ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 09th, 06:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು

July 09th, 05:55 am

ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.

ಪ್ರಧಾನಮಂತ್ರಿ ಅವರ ಬ್ರೆಜಿಲ್‌ ಭೇಟಿ: ಆಗಿರುವ ಫಲಿತಾಂಶಗಳ ಪಟ್ಟಿ

July 09th, 03:14 am

ಅಂತಾರಾಷ್ಟ್ರೀಯ ಭಯೋತ್ಪಾದನೆ ಮತ್ತು ದೇಶೀಯ ಸಂಘಟಿತ ಅಪರಾಧವನ್ನು ಎದುರಿಸುವಲ್ಲಿ ಸಹಕಾರದ ಒಪ್ಪಂದ.

ಪ್ರಧಾನಮಂತ್ರಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವ - "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಪ್ರದಾನ

July 09th, 12:58 am

ಬ್ರೆಜಿಲ್ ಅಧ್ಯಕ್ಷರಾದ ಗೌರವಾನ್ವಿತ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಅನ್ನು ಪ್ರದಾನ ಮಾಡಿದರು.

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 08th, 08:30 pm

ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

ಪ್ರಧಾನಿ ಮೋದಿ ಬ್ರೆಜಿಲ್‌ನ ಬ್ರೆಜಿಲಿಯಾಕ್ಕೆ ಆಗಮಿಸಿದರು

July 08th, 02:55 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಅಧಿಕೃತ ಭೇಟಿಗಾಗಿ ಬ್ರೆಜಿಲಿಯಾಕ್ಕೆ ಆಗಮಿಸಿದರು. ಅವರು ಭಾರತ-ಬ್ರೆಜಿಲ್ ಸಂಬಂಧಗಳ ವಿವಿಧ ಅಂಶಗಳ ಕುರಿತು ಅಧ್ಯಕ್ಷ ಲುಲಾ ಅವರೊಂದಿಗೆ ವಿವರವಾದ ಮಾತುಕತೆ ನಡೆಸಲಿದ್ದಾರೆ.

ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಕ್ಯೂಬಾದ ಅಧ್ಯಕ್ಷರನ್ನು ಭೇಟಿಯಾದರು

July 07th, 05:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕ್ಯೂಬಾದ ಅಧ್ಯಕ್ಷ ಘನತೆವೆತ್ತ ಮಿಗುಯೆಲ್ ಡಯಾಜ್-ಕ್ಯಾನೆಲ್ ಬೆರ್ಮುಡೆಜ್ ಅವರನ್ನು ಭೇಟಿ ಮಾಡಿದರು. 2023ರಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಕ್ಯೂಬಾ ವಿಶೇಷ ಆಹ್ವಾನಿತರಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಡಿಯಾಜ್-ಕ್ಯಾನೆಲ್ ಅವರನ್ನು ಭೇಟಿ ಮಾಡಿದ್ದರು.

ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಮಲೇಷ್ಯಾದ ಪ್ರಧಾನಮಂತ್ರಿಯವರೊಂದಿಗೆ ಸಭೆ ನಡೆಸಿದರು

July 07th, 05:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾ ಪ್ರಧಾನಮಂತ್ರಿ ಘನತೆವೆತ್ತ ಅನ್ವರ್ ಬಿನ್ ಇಬ್ರಾಹಿಂ ಅವರನ್ನು ಭೇಟಿ ಮಾಡಿದರು.

ಬ್ರೆಜಿಲ್ ನಲ್ಲಿರುವ ಭಾರತೀಯ ಸಮುದಾಯದ ರೋಮಾಂಚಕ ಸ್ವಾಗತಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ

July 06th, 08:28 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೊ ಡಿ ಜನೈರೊದಲ್ಲಿ ತಮಗೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ಬ್ರೆಜಿಲ್ ನಲ್ಲಿರುವ ಭಾರತೀಯ ಸಮುದಾಯದವರನ್ನು ಶ್ಲಾಘಿಸಿದ್ದಾರೆ. ಭಾರತದ ಅಭಿವೃದ್ಧಿಯ ಬಗ್ಗೆ ಅನಿವಾಸಿ ಭಾರತೀಯರು ಅತ್ಯಂತ ಉತ್ಸುಕರಾಗಿರುವುದು ಮತ್ತು ಭಾರತೀಯ ಸಂಸ್ಕೃತಿಯೊಂದಿಗೆ ತಮ್ಮ ಸಂಪರ್ಕ ಮುಂದುವರಿಸಿರುವುದು ಅಮೋಘವಾಗಿದೆ ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. ಅಲ್ಲಿನ ಸ್ವಾಗತದ ಕೆಲವು ಚಿತ್ರಗಳನ್ನು ಕೂಡ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಆಗಮಿಸಿದರು

July 06th, 04:47 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಬ್ರೆಜಿಲ್‌ಗೆ ಆಗಮಿಸಿದ್ದಾರೆ. ಅವರು ರಿಯೊ ಡಿ ಜನೈರೊದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಹಲವಾರು ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ.