ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುಕೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
June 17th, 12:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಘನತೆವೆತ್ತ ಸರ್ ಕೀರ್ ಸ್ಟಾರ್ಮರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
June 14th, 11:40 am
ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ
May 28th, 01:59 pm
ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರ ಭಾರತ ಭೇಟಿಯ ಫಲಿತಾಂಶಗಳ ಪಟ್ಟಿ
May 22nd, 04:11 pm
ಭಯೋತ್ಪಾದನೆ ನಿಗ್ರಹಕ್ಕಾಗಿ ಜಂಟಿ ಕಾರ್ಯ ಗುಂಪು ಸ್ಥಾಪಿಸುವ ತಿಳುವಳಿಕೆ ಒಪ್ಪಂದಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ
May 06th, 05:24 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
May 01st, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 26th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್‌ನಲ್ಲಿ ಪಾಲುದಾರಿಕೆಗಾಗಿ ಭಾರತ-ಆರ್‌ಒಕೆ ಸಮಗ್ರ ಚೌಕಟ್ಟು
April 20th, 10:51 pm
ಏಪ್ರಿಲ್ 20, 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೊರಿಯಾ ಗಣರಾಜ್ಯದ (ROK) ಗೌರವಾನ್ವಿತ ಶ್ರೀ ಲೀ ಜೇ ಮ್ಯುಂಗ್ ಅವರ ನಡುವಿನ ಸಭೆಯಲ್ಲಿ, ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್‌ನಲ್ಲಿ ಪಾಲುದಾರಿಕೆಗಾಗಿ ತಮ್ಮ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಪರಸ್ಪರ ಪ್ರಯೋಜನಕಾರಿ ಸಹಕಾರದ ಕುರಿತು ಎರಡೂ ಕಡೆಯವರು ಫಲಪ್ರದ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.ಕೋಟಾ ವಿಮಾನ ನಿಲ್ದಾಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 07th, 03:15 pm
ಕಳೆದ ವಾರವಷ್ಟೇ ನನಗೆ ರಾಜಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಪವಿತ್ರ ಭೂಮಿ ಅಜ್ಮೀರ್‌ನಿಂದ, ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದ್ದೇವೆ. ಅದೇ ಕಾರ್ಯಕ್ರಮದಲ್ಲಿ, ರಾಜಸ್ಥಾನದ 21,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಅಜ್ಮೀರ್ ಭೇಟಿಯ ಕೆಲವೇ ದಿನಗಳ ನಂತರ, ಇಂದು ಕೋಟಾಗೆ ಸಂಪರ್ಕ ಹೊಂದಿದ ಈ ಪ್ರಮುಖ ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಒಂದೇ ವಾರದೊಳಗೆ, ರಾಜಸ್ಥಾನದಲ್ಲಿನ ಈ 2 ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಬಲ ಸಂದೇಶವನ್ನು ರವಾನಿಸುತ್ತವೆ. ರಾಜಸ್ಥಾನ ಇಂದು ಎಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಅವು ತೋರಿಸುತ್ತವೆ. ಅದು ಮೂಲಸೌಕರ್ಯವಾಗಿರಲಿ, ಯುವಕರಿಗೆ ಉದ್ಯೋಗಾವಕಾಶಗಳಾಗಲಿ, ರೈತರು ಮತ್ತು ಮಹಿಳೆಯರ ಯೋಜನೆಗಳಾಗಲಿ ಅಥವಾ ಪ್ರತಿಯೊಂದು ವಲಯದ ಉಪಕ್ರಮಗಳು ರಾಜಸ್ಥಾನದಾದ್ಯಂತ ಹೆಚ್ಚಿನ ವೇಗದಲ್ಲಿ ನಡೆಯುತ್ತಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೋಟಾ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ; ಪ್ರದೇಶದ ಪರಿವರ್ತನೆಗೆ ಒತ್ತು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೋಟಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದರು. ಇದು ಹಾಡೋತಿ ಪ್ರಾಂತ್ಯದ ಪಾಲಿಗೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನವು ಅಭೂತಪೂರ್ವ ವೇಗದಲ್ಲಿ ಪ್ರಗತಿ ಹೊಂದುತ್ತಿದೆ. ಈ ಹೊಸ ವಿಮಾನ ನಿಲ್ದಾಣವು ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ವೇಗವರ್ಧಕವಾಗಲಿದೆ, ಎಂದು ಒತ್ತಿಹೇಳಿದರು.ಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
March 02nd, 02:30 pm
ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
March 01st, 12:09 pm
ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಪ್ರಧಾನಮಂತ್ರಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿ
February 26th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೆನಡಾ ಪ್ರಧಾನಮಂತ್ರಿ ಮಾನ್ಯ ಮಾರ್ಕ್ ಕಾರ್ನಿ ಅವರು 2026ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಪ್ರಧಾನಮಂತ್ರಿ ಕಾರ್ನಿ ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಲಿದೆ.ಮುಂಬೈನಲ್ಲಿ ನಡೆದ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
February 18th, 12:07 pm
ಇಂದು, ವಿಶ್ವದ ಎರಡು ಮಹಾನ್ ನಾವೀನ್ಯತೆ ಕೇಂದ್ರಗಳು ಒಟ್ಟಿಗೆ ಬರುತ್ತಿವೆ. ನಾವು ಭಾರತ ಮತ್ತು ಫ್ರಾನ್ಸ್ ಬಗ್ಗೆ ಮಾತನಾಡುವಾಗ, ನಮ್ಮ ಸಂಬಂಧವು ನಾವೀನ್ಯತೆ ಬಗ್ಗೆ ಮಾತ್ರವಲ್ಲ, ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಬಗ್ಗೆಯೂ ಆಗಿದೆ. ಈ ಮನೋಭಾವದಿಂದ, ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು 2026 ಅನ್ನು ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷವೆಂದು ಆಚರಿಸಲು ನಿರ್ಧರಿಸಿದ್ದೇವೆ. ಇದು ಕೇವಲ ಆಚರಣೆಯಲ್ಲ; ಇದು ನಮ್ಮ ಹಂಚಿಕೆಯ ಬದ್ಧತೆ - ನಾವೀನ್ಯತೆಗಾಗಿ ಬದ್ಧತೆ, ಮುನ್ನಡೆಸಲು ಬದ್ಧತೆ.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಫ್ರೆಂಚ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿಯ ಫಲಶ್ರುತಿಯ ವಿವರಗಳು ಹೀಗಿವೆ
February 17th, 07:00 pm
ಭಾರತ-ಫ್ರಾನ್ಸ್ ಸಂಬಂಧವನ್ನು ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಮೇಲ್ದರ್ಜೆಗೇರಿಸುವುದುಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 17th, 04:00 pm
ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಮಂತ್ರಿ, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಪ್ರಸ್ತಾಪ
February 17th, 09:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಈ ಭೇಟಿ ಭಾರತ-ಫ್ರಾನ್ಸ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ವಿಶ್ವಾಸವಿದೆ ತಿಳಿಸಿದರು.ಫೆಬ್ರವರಿ 17 ರಂದು ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷರಾದ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿರುವ ಪ್ರಧಾನಮಂತ್ರಿ
February 16th, 09:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 17 ರಂದು ಮುಂಬೈಗೆ ಪ್ರಯಾಣಿಸಲಿದ್ದು, ಅಲ್ಲಿ ಅವರು ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ.