವಾರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 10th, 12:01 pm
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಕಲ್ರಾಜ್ ಮಿಶ್ರಾ ಅವರೇ, ನನ್ನ ಸ್ನೇಹಿತರಾದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಅವರೇ, ವಿಧಾನಸಭೆ ಸ್ಪೀಕರ್ ಶ್ರೀ ಸಿ.ಪಿ.ಜೋಶಿ ಅವರೇ, ರಾಜ್ಯ ಸರ್ಕಾರದ ಸಚಿವರಾದ ಶ್ರೀ ಭಜನ್ ಲಾಲ್ ಜಾತವ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ಚಂದ್ರ ಪ್ರಕಾಶ್ ಜೋಶಿ ಅವರೇ, ನನ್ನ ಸಂಸದೀಯ ಸಹೋದ್ಯೋಗಿಗಳಾದ ಸಹೋದರಿ ದಿಯಾ ಕುಮಾರಿ ಅವರೇ, ಶ್ರೀ ಕನಕ್ ಮಲ್ ಕತಾರಾ ಅವರೇ ಮತ್ತು ಶ್ರೀ ಅರ್ಜುನ್ ಲಾಲ್ ಮೀನಾ ಅವರೇ. ಈ ಸಮಾರಂಭದಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರು ಮತ್ತು ರಾಜಸ್ಥಾನದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!PM lays foundation stone and dedicates to nation infrastructure projects worth over Rs. 5500 crores in Nathdwara, Rajasthan
May 10th, 12:00 pm
PM Modi laid the foundation stone, inaugurated and dedicated to the nation projects worth over Rs. 5500 crores in Nathdwara, Rajasthan today. The development projects focus on bolstering infrastructure and connectivity and facilitate the movement of goods and services, boosting trade and commerce and improving the socio-economic conditions of the people in the region.ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮಧ್ಯಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ರಲ್ಲಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಕನ್ನಡ ಭಾಷಾಂತರ
January 11th, 05:00 pm
ಮಧ್ಯಪ್ರದೇಶ ಹೂಡಿಕೆದಾರರ ಶೃಂಗಸಭೆಗೆ ಎಲ್ಲಾ ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಆತ್ಮೀಯ ಸ್ವಾಗತ! ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮಧ್ಯಪ್ರದೇಶದ ಪಾತ್ರ ಬಹಳ ನಿರ್ಣಾಯಕವಾಗಿದೆ. ಭಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ಪ್ರವಾಸೋದ್ಯಮದವರೆಗೆ; ಕೃಷಿಯಿಂದ ಹಿಡಿದು ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯವರೆಗೆ, ಮಧ್ಯಪ್ರದೇಶ ಅನನ್ಯತೆ, ಭವ್ಯತೆ ಮತ್ತು ಜಾಗೃತಿಯ ಸ್ಥಾನ ಪಡೆದಿದೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
January 11th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಶೃಂಗಸಭೆಯು ಮಧ್ಯಪ್ರದೇಶದ ವೈವಿಧ್ಯಮಯ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸಲಿದೆ.“ವಿಶ್ವಕ್ಕೆ ಭಾರತ ನಿರ್ಮಿತ ಉತ್ಪನ್ನ” ಕುರಿತಂತೆ ಬಜೆಟ್ ಬಳಿಕದ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 03rd, 10:08 am
ಈ ವರ್ಷದ ಬಜೆಟಿನಲ್ಲಿ “ಆತ್ಮ ನಿರ್ಭರ ಭಾರತ” ಮತ್ತು ಮೇಕ್ ಇನ್ ಇಂಡಿಯಾ (ಭಾರತ ನಿರ್ಮಿತ) ಕುರಿತಂತೆ ಕೈಗೊಂಡ ನಿರ್ಧಾರಗಳು ನಮ್ಮ ಉದ್ಯಮ ಮತ್ತು ಆರ್ಥಿಕತೆಗೆ ಸಂಬಂಧಿಸಿದಂತೆ ಬಹಳ ಪ್ರಮುಖವಾದಂತಹವು. ಮೇಕ್ ಇನ್ ಇಂಡಿಯಾ ಆಂದೋಲನ 21 ನೇ ಶತಮಾನದ ಭಾರತದ ಇಂದಿನ ಆವಶ್ಯಕತೆಯಾಗಿದೆ ಮತ್ತು ಇದು ಜಗತ್ತಿಗೆ ನಮ್ಮ ಸಾಮರ್ಥ್ಯವನ್ನು ತೋರಿಸಲು ನಮಗೆ ಒಂದು ಅವಕಾಶವೂ ಆಗಿದೆ. ಯಾವುದೇ ದೇಶ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ ಬಳಿಕ ಅವೇ ಕಚ್ಚಾ ವಸ್ತುಗಳಿಂದ ತಯಾರಾದ ಸರಕುಗಳನ್ನು ಖರೀದಿಸುವ ಸ್ಥಿತಿಯಲ್ಲಿದ್ದರೆ ಅದು ಸೋಲು-ಸೋಲಿನ ಪರಿಸ್ಥಿತಿ.ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್' ಕುರಿತು ಡಿಪಿಐಐಟಿ ವೆಬ್‌ನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 03rd, 10:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ (ಡಿಪಿಐಐಟಿ) ಆಯೋಜಿಸಿದ್ದ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಇದು ಪ್ರಧಾನಮಂತ್ರಿ ಅವರು ಬಜೆಟ್ ನಂತರದ ಎಂಟನೇ ವೆಬಿನಾರ್ ಅನ್ನು ಉದ್ದೇಶಿಸಿ ಭಾಷಣವಾಗಿದೆ. ಈ ವೆಬ್‌ನಾರ್‌ನ ಥೀಮ್ (ಘೋಷ ವಾಕ್ಯ) 'ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್' ಆಗಿತ್ತು.ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ
October 13th, 11:55 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ
October 13th, 11:54 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಭಾರತೀಯ ಬಾಹ್ಯಾಕಾಶ ಸಂಘದ ಪ್ರಾರಂಭೋತ್ಸವ ದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 11th, 11:19 am
ಇಂದು ದೇಶದ ಇಬ್ಬರು ಮಹಾನ್ ಪುತ್ರರಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜಿ ಮತ್ತು ಭಾರತ ರತ್ನ ಶ್ರೀ ನಾನಾಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರು ಮಹಾನ್ ವ್ಯಕ್ತಿಗಳು ಸ್ವಾತಂತ್ರ್ಯೋತ್ತರ ಭಾರತಕ್ಕೆ ಮಾರ್ಗದರ್ಶನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಜೀವನ ತತ್ವವು ರಾಷ್ಟ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಎಲ್ಲರನ್ನೂ ಜೊತೆಯಲ್ಲಿ ಸೇರಿಸಿಕೊಂಡು ಮತ್ತು ಎಲ್ಲರ ಪ್ರಯತ್ನಗಳು ನಮಗೆ ಸ್ಫೂರ್ತಿ ನೀಡುತ್ತಲೇ ಇವೆ. ನಾನು ಜಯಪ್ರಕಾಶ್ ನಾರಾಯಣ್ ಜೀ ಮತ್ತು ನಾನಾಜಿ ದೇಶಮುಖ್ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಪ್ರಧಾನಿ ಚಾಲನೆ
October 11th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತೀಯ ಬಾಹ್ಯಾಕಾಶ ಸಂಘʼಕ್ಕೆ (ಐಎಸ್‌ಪಿಎ) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಂದಿಗೆ ಅವರು ಸಂವಾದ ನಡೆಸಿದರು.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.