ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.RJD forced Congress to surrender its CM claim at gunpoint: PM Modi in Bhagalpur, Bihar
November 06th, 12:01 pm
In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar
November 06th, 11:59 am
PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’PM Modi stirs up massive rallies with his addresses in Araria & Bhagalpur, Bihar
November 06th, 11:35 am
PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’Cabinet approves Minimum Support Prices (MSP) for Rabi Crops for Marketing Season 2026-27
October 01st, 03:31 pm
The Cabinet Committee on Economic Affairs (CCEA) chaired by PM Modi, has approved the increase in the Minimum Support Prices (MSP) for all mandated Rabi Crops for Marketing Season 2026-27. In line with the Union Budget 2018-19, this increase will ensure remunerative prices to the farmers and incentivise crop persification.79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.India celebrates 79th Independence Day
August 15th, 06:45 am
PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ಕಳೆದ 11 ವರ್ಷಗಳಿಂದ, ನಮ್ಮ ವಿವಿಧ ಉಪಕ್ರಮಗಳು ರೈತರ ಸಮೃದ್ಧಿಯನ್ನು ಹೆಚ್ಚಿಸಿವೆ ಮತ್ತು ಕೃಷಿ ಕ್ಷೇತ್ರದ ಒಟ್ಟಾರೆ ಪರಿವರ್ತನೆಯನ್ನು ಖಚಿತಪಡಿಸಿದೆ: ಪ್ರಧಾನಮಂತ್ರಿ
June 07th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ರೈತ ಪರ ಉಪಕ್ರಮಗಳ ದೂರಗಾಮಿ ಪರಿಣಾಮವನ್ನು ವಿವರಿಸಿದರು, ಈ ಉಪಕ್ರಮಗಳು ಕೃಷಿ ಹಾಗೂ ಕೃಷಿಕ ಸಮುದಾಯದ ಘನತೆ ಮತ್ತು ಸಮೃದ್ಧಿಯ ಮಹತ್ವದ ಹಂತವನ್ನು ಗುರುತಿಸುತ್ತವೆ ಎಂದು ಹೇಳಿದರು.ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 30th, 11:29 am
ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 30th, 10:53 am
ಬಿಹಾರದ ಕರಕಟ್‌ನಲ್ಲಿ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪವಿತ್ರ ಭೂಮಿಯಲ್ಲಿ ಬಿಹಾರದ ಅಭಿವೃದ್ಧಿಯನ್ನು ವೇಗಗೊಳಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು ಹಾಗು ₹48,000 ಕೋಟಿಗೂ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದರು. ತಮ್ಮನ್ನು ಆಶೀರ್ವದಿಸಲು ಬಂದಿದ್ದ ಬೃಹತ್ ಸಭೆಯನ್ನು ಪ್ರಧಾನಿ ಸ್ಮರಿಸಿದರು ಮತ್ತು ಬಿಹಾರದ ಮೇಲಿನ ಅವರ ವಾತ್ಸಲ್ಯ ಮತ್ತು ಪ್ರೀತಿಗೆ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಬೆಂಬಲವನ್ನು ತಾವು ಸದಾ ಅತ್ಯುನ್ನತ ಗೌರವದಿಂದ ಕಾಣುವುದಾಗಿ ಒತ್ತಿ ಹೇಳಿದರು. ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ತಮ್ಮ ಭಾವನಾತ್ಮಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
May 28th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ.Government is running a special campaign for the development of tribal society: PM Modi in Bilaspur, Chhattisgarh
March 30th, 06:12 pm
PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
March 30th, 03:30 pm
ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಮಾತಾ ಮಹಾಮಾಯೆಯ ನಾಡು ಮತ್ತು ಮಾತಾ ಕೌಶಲ್ಯೆಯ ತವರು ಮನೆಯಾದ ಛತ್ತೀಸಗಢಕ್ಕೆ ಹೊಸ ವರ್ಷದ ಶುಭ ಆರಂಭ ಮತ್ತು ನವರಾತ್ರಿಯ ಮೊದಲ ದಿನವಾದ ಇಂದಿನ ಮಹತ್ವವನ್ನು ಅವರು ಒತ್ತಿ ಹೇಳಿದರು. ರಾಜ್ಯಕ್ಕೆ ಸ್ತ್ರೀ ದೈವತ್ವಕ್ಕೆ ಮೀಸಲಾದ ಈ ಒಂಬತ್ತು ದಿನಗಳ ವಿಶೇಷ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ನವರಾತ್ರಿಯ ಮೊದಲ ದಿನದಂದು ಛತ್ತೀಸಗಢದಲ್ಲಿರುವುದು ತಮಗೆ ದೊರೆತ ಗೌರವ ಎಂದು ಅವರು ಹೇಳಿದರು ಮತ್ತು ಇತ್ತೀಚೆಗೆ ಭಕ್ತ ಶಿರೋಮಣಿ ಮಾತಾ ಕರ್ಮ ಅವರ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ತಿಳಿಸಿದರು. ನವರಾತ್ರಿ ಉತ್ಸವವು ರಾಮನವಮಿಯ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದರು, ಇದು ಛತ್ತೀಸಗಢದಲ್ಲಿ ರಾಮನ ಮೇಲಿನ ಅನನ್ಯ ಭಕ್ತಿಯನ್ನು, ವಿಶೇಷವಾಗಿ ರಾಮನಾಮಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿರುವ ರಾಮನಾಮಿ ಸಮಾಜದ ಅಸಾಧಾರಣ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು. ಛತ್ತೀಸಗಢದ ಜನರನ್ನು ಭಗವಾನ್ ರಾಮನ ತಾಯಿಯ ಕುಟುಂಬ ಎಂದು ಕರೆಯುವ ಮೂಲಕ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.