ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 03:35 pm
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿ ಅವರಿಂದ ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ
September 20th, 09:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ ನಡೆಸಿದರು. ಈ ಸಂಕೀರ್ಣದ ಕಾಮಗಾರಿ ಪೂರ್ಣಗೊಂಡ ನಂತರ ಇದು ವಿಶ್ವದ ಅತಿದೊಡ್ಡ ಕಡಲ ವಸ್ತುಸಂಗ್ರಹಾಲಯವಾಗಲಿದೆ. ಇದು ಪ್ರವಾಸೋದ್ಯಮ, ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯ ಕೇಂದ್ರವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಭಾರತದ ಪ್ರಾಚೀನ ಸಾಗರ ಸಾಂಪ್ರದಾಯಿಕತೆಗಳನ್ನೂ ಪ್ರದರ್ಶಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.PM chairs 47th Annual General Meeting of Prime Ministers Museum and Library (PMML) Society in New Delhi
June 23rd, 09:35 pm
PM Modi chaired the 47th AGM of the Prime Ministers Museum and Library (PMML) Society. He put forward the vision of a “Museum Map of India” and suggested the development of a comprehensive national database of all museums in the country. He highlighted the need to create committee to bring out fresh ideas on museums. He advised compiling documents related to the Emergency period to aid researchers.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೊಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
February 24th, 06:40 pm
ಅಸ್ಸಾಂ ರಾಜ್ಯಪಾಲ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾತ್ಮಕ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಡಾ. ಎಸ್. ಜೈಶಂಕರ್ ಮತ್ತು ಸರ್ಬಾನಂದ ಸೋನೊವಾಲ್, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆಯ ಸದಸ್ಯರು, ಎಲ್ಲಾ ಕಲಾವಿದ ಸ್ನೇಹಿತರು ಮತ್ತು ಅಸ್ಸಾಂನ ನನ್ನ ಸಹೋದರಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು
February 24th, 06:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಮೆಗಾ ಜುಮೋಯಿರ್ ಕಾರ್ಯಕ್ರಮವಾದ ಜುಮೋಯಿರ್ ಬಿನಂದಿನಿ 2025 ರಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಚೈತನ್ಯ, ಉತ್ಸಾಹ ಮತ್ತು ಉಲ್ಲಾಸದಿಂದ ತುಂಬಿದ ವಾತಾವರಣವಿತ್ತು ಎಂದು ಹೇಳಿದರು. ಝುಮೋಯಿರ್ ನ ಎಲ್ಲಾ ಕಲಾವಿದರು ಮಾಡಿದ ಅದ್ಭುತವಾದ ಸಿದ್ಧತೆಗಳು ಚಹಾ ತೋಟಗಳ ಪರಿಮಳ ಮತ್ತು ಸೌಂದರ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು. ಜನರು ಝುಮರ್ ಮತ್ತು ಚಹಾ ತೋಟ ಸಂಸ್ಕೃತಿಯೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವಂತೆಯೇ, ತಾವೂ ಕೂಡ ಇದೇ ರೀತಿಯ ಸಂಪರ್ಕವನ್ನು ಹೊಂದಿರುವುದಾಗಿ ಅವರು ಹೇಳಿದರು. ಇಂದು ಜುಮೋಯಿರ್ ನೃತ್ಯವನ್ನು ಪ್ರದರ್ಶಿಸುವ ಇಷ್ಟು ದೊಡ್ಡ ಸಂಖ್ಯೆಯ ಕಲಾವಿದರು ದಾಖಲೆಯನ್ನು ಸ್ಥಾಪಿಸುತ್ತಾರೆ ಎಂದು ಅವರು ಹೇಳಿದರು. 2023 ರಲ್ಲಿ 11,000 ಕಲಾವಿದರು ಬಿಹು ನೃತ್ಯ ಪ್ರದರ್ಶಿಸಿದ ದಾಖಲೆಯನ್ನು ಮಾಡಿದ ಸಂದರ್ಭದಲ್ಲಿ ತಮ್ಮ ಅಸ್ಸಾಂ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಅದು ತಮಗೆ ಮರೆಯಲಾಗದ ನೆನಪು ಎಂದು ಹೇಳಿದರು ಮತ್ತು ಇದೇ ರೀತಿಯ ರೋಮಾಂಚಕಾರಿ ಪ್ರದರ್ಶನವನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದರು. ಅದ್ಭುತ ಸಾಂಸ್ಕೃತಿಕ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಅಸ್ಸಾಂ ಸರ್ಕಾರ ಮತ್ತು ಅದರ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ಚಹಾ ಸಮುದಾಯ ಮತ್ತು ಬುಡಕಟ್ಟು ಜನರು ಆಚರಣೆಯಲ್ಲಿ ಭಾಗವಹಿಸುತ್ತಿರುವ ಇಂದು ಅಸ್ಸಾಂಗೆ ಹೆಮ್ಮೆಯ ದಿನವಾಗಿದೆ ಎಂದು ಅವರು ಹೇಳಿದರು. ಈ ವಿಶೇಷ ದಿನದಂದು ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.Prime Minister’s meeting with President of the UAE
February 13th, 05:33 pm
