ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 11:10 am

ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.

ಮಿಜೋರಂ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

February 20th, 09:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಿಜೋರಂ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಶ್ರೀ ಸ್ವರಾಜ್ ಕೌಶಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 04th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸ್ವರಾಜ್ ಕೌಶಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಸ್ವರಾಜ್ ಕೌಶಲ್ ಅವರು ವಕೀಲರಾಗಿ ಮತ್ತು ದೀನದಲಿತರ ಜೀವನವನ್ನು ಸುಧಾರಿಸಲು ಕಾನೂನು ವೃತ್ತಿಯನ್ನು ಬಳಸುವುದರಲ್ಲಿ ನಂಬಿಕೆ ಇಟ್ಟ ವ್ಯಕ್ತಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದರು. ಅವರು ಭಾರತದ ಅತ್ಯಂತ ಕಿರಿಯ ರಾಜ್ಯಪಾಲರಾದರು ಮತ್ತು ಅವರ ಗವರ್ನರ್ ಅಧಿಕಾರಾವಧಿಯಲ್ಲಿ ಮಿಜೋರಾಂ ಜನರ ಮೇಲೆ ಶಾಶ್ವತವಾದ ಪ್ರಭಾವ ಬೀರಿದರು. ಸಂಸದರಾಗಿ ಅವರ ಒಳನೋಟಗಳು ಸಹ ಗಮನಾರ್ಹವಾಗಿವೆ, ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ

September 12th, 02:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.

ಮಿಜೋರಾಂ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿ ಅವರ ಭೇಟಿ

July 14th, 04:48 pm

ಮಿಜೋರಾಂ ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಮಿಜೋರಾಂ ರಾಜ್ಯೋತ್ಸವ ದಿನದ ಅಂಗವಾಗಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ

February 20th, 04:03 pm

ಮಿಜೋರಾಂ ಜನತೆಗೆ ರಾಜ್ಯೋತ್ಸವ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಮಿಜೋರಾಂ ಸಂಸ್ಕೃತಿಯು ಪರಂಪರೆ ಮತ್ತು ಸಾಮರಸ್ಯದ ಸುಂದರವಾದ ಮಿಳಿತವನ್ನು ಬಿಂಬಿಸುತ್ತದೆ. ಮಿಜೋರಾಂ ಇನ್ನಷ್ಟು ಅಭಿವೃದ್ಧಿ ಹೊಂದಲಿ ಮತ್ತು ಮುಂಬರುವ ವರ್ಷಗಳಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಯತ್ತ ರಾಜ್ಯದ ಪಯಣವು ಇನ್ನೂ ಹೆಚ್ಚು ಎತ್ತರಕ್ಕೆ ತಲುಪಲಿ ಎಂದು ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು

January 21st, 12:54 pm

ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ಮುಖ್ಯಮಂತ್ರಿ ಲಾಲ್ ದುಹೋಮ

October 26th, 01:45 pm

ಮಿಜೋರಾಂ ಮುಖ್ಯಮಂತ್ರಿ ಶ್ರೀ ಲಾಲ್ ದುಹೋಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಮಿಜೋರಂ ಮುಖ್ಯಮಂತ್ರಿ

July 06th, 01:25 pm

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

​​​​​​​ಮಿಜೋರಾಂ ಜನತೆಗೆ ರಾಜ್ಯೋತ್ಸವ ದಿನದ ಶುಭ ಕೋರಿದ ಪ್ರಧಾನ ಮಂತ್ರಿ ಮೋದಿ

February 20th, 10:49 am

ಮಿಜೋರಾಂ ರಾಜ್ಯೋತ್ಸವದ ಅಂಗವಾಗಿ ಅಲ್ಲಿನ ಜನತೆಗೆ ಶುಭ ಕೋರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ರಾಜ್ಯದ ನಿರಂತರ ಪ್ರಗತಿ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ.

ಸಾವಯವ ಕೃಷಿಯು ಜನರ ಮತ್ತು ಭೂಮಿಯ ಆರೋಗ್ಯಕ್ಕೆ ನಿರ್ಣಾಯಕ: ಪ್ರಧಾನಮಂತ್ರಿ

January 08th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಮಾವೇಶ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ದೇಶಾದ್ಯಂತದ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.