ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್ ಎಫ್ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ
March 25th, 05:35 pm
ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್ ಡಿ ಸಿ) ಅನುಮೋದಿಸಿದೆ. ಇದು ಯು ಎನ್ ಎಫ್ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 11:00 am
ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್‌ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು
November 01st, 11:00 am
ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು
August 29th, 07:11 pm
ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 07th, 11:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯದ ಕುರಿತಾದ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
July 07th, 11:13 pm
ಬ್ರೆಜಿಲ್ ಅಧ್ಯಕ್ಷತೆಯಲ್ಲಿ ಬ್ರಿಕ್ಸ್, ಪರಿಸರ ಮತ್ತು ಆರೋಗ್ಯ ಸುರಕ್ಷತೆಯಂತಹ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ನನಗೆ ಸಂತೋಷ ತಂದಿದೆ. ಈ ವಿಷಯಗಳು ಪರಸ್ಪರ ಸಂಬಂಧ ಹೊಂದಿರುವುದು ಮಾತ್ರವಲ್ಲ ಮಾನವೀಯತೆಯ ಉಜ್ವಲ ಭವಿಷ್ಯಕ್ಕೂ ಸಹ ಬಹಳ ಮುಖ್ಯವಾಗಿವೆ.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ
June 18th, 11:15 am
ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.ನವಕಾರ್ ಮಹಾಮಂತ್ರ ದಿವಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 09th, 08:15 am
ಮನಸ್ಸು ಶಾಂತವಾಗಿದೆ, ಮನಸ್ಸು ಸ್ಥಿರವಾಗಿದೆ, ಶಾಂತಿಯೊಂದೇ ಅದ್ಭುತ ಅನುಭೂತಿ, ಮಾತಿಗೆ ಮೀರಿದ, ಆಲೋಚನೆಗೆ ಮೀರಿದ ನವಕಾರ್ ಮಹಾಮಂತ್ರವು ಇನ್ನೂ ಮನಸ್ಸಿನಲ್ಲಿ ಅನುರಣಿಸುತ್ತಿದೆ. ನಮೋ ಅರಿಹಂತನಾಮ್. ನಮೋ ಸಿದ್ಧಾನಾಮ್. ನಮೋ ಆರ್ಯನಾಮ್. ನಮೋ ಉವಜ್ಜಾಯನಾಮ್ । ನಮೋ ಲೋಯೇ ಸವ್ವಸಾಹೂನಾಮ್ । (ನಮೋ ಅರಿಹಂತಾನಂ॥ ನಮೋ ಸಿದ್ಧಾನಂ॥ ನಮೋ ಆಯಾರಿಯಾಣಂ॥ ನಮೋ ಉವಾಜ್ಞಾಯಾಣಂ ॥ ನಮೋ ಏಲ ॥ ಸವ್ವಸಾಹೂಣಂ॥) ಒಂದು ಧ್ವನಿ, ಒಂದು ಹರಿವು, ಒಂದು ಶಕ್ತಿ, ಯಾವುದೇ ಏರಿಳಿತವಿಲ್ಲ, ಇಳಿಕೆಗಳಿಲ್ಲ, ಕೇವಲ ಸ್ಥಿರತೆ, ಕೇವಲ ಸಮಚಿತ್ತತೆ. ಅಂತಹ ಒಂದು ಪ್ರಜ್ಞೆ, ಒಂದೇ ರೀತಿಯ ಲಯ, ಒಳಗೆ ಇದೇ ಬೆಳಕು. ನವಕಾರ್ ಮಹಾಮಂತ್ರದ ಈ ಆಧ್ಯಾತ್ಮಿಕ ಶಕ್ತಿಯನ್ನು ನಾನು ಇನ್ನೂ ನನ್ನೊಳಗೆ ಅನುಭವಿಸುತ್ತಿದ್ದೇನೆ. ಕೆಲವು ವರ್ಷಗಳ ಹಿಂದೆ, ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣಕ್ಕೆ ನಾನು ಸಾಕ್ಷಿಯಾಗಿದ್ದೆ, ಇಂದು ನನಗೆ ಅದೇ ಭಾವನೆ ಮತ್ತು ಅದೇ ಆಳವಿದೆ. ಈ ಬಾರಿ ಲಕ್ಷಾಂತರ ಪುಣ್ಯಾತ್ಮರು ಒಂದೇ ಪ್ರಜ್ಞೆಯೊಂದಿಗೆ ಸಂಪರ್ಕ ಹೊಂದಿದ್ದಾರೆ, ಒಟ್ಟಿಗೆ ಮಾತನಾಡುವ ಪದಗಳು, ಒಟ್ಟಿಗೆ ಶಕ್ತಿ ಜಾಗೃತಗೊಂಡಿವೆ, ಭಾರತ ಮತ್ತು ವಿದೇಶಗಳಲ್ಲಿ, ಇದು ನಿಜವಾಗಿಯೂ ಹಿಂದೆಂದೂ ಕಾಣದ ಅಪೂರ್ವ ಕ್ಷಣವಾಗಿದೆ.ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 09th, 07:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದರು ಮತ್ತು ಅದರಲ್ಲಿ ಭಾಗವಹಿಸಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವಕರ್ ಮಂತ್ರದ ಆಳವಾದ ಆಧ್ಯಾತ್ಮಿಕ ಅನುಭವವನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಮನಸ್ಸಿಗೆ ಶಾಂತಿ ಮತ್ತು ಸ್ಥಿರತೆಯನ್ನು ತರುವ ಸಾಮರ್ಥ್ಯವನ್ನು ಒತ್ತಿ ಹೇಳಿದರು. ಪದಗಳು ಮತ್ತು ಆಲೋಚನೆಗಳನ್ನು ಮೀರಿದ, ಮನಸ್ಸು ಮತ್ತು ಪ್ರಜ್ಞೆಯೊಳಗೆ ಆಳವಾಗಿ ಪ್ರತಿಧ್ವನಿಸುವ ಅಸಾಧಾರಣ ಶಾಂತಿಯ ಭಾವನೆಯ ಬಗ್ಗೆ ಅವರು ಮಾತನಾಡಿದರು. ನವಕರ್ ಮಂತ್ರದ ಮಹತ್ವವನ್ನು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು, ಅದರ ಪವಿತ್ರ ಶ್ಲೋಕಗಳನ್ನು ಪಠಿಸಿದರು ಮತ್ತು ಮಂತ್ರವನ್ನು ಶಕ್ತಿಯ ನಿರಂತರ ಹರಿವು, ಸ್ಥಿರತೆ, ಸಮಚಿತ್ತತೆ ಮತ್ತು ಪ್ರಜ್ಞೆ ಮತ್ತು ಆಂತರಿಕ ಬೆಳಕಿನ ಸಾಮರಸ್ಯದ ಲಯವನ್ನು ಸಾಕಾರಗೊಳಿಸುತ್ತದೆ ಎಂದು ವಿವರಿಸಿದರು. ತಮ್ಮ ವೈಯಕ್ತಿಕ ಅನುಭವದ ಬೆಳಕು ಚೆಲ್ಲುತ್ತಾ, ನವಕರ್ ಮಂತ್ರದ ಆಧ್ಯಾತ್ಮಿಕ ಶಕ್ತಿಯನ್ನು ತಮ್ಮೊಳಗೆ ಹೇಗೆ ಅನುಭವಿಸುತ್ತಿದ್ದಾರೆ ಎಂಬುದನ್ನು ಅವರು ಹಂಚಿಕೊಂಡರು. ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣ ಕಾರ್ಯಕ್ರಮವನ್ನು ವೀಕ್ಷಿಸಿದ ಅವರು, ಅದು ತನ್ನ ಮೇಲೆ ಗಾಢ ಪ್ರಭಾವ ಬೀರಿತು ಎಂದರು. ದೇಶ ಮತ್ತು ವಿದೇಶಗಳಾದ್ಯಂತ ಲಕ್ಷಾಂತರ ಸದ್ಗುಣಶೀಲ ಆತ್ಮಗಳು ಏಕೀಕೃತ ಪ್ರಜ್ಞೆಯಲ್ಲಿ ಒಟ್ಟಿಗೆ ಸೇರುವ ಅಪ್ರತಿಮ ಅನುಭವವನ್ನು ಪ್ರಧಾನಿ ಪ್ರಮುಖವಾಗಿ ಉಲ್ಲೇಖಿಸಿದರು. ಸಾಮೂಹಿಕ ಶಕ್ತಿ ಮತ್ತು ಮೇಳೈಸಿದ ಪದಗಳ ಬಗ್ಗೆ ಅವರು ಉಲ್ಲೇಖಿಸಿ, ಇದು ನಿಜವಾಗಿಯೂ ಅಸಾಧಾರಣ ಮತ್ತು ಅಭೂತಪೂರ್ವ ಎಂದು ವಿವರಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಪರೀಕ್ಷಾ ಪೇ ಚರ್ಚಾ 2025: ಪರೀಕ್ಷೆಗಳನ್ನು ಮೀರಿ - ಜೀವನ ಮತ್ತು ಯಶಸ್ಸಿನ ಕುರಿತು ಸಂವಾದ
February 10th, 03:09 pm
ಬಹು ನಿರೀಕ್ಷಿತ 8 ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಿತು, ದೇಶಾದ್ಯಂತದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರನ್ನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚಿಂತನಶೀಲ ಚರ್ಚೆಯಲ್ಲಿ ಒಟ್ಟುಗೂಡಿಸಿತು. ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಮತ್ತು ಶಿಕ್ಷಣಕ್ಕೆ ಸಕಾರಾತ್ಮಕ ವಿಧಾನವನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿರುವ ಈ ವಾರ್ಷಿಕ ಕಾರ್ಯಕ್ರಮವು ಮತ್ತೊಮ್ಮೆ ಕಲಿಕೆ, ಜೀವನ ಕೌಶಲ್ಯ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿತು.