ಭಾರತ ನೆರವಿನ ರೈಲು ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

April 06th, 12:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಲಂಕಾದ ಅಧ್ಯಕ್ಷರಾದ ಘನತೆವೆತ್ತ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಇಂದು ಅನುರಾಧಪುರದಲ್ಲಿ ಭಾರತದ ನೆರವಿನೊಂದಿಗೆ ನಿರ್ಮಿಸಲಾದ ಎರಡು ರೈಲ್ವೆ ಯೋಜನೆಗಳನ್ನು ಉದ್ಘಾಟಿಸುವ ಮತ್ತು ಪ್ರಾರಂಭಿಸುವ ಸಮಾರಂಭದಲ್ಲಿ ಭಾಗವಹಿಸಿದ್ದರು.

ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

April 06th, 11:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಅನುರಾ ಕುಮಾರ ದಿಸ್ಸನಾಯಕೆ ಅವರೊಂದಿಗೆ ಅನುರಾಧಪುರದ ಪವಿತ್ರ ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜ್ಯ ಮಹಾಬೋಧಿ ಮರಕ್ಕೆ ಪೂಜೆ ಸಲ್ಲಿಸಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಶ್ರೀಲಂಕಾದ ಭಾರತೀಯ ಮೂಲದ ತಮಿಳು ನಾಯಕರು

April 05th, 10:59 pm

ಶ್ರೀಲಂಕಾದಲ್ಲಿರುವ ಭಾರತೀಯ ಮೂಲದ ತಮಿಳು (IOT) ನಾಯಕರು ಇಂದು ರಾಜಧಾನಿ ಕೊಲಂಬೊದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಶ್ರೀಲಂಕಾ ಸರ್ಕಾರದ ಸಹಕಾರದೊಂದಿಗೆ 10,000 ಮನೆಗಳು, ಆರೋಗ್ಯ ಸೌಲಭ್ಯಗಳು, ಪವಿತ್ರ ಸ್ಥಳ ಸೀತಾ ಎಲಿಯಾ ದೇವಾಲಯ ಭಾರತೀಯ ಮೂಲದ ತಮಿಳರ ಅಭಿವೃದ್ಧಿ ಯೋಜನೆಗಳ ನಿರ್ಮಾಣಕ್ಕೆ ಭಾರತ ಸರ್ಕಾರ ಬೆಂಬಲ ನೀಡಲಿದೆ ಎಂದು ಎಂದು ಶ್ರೀ ಮೋದಿಯವರು ಘೋಷಿಸಿದರು.

ಶ್ರೀಲಂಕಾದ ತಮಿಳು ಸಮುದಾಯದ ನಾಯಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

April 05th, 10:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾದ ಕೊಲಂಬೊದಲ್ಲಿ ತಮಿಳು ಸಮುದಾಯದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿಯವರು, ತಮಿಳು ಸಮುದಾಯದ ನಾಯಕರಾದ ತಿರು ಆರ್. ಸಂಪಂತನ್ ಮತ್ತು ತಿರು ಮಾವೈ ಸೇನಾತಿರಾಜ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.

ಶ್ರೀಲಂಕಾದ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

April 05th, 10:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೊದಲ್ಲಿ ಶ್ರೀಲಂಕಾದ ವಿರೋಧ ಪಕ್ಷದ ನಾಯಕರಾದ ಶ್ರೀ ಸಜಿತ್ ಪ್ರೇಮದಾಸ ಅವರನ್ನು ಭೇಟಿಯಾದರು.

1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಮಂತ್ರಿ ನಡೆಸಿದ ವಿಶೇಷ ಸಂವಾದದ

April 05th, 10:25 pm

ನಿಮ್ಮೆಲ್ಲರನ್ನೂ ಭೇಟಿಯಾಗುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ತಂಡವನ್ನು ಭಾರತದ ಜನರು ಇನ್ನೂ ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನೀವು ಭಾರತೀಯ ತಂಡವನ್ನು ಸೋಲಿಸಿದ ಸಮಯವನ್ನು ರಾಷ್ಟ್ರ ಇನ್ನೂ ಮರೆತಿಲ್ಲ.

