ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವರ್ಷಾಚರಣೆ ಆಚರಿಸಿದ ಪ್ರಧಾನಮಂತ್ರಿ
September 25th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಈ ಉಪಕ್ರಮವು ಭಾರತದ ಆರ್ಥಿಕತೆ ಮತ್ತು ಉದ್ಯಮಶೀಲ ಪರಿಸರ ವ್ಯವಸ್ಥೆಯ ಮೇಲೆ ತನ್ನ ಪರಿವರ್ತನಾತ್ಮಕ ಪರಿಣಾಮವನ್ನು ಬೀರಿದೆ. ಮೇಕ್ ಇನ್ ಇಂಡಿಯಾ ಭಾರತದ ಉದ್ಯಮಿಗಳಿಗೆ ನೀಡಿದ ಪ್ರೋತ್ಸಾಹವನ್ನು ಮತ್ತು ಇದರಿಂದಾಗಿ ಉಂಟಾದ ಜಾಗತಿಕ ಪರಿಣಾಮವನ್ನು ಶ್ರೀ ಮೋದಿಯವರು ಶ್ಲಾಘಿಸಿದರು.ಆಯುಷ್ಮಾನ್ ಭಾರತದ ಏಳನೇ ವಾರ್ಷಿಕೋತ್ಸವವನ್ನು ಆಚರಿಸಿದ ಪ್ರಧಾನಮಂತ್ರಿ
September 23rd, 12:52 pm
ಆಯುಷ್ಮಾನ್ ಭಾರತ ಯೋಜನೆಯು 7 ವರ್ಷಗಳನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಆಯುಷ್ಮಾನ್ ಭಾರತ್ ಲಕ್ಷಾಂತರ ನಾಗರಿಕರಿಗೆ ಕೈಗೆಟುಕುವ ಆರ್ಥಿಕ ರಕ್ಷಣೆ ಮತ್ತು ಘನತೆಯನ್ನು ನೀಡುವ ಮೂಲಕ ಗುಣಮಟ್ಟದ ಆರೋಗ್ಯ ರಕ್ಷಣೆಯ ಉಪಯೋಗವನ್ನು ಮರು ವ್ಯಾಖ್ಯಾನಿಸಿದೆ ಎಂದು ಹೇಳಿದ್ದಾರೆ.ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
September 16th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಡಿಜಿಟಲ್ ಇಂಡಿಯಾ ಉಪಕ್ರಮದ 10 ವರ್ಷಗಳನ್ನು ಶ್ಲಾಘಿಸಿರುವ ಪ್ರಧಾನಮಂತ್ರಿ
July 01st, 09:40 am
ಡಿಜಿಟಲ್ ಇಂಡಿಯಾ ಉಪಕ್ರಮವು ಯಶಸ್ವಿಯಾಗಿ 10 ವರ್ಷ ಪೂರ್ಣಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದು ದಶಕದ ನಂತರ, ಈ ಉಪಕ್ರಮವು ಅಸಂಖ್ಯಾತ ಜನರನ್ನು ತಲುಪಿದ್ದು ಸಬಲೀಕರಣದ ಹೊಸ ಯುಗಕ್ಕೆ ನಾಂದಿ ಹಾಡಿದೆ. ಈ ಪಯಣಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ. 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪದಿಂದ ಭಾರತವು ಡಿಜಿಟಲ್ ಪಾವತಿಗಳಲ್ಲಿ ಅಪಾರ ಪ್ರಗತಿ ಸಾಧಿಸಿದೆ ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ವನ್ಯಜೀವಿಗಳನ್ನು ರಕ್ಷಿಸುವ ರಾಷ್ಟ್ರದ ಬದ್ಧತೆಯನ್ನು ಎತ್ತಿ ತೋರಿಸಿರುವ ಪ್ರಧಾನಮಂತ್ರಿ
March 03rd, 07:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಶ್ವ ವನ್ಯಜೀವಿ ದಿನದ ಸಂದರ್ಭದಲ್ಲಿ, ವಿಶ್ವದ ವೈವಿಧ್ಯಮಯ ವನ್ಯಜೀವಿಗಳನ್ನು ರಕ್ಷಿಸುವ ರಾಷ್ಟ್ರದ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ.ಪರೀಕ್ಷೆಯ ಒತ್ತಡ ಮತ್ತು ಆತಂಕವನ್ನು ಯಶಸ್ವಿಯಾಗಿ ಎದುರಿಸಿದ ಅತ್ಯುತ್ತಮ ತಜ್ಞರಿಂದ, ಅಂದರೆ ಎಕ್ಸಾಮ್ ವಾರಿಯರ್ಸ್ ಅವರಿಂದ ಇದನ್ನು ಕೇಳಿ ಎಂದ ಪ್ರಧಾನಮಂತ್ರಿ
February 17th, 07:41 pm
'ಪರೀಕ್ಷಾ ಪೇ ಚರ್ಚಾ-2025ರ' ವಿಶೇಷ ಸಂಚಿಕೆಯು ಫೆಬ್ರವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಪರೀಕ್ಷೆಯ ಒತ್ತಡ ಮತ್ತು ಆತಂಕವನ್ನು ಯಶಸ್ವಿಯಾಗಿ ಎದುರಿಸಿದ ಯುವ ಎಕ್ಸಾಮ್ ವಾರಿಯರ್ಸ್ ಭಾಗವಹಿಸಲಿದ್ದಾರೆ. ಈ ಸಂಚಿಕೆಯು ಪರೀಕ್ಷೆಯ ಒತ್ತಡ, ಆತಂಕದಲ್ಲಿಯೂ ಸ್ಥಿರವಾಗಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಅವರ ಅನುಭವಗಳು, ತಂತ್ರಗಳು ಮತ್ತು ಒಳನೋಟಗಳನ್ನು ನೀಡಲಿದೆ.ಪರೀಕ್ಷಾ ಸಮಯದಲ್ಲಿ ಸಕಾರಾತ್ಮಕತೆಯೇ ಪರೀಕ್ಷಾ ಯೋಧರಿಗೆ ಪರಮ ಮಿತ್ರ : ಪ್ರಧಾನಮಂತ್ರಿ
February 15th, 05:58 pm