Prime Minister Narendra Modi arrived in Abu Dhabi on an official visit to the UAE. In a special and warm gesture, he was received at the airport by the President of the UAE His Highness Sheikh Mohamed bin Zayed Al Nahyan, and thereafter, accorded a ceremonial welcome. The two leaders held one-on-one and delegation level talks. They reviewed the bilateral partnership and discussed new areas of cooperation.ಇಂಟರ್‌ನ್ಯಾಶನಲ್ ಮ್ಯೂಸಿಯಂ ಎಕ್ಸ್‌ಪೋ-2023 ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
May 18th, 11:00 am
ನನ್ನ ಸಂಪುಟ ಸಹೋದ್ಯೋಗಿಗಳಾದ ಜಿ. ಕಿಶನ್ ರೆಡ್ಡಿ ಜಿ, ಮೀನಾಕ್ಷಿ ಲೇಖಿ ಜಿ ಮತ್ತು ಅರ್ಜುನ್ ರಾಮ್ ಮೇಘವಾಲ್ ಜಿ, ಲೌವ್ರೆ ಮ್ಯೂಸಿಯಂ ನಿರ್ದೇಶಕ ಮ್ಯಾನುಯೆಲ್ ರಬಾಟೆ ಜಿ, ವಿಶ್ವದ ವಿವಿಧ ದೇಶಗಳ ಅತಿಥಿಗಳು, ಗಣ್ಯರು, ಮಹಿಳೆಯರು ಮತ್ತು ಮಹನಿಯರೆ! ನಾನು ನಿಮಗೆಲ್ಲರಿಗೂ ಅಂತಾರಾಷ್ಟ್ರೀಯ ಮ್ಯೂಸಿಯಂ ದಿನದ ಶುಭಾಶಯಗಳನ್ನು ಕೋರುತ್ತೇನೆ. ಮ್ಯೂಸಿಯಂ ಲೋಕದ ದಿಗ್ಗಜರು ಇಂದು ಇಲ್ಲಿ ಸೇರಿದ್ದಾರೆ. ಇಂದಿನ ಸಂದರ್ಭವೂ ವಿಶೇಷವಾಗಿದೆ, ಏಕೆಂದರೆ ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದೆ.ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಉದ್ಘಾಟಿಸಿದ ಪ್ರಧಾನಮಂತ್ರಿ
May 18th, 10:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಅನ್ನು ಉದ್ಘಾಟಿಸಿದರು. ಉತ್ತರ ಮತ್ತು ದಕ್ಷಿಣ ಬ್ಲಾಕ್ ಗಳಲ್ಲಿ ಮುಂಬರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದ ವರ್ಚುವಲ್ ವಾಕ್ ಥ್ರೋವನ್ನು ಅವರು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಟೆಕ್ನೋ ಮೇಳ, ಸಂರಕ್ಷಣಾ ಪ್ರಯೋಗಾಲಯ ಮತ್ತು ವಸ್ತುಪ್ರದರ್ಶನಗಳಲ್ಲಿ ವಾಕ್ ಥ್ರೂ ನಡೆಸಿದರು. 'ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ' ಎಂಬ ಈ ವರ್ಷದ ಧ್ಯೇಯವಾಕ್ಯದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ 47 ನೇ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನವನ್ನು ಆಚರಿಸಲು ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋವನ್ನು ಆಯೋಜಿಸಲಾಗಿದೆ.2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.Welfare of tribal communities is our foremost priority: PM Modi in Vyara, Gujarat
October 20th, 03:33 pm
PM Modi laid the foundation stone of multiple development initiatives in Vyara, Tapi. He said that the country has seen two types of politics regarding tribal interests and the welfare of tribal communities. On the one hand, there are parties which do not care for tribal interests and have a history of making false promises to the tribals while on the other hand there is a party like BJP, which always gave top priority to tribal welfare.PM lays foundation stone of multiple development initiatives worth over Rs. 1970 crore in Vyara, Tapi, Gujarat
October 20th, 03:32 pm
PM Modi laid the foundation stone of multiple development initiatives in Vyara, Tapi. He said that the country has seen two types of politics regarding tribal interests and the welfare of tribal communities. On the one hand, there are parties which do not care for tribal interests and have a history of making false promises to the tribals while on the other hand there is a party like BJP, which always gave top priority to tribal welfare.ನಮೋ ಆ್ಯಪ್‌ನಲ್ಲಿಏಪ್ರಿಲ್ 24ರ ‘ಮನ್ ಕಿ ಬಾತ್’ ಆಧಾರಿತ ಎರಡು ರಸಪ್ರಶ್ನೆಗಳಲ್ಲಿಭಾಗವಹಿಸುವಂತೆ ಜನರಿಗೆ ಪ್ರಧಾನಮಂತ್ರಿ ಮನವಿ
April 25th, 06:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಮೋ ಆ್ಯಪ್‌ನಲ್ಲಿಏಪ್ರಿಲ್ 24 ರಂದು ‘ಮನ್ ಕಿ ಬಾತ್’ ಕಾರ್ಯಕ್ರಮದ ಆಧಾರದ ಮೇಲೆ ಎರಡು ರಸಪ್ರಶ್ನೆಗಳಲ್ಲಿಭಾಗವಹಿಸುವಂತೆ ಜನರನ್ನು ಕೋರಿದ್ದಾರೆ. ಶ್ರೀ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಸಪ್ರಶ್ನೆಯನ್ನು ಸಂಪರ್ಕಿಸುವ ಕೊಂಡಿಯನ್ನು ಹಂಚಿಕೊಂಡರು.