ಸೈಪ್ರಸ್ ಮತ್ತು ಭಾರತ ನಡುವಿನ ಸಮಗ್ರ ಪಾಲುದಾರಿಕೆ ಅನುಷ್ಠಾನದ ಕುರಿತು ಜಂಟಿ ಘೋಷಣೆ

June 16th, 03:20 pm

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು, 2025ರ ಜೂನ್ 15 ರಿಂದ 16 ರವರೆಗೆ ಸೈಪ್ರಸ್‌ಗೆ ಅಧಿಕೃತ ಭೇಟಿ ನೀಡಿದ ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಎರಡು ದಶಕಗಳ ಬಳಿಕ, ಭಾರತದ ಪ್ರಧಾನಿಯೊಬ್ಬರು ಸೈಪ್ರಸ್‌ ಗೆ ನೀಡಿದ ಈ ಭೇಟಿಯು, ಉಭಯ ರಾಷ್ಟ್ರಗಳ ನಡುವಿನ ಗಾಢ ಮತ್ತು ಶಾಶ್ವತ ಸ್ನೇಹವನ್ನು ಪುನರುಚ್ಚರಿಸುವ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಈ ಭೇಟಿಯು, ಕೇವಲ ಸಮಾನ ಇತಿಹಾಸದ ಆಚರಣೆಯಾಗಿರದೆ, ಜಂಟಿ ವ್ಯೂಹಾತ್ಮಕ ದೃಷ್ಟಿ, ಪರಸ್ಪರ ನಂಬಿಕೆ ಮತ್ತು ಗೌರವದ ತಳಹದಿಯ ಮೇಲೆ ನಿಂತಿರುವ ಭವಿಷ್ಯದ ಪಾಲುದಾರಿಕೆಯ ಸಂಕೇತವಾಗಿದೆ.

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 16th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ.

ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ

June 16th, 01:45 pm

ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ.

ಸೈಪ್ರಸ್‌ನ ಪ್ರತಿಷ್ಠಿತ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣ

June 16th, 01:35 pm

ನನಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ನೀಡಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ಸೈಪ್ರಸ್ ಜನತೆಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ - III ಗೌರವ ಪ್ರದಾನ

June 16th, 01:33 pm

ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಅನ್ನು ಪ್ರದಾನ ಮಾಡಿದರು.

ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

June 16th, 02:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.

ಸೈಪ್ರಸ್‌ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 15th, 11:10 pm

ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

ಪ್ರಧಾನ ಮಂತ್ರಿ ಮೋದಿ ಸೈಪ್ರಸ್‌ಗೆ ಆಗಮಿಸಿದರು

June 15th, 06:06 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಸೈಪ್ರಸ್‌ಗೆ ಆಗಮಿಸಿದರು. ಅವರನ್ನು ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.