2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ​​​​​​​ ಸಂವಾದ

February 09th, 10:30 am

ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.

ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.

“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ

February 06th, 10:21 am

ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ‌ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆ

ಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ

February 06th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.

ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 02:12 pm

ಇಂದು ನಾವೆಲ್ಲರೂ ಒಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದ್ದೇವೆ. 200 ವರ್ಷಗಳ ಈ ಸಂದರ್ಭದಲ್ಲಿ, ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯು, ನಾವೆಲ್ಲರೂ ಈ ಪವಿತ್ರ ಉತ್ಸವದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲರಿಗೂ ಶುಭದ ಸಂಗತಿ. ಈ ಪವಿತ್ರ ಅವಧಿಯಲ್ಲಿ, ನಿಮ್ಮೆಲ್ಲ ಸಂತರಿಗೆ ನಾನು ನಮಸ್ಕರಿಸುತ್ತೇನೆ. ದ್ವಿಶತಮಾನೋತ್ಸವ ಉತ್ಸವದಂದು ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ.

ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗಿ ತಮ್ಮ ಮಾತುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಸ್ವಾಮಿನಾರಾಯಣ ಅವರ ʻಶಿಕ್ಷಾಪತ್ರಿʼಯ 200ನೇ ವರ್ಷಾಚರಣೆಯ ವಿಶೇಷ ಸಂದರ್ಭಕ್ಕೆ ಇಂದು ಎಲ್ಲರೂ ಸಾಕ್ಷಿಯಾಗುತ್ತಿದ್ದಾರೆ ಎಂದು ಒತ್ತಿ ಹೇಳಿದರು. ದ್ವಿಶತಮಾನೋತ್ಸವ ಆಚರಣೆಯು ಈ ಪವಿತ್ರ ಸಂದರ್ಭದ ಭಾಗಿಯಾಗುವುದು ನಿಜಕ್ಕೂ ಪ್ರತಿಯೊಬ್ಬರ ಸೌಭಾಗ್ಯವೇ ಸರಿ ಎಂದರು. ಈ ಪವಿತ್ರ ಸಮಯದಲ್ಲಿ ಎಲ್ಲಾ ಸಂತರಿಗೆ ನಮಸ್ಕರಿಸುವುದಾಗಿ ಹೇಳಿದ ಶ್ರೀ ಮೋದಿ ಅವರು, ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಭಗವಾನ್ ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳಿಗೆ ಶುಭಾಶಯಗಳನ್ನು ಕೋರಿದರು.

ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 08th, 12:30 pm

ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.

ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

December 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಸಿ ಪಿ ರಾಧಾಕೃಷ್ಣನ್ ಅವರ ಸನ್ಮಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ

December 01st, 11:15 am

(ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ನನ್ನ ಶುಭ ಹಾರೈಕೆಗಳನ್ನು ಅರ್ಪಿಸುತ್ತೇನೆ. ಈ ಸದನದಲ್ಲಿರುವ ಎಲ್ಲಾ ಗೌರವಾನ್ವಿತ ಸದಸ್ಯರು ಈ ಮೇಲ್ಮನೆಯ ಘನತೆಯನ್ನು ಸದಾ ಎತ್ತಿಹಿಡಿಯುತ್ತಾರೆ, ನಿಮ್ಮ ಘನತೆಯನ್ನು ಸದಾ ಗೌರವಿಸುತ್ತಾರೆ ಮತ್ತು ಎತ್ತಿಹಿಡಿಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ಭರವಸೆ.

