ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ
July 12th, 02:31 pm
ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಒಡಿಶಾ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 04:16 pm
ಒಡಿಶಾದ ರಾಜ್ಯಪಾಲರಾದ ಶ್ರೀ ಹರಿಬಾಬು ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜುವಾಲ್ ಓರಂ ಜಿ, ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಮತ್ತು ಶ್ರೀ ಅಶ್ವಿನಿ ವೈಷ್ಣವ್ ಜಿ, ಒಡಿಶಾದ ಉಪ ಮುಖ್ಯಮಂತ್ರಿಗಳಾದ ಶ್ರೀ ಕನಕ್ ವರ್ಧನ್ ಸಿಂಗ್ ದೇವ್ ಜಿ ಮತ್ತು ಶ್ರೀಮತಿ ಪ್ರವತಿ ಪರಿದಾ ಜಿ, ರಾಜ್ಯ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ, ವಿಧಾನಸಭಾ ಸದಸ್ಯರೆ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ 18,600 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭುವನೇಶ್ವರದಲ್ಲಿ ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಡಿಶಾದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಅನುಗುಣವಾಗಿ, ಕುಡಿಯುವ ನೀರು, ನೀರಾವರಿ, ಕೃಷಿ ಮೂಲಸೌಕರ್ಯ, ಆರೋಗ್ಯ ಮೂಲಸೌಕರ್ಯ, ಗ್ರಾಮೀಣ ರಸ್ತೆಗಳು ಮತ್ತು ಸೇತುವೆಗಳು, ರಾಷ್ಟ್ರೀಯ ಹೆದ್ದಾರಿಗಳ ವಿಭಾಗಗಳು ಮತ್ತು ಹೊಸ ರೈಲ್ವೆ ಮಾರ್ಗ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡ 18,600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ
May 24th, 08:45 pm
ಒಡಿಶಾ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ
December 23rd, 05:50 pm
ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಒಡಿಶಾ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
June 12th, 09:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಮೋಹನ್ ಚರಣ್ ಮಾಝಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಕನಕವರ್ಧನ್ ಸಿಂಗ್ ದೇವ್ ಮತ್ತು ಶ್ರೀಮತಿ ಪಾರ್ವತಿ ಪರಿದಾ ಅವರಿಗೆ ಅವರು ಶುಭ ಕೋರಿದರು.