1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

April 05th, 10:23 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಶ್ರೀಲಂಕಾದ ಕೊಲಂಬೊದಲ್ಲಿ 1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಸಂವಾದ ನಡೆಸಿದರು. ಈ ಸಂವಾದ ಸಂದರ್ಭದಲ್ಲಿ, ಕ್ರಿಕೆಟ್ ಆಟಗಾರರು ಗೌರವಾನ್ವಿತ ಪ್ರಧಾನ ಮಂತ್ರಿ ಅವರನ್ನು ಭೇಟಿಯಾಗುತ್ತಿರುವುದಕ್ಕೆ ಅಪಾರ ಸಂತೋಷ ಮತ್ತು ಕೃತಜ್ಞತೆ ಸಲ್ಲಿಸಿದರು. ಭಾರತೀಯರು ಶ್ರೀಲಂಕಾ ಕ್ರಿಕೆಟ್ ತಂಡದ ಪ್ರಭಾವಶಾಲಿ ಪ್ರದರ್ಶನವನ್ನು, ವಿಶೇಷವಾಗಿ ಶಾಶ್ವತ ಪ್ರಭಾವ ಬೀರಿದ ಸ್ಮರಣೀಯ ವಿಜಯವನ್ನು ಇನ್ನೂ ನೆನಪಿಸಿಕೊಳ್ಳುತ್ತಾರೆ ಎಂದು ಅವರು ನೆನಪಿಸಿಕೊಂಡರು. ಅವರ ಸಾಧನೆಯು ರಾಷ್ಟ್ರದೊಂದಿಗೆ ಪ್ರತಿಧ್ವನಿಸುತ್ತಿದೆ ಎಂದು ಅವರು ಹೇಳಿದರು.

ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕದಲ್ಲಿ ಪ್ರಧಾನಮಂತ್ರಿ ಗೌರವ ನಮನ

April 05th, 08:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೋ ಸಮೀಪದ ಶ್ರೀ ಜಯವರ್ಧನಪುರ ಕೋಟೆಯಲ್ಲಿರುವ 'ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕ'ಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಕೊಲಂಬೊದಲ್ಲಿ ಐಪಿಕೆಎಫ್ ಸ್ಮಾರಕಕ್ಕೆ ಪ್ರಧಾನಮಂತ್ರಿ ಭೇಟಿ

April 05th, 07:44 pm

ಕೊಲಂಬೊದಲ್ಲಿರುವ ಐಪಿಕೆಎಫ್ ಸ್ಮಾರಕಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಶ್ರೀಲಂಕಾದ ಶಾಂತಿ, ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಸೇವೆಯಲ್ಲಿ ತಮ್ಮ ಪ್ರಾಣ ಅರ್ಪಿಸಿದ ಭಾರತೀಯ ಶಾಂತಿಪಾಲನಾ ಪಡೆಯ ವೀರ ಯೋಧರನ್ನು ಅವರು ಶ್ಲಾಘಿಸಿದರು.

ಶ್ರೀಲಂಕಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಮಂತ್ರಿ

April 05th, 05:54 pm

ಪ್ರಧಾನಮಂತ್ರಿ ಅವರು ಇಂದು ಕೊಲಂಬೋದ ಅಧ್ಯಕ್ಷರ ಕಾರ್ಯಾಲಯದಲ್ಲಿ ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಅನುರ ಕುಮಾರ ದಿಸ್ಸನಾಯಕೆ ಅವರೊಂದಿಗೆ ಫಲಪ್ರದ ಸಭೆ ನಡೆಸಿದರು. ಮಾತುಕತೆಗೂ ಮುನ್ನ ಪ್ರಧಾನಿಯವರಿಗೆ ಸ್ವಾತಂತ್ರ್ಯ ಚೌಕದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. 2024ರ ಸೆಪ್ಟೆಂಬರ್ ನಲ್ಲಿ ಅಧ್ಯಕ್ಷ ದಿಸ್ಸನಾಯಕೆ ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಪ್ರಧಾನಿ ನರೇಂದ್ರ ಮೋದಿ.

ಪ್ರಧಾನಮಂತ್ರಿ ಅವರಿಗೆ 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪ್ರದಾನ

April 05th, 02:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ಅಧ್ಯಕ್ಷ ದಿಸ್ಸನಾಯಕೆ ಅವರು 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪ್ರದಾನ ಮಾಡಿದರು. ಕೃತಜ್ಞತೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ, ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಐತಿಹಾಸಿಕ ಬಾಂಧವ್ಯದ ಸಂಕೇತವಾಗಿದೆ ಎಂದರು.

ಪ್ರಧಾನಮಂತ್ರಿಗಳ ಶ್ರೀಲಂಕಾ ಭೇಟಿ: ಸಭಾ ಒಪ್ಪಂದಗಳ ಪಟ್ಟಿ

April 05th, 01:45 pm

ವಿದ್ಯುತ್ ಆಮದು/ರಫ್ತುಗಾಗಿ ಹೆಚ್ ವಿ ಡಿ ಸಿ ಅಂತರ್ ಸಂಪರ್ಕ ಅನುಷ್ಠಾನಕ್ಕಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಶ್ರೀಲಂಕಾದ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯ ಸರ್ಕಾರದ ನಡುವಿನ ತಿಳುವಳಿಕಾ ಒಪ್ಪಂದ

ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

April 05th, 11:30 am

ಇಂದು ಅಧ್ಯಕ್ಷರಾದ ದಿಸ್ಸೆನಾಯಕೆ ಅವರಿಂದ 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪಡೆದಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಈ ಪ್ರಶಸ್ತಿ ನನ್ನನ್ನು ಗೌರವಿಸುವುದಷ್ಟೇ ಅಲ್ಲ, 140 ಕೋಟಿ ಭಾರತೀಯರನ್ನು ಗೌರವಿಸುತ್ತದೆ. ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಆಳವಾದ ಸ್ನೇಹಕ್ಕೆ ಗೌರವವಾಗಿದೆ.

PM Modi arrives in Sri Lanka

April 04th, 10:06 pm

Prime Minister Narendra Modi arrived in Colombo, Sri Lanka. During his visit, the PM will take part in various programmes. He will meet President Anura Kumara Dissanayake.

ಥಾಯ್ಲೆಂಡ್ ಮತ್ತು ಶ್ರೀಲಂಕಾ ಭೇಟಿಗೂ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

April 03rd, 06:00 am

ಪ್ರಧಾನಮಂತ್ರಿ ಪೆಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ ನಾನು ಇಂದು ಅಧಿಕೃತ ಭೇಟಿಗಾಗಿ ಮತ್ತು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಥಾಯ್ಲೆಂಡ್ ಗೆ ತೆರಳುತ್ತಿದ್ದೇನೆ.

ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ

April 02nd, 02:00 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.

ಜಾಫ್ನಾ ಸಾಂಸ್ಕೃತಿಕ ಕೇಂದ್ರವು ಭಾರತ ಮತ್ತು ಶ್ರೀಲಂಕಾ ನಡುವಿನ ನಿಕಟ ಸಾಂಸ್ಕೃತಿಕ ಸಹಕಾರವನ್ನು ಸೂಚಿಸುವ ಪ್ರಮುಖ ಉಪಕ್ರಮವಾಗಿದೆ: ಪ್ರಧಾನಮಂತ್ರಿ

February 11th, 09:43 pm

ಇಂದು ನಡೆದ ಜಾಫ್ನಾ ಸಾಂಸ್ಕೃತಿಕ ಕೇಂದ್ರದ ಲೋಕಾರ್ಪಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಂದು ಪ್ರಮುಖ ಉಪಕ್ರಮ ಎಂದು ಬಣ್ಣಿಸಿರುವುದಲ್ಲದೆ ಈ ಸಂದರ್ಭದಲ್ಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಉಪಸ್ಥಿತಿಯನ್ನು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿಯವರು 2015 ರಲ್ಲಿ ಈ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಮತ್ತು ಆ ವಿಶೇಷ ಭೇಟಿಯ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

PM Modi addresses Indian community in Sri Lanka

June 09th, 03:00 pm

PM Narendra Modi today addressed Indian community in Colombo, Sri Lanka. He said that India’s position in the world was getting stronger and credited the Indian diaspora for it. Wherever I go, am told about the successes and accomplishments of the Indian diaspora, he added.

PM Modi's meetings in Sri Lanka

June 09th, 02:40 pm

PM Narendra Modi held wide ranging talks with Sri Lankan President, Maithripala Sirisena, PM Ranil Wickremesinghe, former President Mahinda Rajapaksa and the Tamil National Alliance delegation led by Mr. R. Sampanthan.

PM Modi visits St. Anthony's Shrine at Kochchikade in Sri Lanka

June 09th, 12:33 pm

PM Narendra Modi began his Sri Lanka visit by paying my respects at one of the sites of the horrific Easter Sunday Attack, St. Anthony's Shrine, Kochchikade.