ಎಸ್.ಸಿ.ಒ. ಶೃಂಗಸಭೆಯ ಸಂದರ್ಭದಲ್ಲಿ ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
August 31st, 04:50 pm
ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿಯಾದರು.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ ವೇಳೆ ನೀಡಿದ ಹೇಳಿಕೆಯ ಕನ್ನಡ ಅನುವಾದ
April 04th, 12:59 pm
ಮೊದಲಿಗೆ ನಾನು ಈ ಶೃಂಗಸಭೆಯನ್ನು ಅತ್ಯುತ್ತಮವಾಗಿ ಆಯೋಜಿಸಿರುವುದಕ್ಕಾಗಿ ಪ್ರಧಾನ ಮಂತ್ರಿ ಘನತೆವೆತ್ತ ಶಿನವತ್ರಾ ಮತ್ತು ಥೈಲ್ಯಾಂಡ್ ಸರ್ಕಾರಕ್ಕೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ಸಲ್ಲಿಸಲು ಬಯಸುತ್ತೇನೆ.ಥಾಯ್ಲೆಂಡ್ ನಲ್ಲಿ ನಡೆದ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು
April 04th, 12:54 pm
ಥಾಯ್ಲೆಂಡ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 6ನೇ ಬಿಮ್‌ಸ್ಟೆಕ್ (ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಶೃಂಗಸಭೆಯ ವಿಷಯ - ಬಿಮ್‌ಸ್ಟೆಕ್: ಸಮೃದ್ಧ, ಸ್ಥಿತಿಸ್ಥಾಪಕ ಮತ್ತು ಮುಕ್ತ. ಇದು ಬಿಮ್‌ಸ್ಟೆಕ್ ಪ್ರದೇಶದ ನಾಯಕರ ಆದ್ಯತೆಗಳು ಮತ್ತು ಜನರ ಆಕಾಂಕ್ಷೆಗಳನ್ನು ಹಾಗೂ ಜಾಗತಿಕ ಅನಿಶ್ಚಿತತೆಯ ಸಮಯದಲ್ಲಿ ಹಂಚಿಕೆಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಬಿಮ್‌ಸ್ಟೆಕ್ ನ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.ʻಬಿಮ್‌ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ
April 04th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ 6ನೇ ʻಬಿಮ್‌ಸ್ಟೆಕ್ʼ ಶೃಂಗಸಭೆಯಲ್ಲಿ ʻಬಿಮ್‌ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದರು. ʻಬಿಮ್‌ಸ್ಟೆಕ್ʼ ರಾಷ್ಟ್ರಗಳಾದ್ಯಂತ ವ್ಯಾಪಾರವನ್ನು ಉತ್ತೇಜಿಸಲು ಮತ್ತು ಐಟಿ ಕ್ಷೇತ್ರದ ಶ್ರೀಮಂತ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅವರು ಒತ್ತಾಯಿಸಿದರು. ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡಲು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಶ್ರೀ ಮೋದಿ ಅವರು ಕರೆ ನೀಡಿದರು. ʻಬಿಮ್‌ಸ್ಟೆಕ್ʼಗೆ ಸಾಮೂಹಿಕವಾಗಿ ಶಕ್ತಿ ತುಂಬುವಂತೆ ಒತ್ತಾಯಿಸಿದ ಅವರು, ನಾಯಕತ್ವ ವಹಿಸುವ ಯುವಕರ ಪಾತ್ರವನ್ನು ಒತ್ತಿಹೇಳಿದರು. ಸಾಂಸ್ಕೃತಿಕ ಸಂಪರ್ಕಗಳು ʻಬಿಮ್‌ಸ್ಟೆಕ್ʼ ರಾಷ್ಟ್ರಗಳನ್ನು ಮತ್ತಷ್ಟು ಹತ್ತಿರ ತರುತ್ತವೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
April 04th, 09:43 am
ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.ಮ್ಯಾನ್ಮಾರ್ ಭೂಕಂಪದ ಹಿನ್ನೆಲೆಯಲ್ಲಿ ಹಿರಿಯ ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ
March 29th, 01:41 pm
ಮ್ಯಾನ್ಮಾರ್‌ನಲ್ಲಿ ಭೂಕಂಪದ ದುರಂತ ಸನ್ನಿವೇಶದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸವಾಲಿನ ಸಮಯದಲ್ಲಿ ಮ್ಯಾನ್ಮಾರ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಆಪ್ತ ಸ್ನೇಹಿತ ಮತ್ತು ನೆರೆಹೊರೆಯ ದೇಶವಾದ ಭಾರತದ ದೃಢವಾದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. ಈ ವಿಪತ್ತಿಗೆ ಪ್ರತಿಕ್ರಿಯೆಯಾಗಿ, ಭಾರತ ಸರ್ಕಾರವು ಆಪರೇಷನ್ ಬ್ರಹ್ಮ ಪ್ರಾರಂಭಿಸಿದೆ, ಇದು ವಿಕೋಪದಿಂದ ಬಾಧಿತವಾಗಿರುವ ಪ್ರದೇಶಗಳಿಗೆ ತಕ್ಷಣದ ಪರಿಹಾರ ಮತ್ತು ಸಹಾಯವನ್ನು ಒದಗಿಸುವ ಉಪಕ್ರಮವಾಗಿದೆ.ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಭೂಕಂಪ – ಪ್ರಧಾನಮಂತ್ರಿ ಕಳವಳ
March 28th, 02:18 pm
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಭೂಕಂಪಗಳ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಚುನಾವಣೆಯ ಗೆಲುವಿಗಾಗಿ ಡಾ ಆಂಗ್ ಸಾನ್ ಸೂಕಿ ಮತ್ತು ಎನ್.ಎಲ್.ಡಿಗೆ ಪ್ರಧಾನಮಂತ್ರಿ ಅಭಿನಂದನೆ
November 12th, 10:56 pm
ಚುನಾವಣೆಯ ಗೆಲುವಿಗಾಗಿ ಡಾ ಆಂಗ್ ಸಾನ್ ಸೂಕಿ ಮತ್ತು ಎನ್.ಎಲ್.ಡಿಗೆ ಪ್ರಧಾನಮಂತ್ರಿ ಅಭಿನಂದನೆHistoric decisions taken by Cabinet to boost infrastructure across sectors
June 24th, 04:09 pm
Union Cabinet chaired by PM Narendra Modi took several landmark decisions, which will go a long way providing a much needed boost to infrastructure across sectors, which are crucial in the time of pandemic. The sectors include animal husbandry, urban infrastructure and energy sector.Telephone conversation between Prime Minister and State Counsellor of Myanmar Daw Aung San Suu Kyi
April 30th, 04:15 pm
PM Narendra Modi had a telephonic conversation with Aung San Suu Kyi, the State Counsellor of Myanmar. The PM conveyed India's readiness to provide all possible support to Myanmar for mitigating the health and economic impact of COVID-19.ಮ್ಯಾನ್ಮಾರ್ ಅಧ್ಯಕ್ಷರ ಅಧಿಕೃತ ಭೇಟಿಯಲ್ಲಿ ವಿನಿಮಯವಾದ ತಿಳಿವಳಿಕೆ ಒಪ್ಪಂದಗಳು
February 27th, 03:23 pm
ಮ್ಯಾನ್ಮಾರ್ ಅಧ್ಯಕ್ಷರ ಅಧಿಕೃತ ಭೇಟಿಯಲ್ಲಿ ವಿನಿಮಯವಾದ ತಿಳಿವಳಿಕೆ ಒಪ್ಪಂದಗಳುಮ್ಯಾನ್ಮಾರ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ (ಫೆಬ್ರವರಿ 26-29, 2020)
February 27th, 03:22 pm
ಮ್ಯಾನ್ಮಾರ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ (ಫೆಬ್ರವರಿ 26-29, 2020)