ರಾಜ್ಯಸಭಾ ಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸನ್ಮಾನಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾತುಗಳು

December 01st, 11:00 am

ಇಂದು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು. ಈ ದಿನವು ರಾಜ್ಯಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರ ಪಾಲಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಬಣ್ಣಿಸಿದರು. ಸಭಾಧ್ಯಕ್ಷರಿಗೆ ಆತ್ಮೀಯ ಸ್ವಾಗತ ಕೋರಿದ ಶ್ರೀ ಮೋದಿ, ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ನನ್ನ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ಈ ಮೇಲ್ಮನೆಯ ಎಲ್ಲಾ ಗೌರವಾನ್ವಿತ ಸದಸ್ಯರು ಸದಾ ಈ ಗೌರವಾನ್ವಿತ ಸಂಸ್ಥೆಯ ಘನತೆಯನ್ನು ಉಲ್ಲೇಖಿಸುತ್ತಾರೆ ಮತ್ತು ನಿಮ್ಮ ಘನತೆಯನ್ನು ಕಾಪಾಡುವ ಬಗ್ಗೆಯೂ ಸದಾ ಎಚ್ಚರಿಕೆಯಿಂದ ಇರುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ದೃಢವಾದ ಭರವಸೆಯಾಗಿದೆ.

ಐಸಿಸಿ ಮಹಿಳಾ ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

November 06th, 10:15 am

ಗೌರವಾನ್ವಿತ ಪ್ರಧಾನಮಂತ್ರಿಗಳೇ, ತುಂಬು ಧನ್ಯವಾದಗಳು. ನಾವು ಇಲ್ಲಿರುವುದಕ್ಕೆ ನಮಗೆ ಅಪಾರ ಗೌರವ ಮತ್ತು ಸೌಭಾಗ್ಯ ತಂದಿದೆ ಎಂದು ನಾನು ಭಾವಿಸುತ್ತೇನೆ. ನಾನು ನಿಮಗೆ ಒಂದು ಅಭಿಯಾನದ ಬಗ್ಗೆ ಹೇಳಲು ಬಯಸುತ್ತೇನೆ. ಈ ಹೆಣ್ಣು ಮಕ್ಕಳು ಅದ್ಭುತಗಳನ್ನೇ ಮಾಡಿದ್ದಾರೆ, ನಿಜವಾಗಿಯೂ ಅದ್ಭುತ. ಕಳೆದ 2 ವರ್ಷಗಳಿಂದ, ಅವರು ತುಂಬಾ ಶ್ರಮ ಹಾಕಿದ್ದಾರೆ. ಅಪಾರ ಪ್ರಯತ್ನವನ್ನು ತೋರಿಸಿದ್ದಾರೆ. ಪ್ರತಿ ಅಭ್ಯಾಸ ಅವಧಿಯಲ್ಲೂ, ಅವರು ಪೂರ್ಣ ಗಮನ ಮತ್ತು ಶಕ್ತಿ ಹಾಕಿ ಆಡಿದರು. ಅವರ ಕಠಿಣ ಪರಿಶ್ರಮ ನಿಜವಾಗಿಯೂ ಫಲ ನೀಡಿದೆ ಎಂದು ನಾನು ಹೇಳುತ್ತೇನೆ.

ಐಸಿಸಿ ಮಹಿಳಾ ವಿಶ್ವಕಪ್ 2025 ಚಾಂಪಿಯನ್‌ಗಳೊಂದಿಗೆ ಪ್ರಧಾನಮಂತ್ರಿ ಸಂವಾದ

November 06th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂಬರ್‌ 7ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್‌ 2025 ಚಾಂಪಿಯನ್ ಗಳೊಂದಿಗೆ ಸಂವಾದ ನಡೆಸಿದರು. 2025ರ ನವೆಂಬರ್ 2ರಂದು ರಾತ್ರಿ ನಡೆದ ಫೈನಲ್ಸ್‌ ನಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿತು. ದೇವ ದೀಪಾವಳಿ ಮತ್ತು ಗುರುಪುರಬ್ ಎರಡನ್ನೂ ಗುರುತಿಸುವ ಈ ದಿನವು ಬಹಳ ಮಹತ್ವದ ದಿನವಾಗಿದೆ ಎಂದು ಪ್ರಧಾನಮಂತ್ರಿಹೇಳಿದರು ಮತ್ತು ಹಾಜರಿದ್ದ ಎಲ್ಲಾ ಆಟಗಾರ್ತಿಯರಿಗೂ ಶುಭ ಕೋರಿದರು.