ರಾಷ್ಟ್ರ ನಿರ್ಮಾಣಕ್ಕೆ ಆರ್‌ಎಸ್‌ಎಸ್‌ ನೀಡಿರುವ ಶ್ರೀಮಂತ ಕೊಡುಗೆಗಳನ್ನು ಎತ್ತಿ ತೋರಿಸುವ ಪರಮ ಪೂಜ್ಯ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರ ಸ್ಪೂರ್ತಿದಾಯಕ ಭಾಷಣವನ್ನುಹಂಚಿಕೊಂಡ ಪ್ರಧಾನಮಂತ್ರಿ

October 02nd, 01:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ರಾಷ್ಟ್ರಕ್ಕೆ 100 ವರ್ಷಗಳ ಬದ್ಧತೆಯ ಸೇವೆ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಶ್ಲಾಘಿಸಿದ್ದಾರೆ. ಪರಮ ಪೂಜ್ಯ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ನೀಡಿದ ಸ್ಪೂರ್ತಿದಾಯಕ ಭಾಷಣವನ್ನು ಉಲ್ಲೇಖಿಸಿ, ಪ್ರಧಾನಮಂತ್ರಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಸಂಘ ವಹಿಸಿದ ಪ್ರಮುಖ ಪಾತ್ರ ಮತ್ತು ಭಾರತೀಯ ನಾಗರಿಕ ಮೌಲ್ಯಗಳನ್ನು ಪೋಷಿಸುವಲ್ಲಿ ಅದರ ಅಚಲ ಬದ್ಧತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 01st, 10:45 am

ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

October 01st, 10:30 am

ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ ಎಸ್‌ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.

ಮೋಹನ್ ಭಾಗವತ್ ಜಿ ಯಾವಾಗಲೂ 'ಏಕ್ ಭಾರತ್ ಶ್ರೇಷ್ಠ ಭಾರತ್' ನ ಪ್ರಬಲ ಪ್ರತಿಪಾದಕರಾಗಿದ್ದಾರೆ: ಪ್ರಧಾನಿ ಮೋದಿ

September 11th, 08:00 am

ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 11 ರಂದು ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಮತ್ತು 9/11 ದಾಳಿಯಂತಹ ಪ್ರಮುಖ ಘಟನೆಗಳನ್ನು ಉಲ್ಲೇಖಿಸಿದರು, ಅದೇ ಸಮಯದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಜಿ ಅವರ 75 ನೇ ಜನ್ಮದಿನದಂದು ಶ್ರದ್ಧಾಂಜಲಿ ಸಲ್ಲಿಸಿದರು. ಮೋಹನ್ ಭಾಗವತ್ ಜಿ ಅವರ ಅಧಿಕಾರಾವಧಿಯನ್ನು ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣದಲ್ಲಿ ಅತ್ಯಂತ ಪರಿವರ್ತನಾ ಹಂತವೆಂದು ಸ್ಮರಿಸಲಾಗುತ್ತದೆ ಎಂದು ಪ್ರಧಾನಿ ಹೇಳಿದರು. 'ಪಂಚ ಪರಿವರ್ತನ್' ದೃಷ್ಟಿಕೋನದ ಮೂಲಕ, ಮೋಹನ್ ಜಿ ಅವರು ಬಲವಾದ, ಸಮೃದ್ಧ ರಾಷ್ಟ್ರವನ್ನು ನಿರ್ಮಿಸಲು ಭಾರತೀಯರನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಅವರು ಹೇಳಿದರು.