ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 03:44 pm
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ
October 08th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಅಕ್ಟೋಬರ್ 8-9ರಂದು ಮಹಾರಾಷ್ಟ್ರಕ್ಕೆ ಭೇಟಿ
October 07th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಕ್ಟೋಬರ್ 8-9 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನವಿ ಮುಂಬೈ ತಲುಪಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:30 ರ ಸುಮಾರಿಗೆ ಪ್ರಧಾನ ಮಂತ್ರಿ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಮುಂಬೈ ಮೆಟ್ರೋ ಪ್ರಯಾಣದ ಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
October 06th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮುಂಬೈ ಮೆಟ್ರೋ ಪ್ರಯಾಣದ ಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.ಮುಂಬೈ ಮೆಟ್ರೋ ಲೈನ್ 3ರ ಆರೆ ಜೆವಿಎಲ್ ಆರ್ ನಿಂದ ಬಿಕೆಸಿ ವಿಭಾಗ ಉದ್ಘಾಟಣೆಯಾದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮುಂಬೈ ಜನತೆಗೆ ಅಭಿನಂದನೆ ಸಲ್ಲಿಸಿದರು
October 05th, 09:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮುಂಬೈ ಮೆಟ್ರೋ ಲೈನ್ 3ನೇ, ಹಂತ -1ರ ಆರೆ ಜೋಗೇಶ್ವರಿ-ವಿಖ್ರೋಲಿ ಲಿಂಕ್ ರಸ್ತೆಯಿಂದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ವಿಭಾಗ ಉದ್ಘಾಟಣೆಯಾದ ಸಂದರ್ಭದಲ್ಲಿ ಮುಂಬೈ ಜನರನ್ನು ಅಭಿನಂದಿಸಿದರು. ಮುಂಬೈನ ಮೆಟ್ರೋ ಜಾಲ ವಿಸ್ತರಣೆಯಿಂದ ಮುಂಬೈ ಜನರಿಗೆ 'ಸುಗಮ ಜೀವನವು' ದೊರೆಯಲಿದೆ ಎಂದು ಅವರು ಹೇಳಿದರು.