ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಪ್ರಧಾನಮಂತ್ರಿ ಭೇಟಿ

March 09th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ, ಪ್ರಧಾನ ಮಂತ್ರಿಗಳು ಕೇರಳದ ಎರ್ನಾಕುಲಂನಲ್ಲಿ ಸುಮಾರು ₹10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸುತ್ತಾರೆ ಮತ್ತು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿಗಳು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.