ಪರೀಕ್ಷಾ ತಯಾರಿಯ ಸಮಯದಲ್ಲಿ ಧನಾತ್ಮಕತೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಸ್ನೇಹಿತ ಎಂದು ಅದರ ಪ್ರಾಮುಖ್ಯತೆಯ ಬಗ್ಗೆ ಒತ್ತಿಹೇಳುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆಯ 'ಪರೀಕ್ಷಾ ಪೇ ಚರ್ಚಾ' ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.ಗ್ರಾಮೀಣ ಭೂ ಡಿಜಿಟಲೀಕರಣವು ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸುತ್ತಿದೆ: ಪ್ರಧಾನಮಂತ್ರಿ
January 18th, 10:54 am
ಗ್ರಾಮೀಣ ಭೂ ಡಿಜಿಟಲೀಕರಣವು ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಇಂದು ಹೇಳಿದರು.ಪರಿವರ್ತಕ ಸ್ವಾಮಿತ್ವ ಯೋಜನೆಯ ಬಗ್ಗೆ ಮಾಹಿತಿಯ ಎಳೆಯನ್ನು ಹಂಚಿಕೊಂಡ ಪ್ರಧಾನಮಂತ್ರಿ
January 18th, 10:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿವರ್ತಕ ಸ್ವಾಮಿತ್ವ ಯೋಜನೆಯ ಬಗ್ಗೆ ಮಾಹಿತಿಯ ಎಳೆಯನ್ನು ಹಂಚಿಕೊಂಡರು.ಭಾರತದ ಪ್ರತಿಭಾವಂತ ಯುವಕರು ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದ್ದಾರೆ: ಪ್ರಧಾನಮಂತ್ರಿ
January 04th, 04:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು, ಈ ಯಶಸ್ಸಿಗೆ ರಾಷ್ಟ್ರದ ಯುವಕರ ಶಕ್ತಿ ಮತ್ತು ಪ್ರತಿಭೆಯೇ ಕಾರಣ ಎಂದು ಅವರು ಹೇಳಿದ್ದಾರೆ.ಪ್ರಧಾನಮಂತ್ರಿಯವರು ಡಿಸೆಂಬರ್ 26 ರಂದು ನವದೆಹಲಿಯಲ್ಲಿ ವೀರ ಬಾಲ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
December 25th, 01:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಡಿಸೆಂಬರ್ 2024 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ಭಾರತದ ಭವಿಷ್ಯದ ಅಡಿಪಾಯ ಎಂದು ಮಕ್ಕಳನ್ನು ಗೌರವಿಸುವ ರಾಷ್ಟ್ರವ್ಯಾಪಿ ಆಚರಣೆಯಾದ ವೀರ ಬಾಲ ದಿವಸ್‌ನಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Our Yuva Shakti can do wonders: Prime Minister
November 28th, 07:41 pm
Expressing confidence that India’s Yuva Shakti can do wonders, the Prime Minister Shri Narendra Modi reiterated the Government’s commitment to give them all the opportunities to make them shine and excel.Prime Minister hails Make In India success story for global economic boost
July 16th, 10:28 pm
The Prime Minister, Shri Narendra Modi has hailed Make In India success story for global economic boost. Shri Modi has shared a glimpse of how Make In India is propelling India's economy onto the global stage.ಒಂಭತ್ತು ವರ್ಷಗಳ ಡಿಜಿಟಲ್ ಇಂಡಿಯಾ ಉಪಕ್ರಮಕ್ಕೆ ಪ್ರಧಾನಮಂತ್ರಿ ಶ್ಲಾಘನೆ
July 01st, 01:49 pm
ಡಿಜಿಟಲ್ ಇಂಡಿಯಾ ಉಪಕ್ರಮ ಯಶಸ್ವಿಯಾಗಿ ಒಂಭತ್ತು ವರ್ಷ ಪೂರ್ಣಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಸುಲಲಿತ ಜೀವನ' ಮತ್ತು ಪಾರದರ್ಶಕತೆಗೆ ಉತ್ತೇಜನ ನೀಡುವ ಸಬಲೀಕೃತ ಭಾರತದ ಸಂಕೇತವೇ ಡಿಜಿಟಲ್ ಇಂಡಿಯಾ ಎಂದು ಪ್ರಧಾನಿ ಹೇಳಿದ್ದಾರೆ.ಬ್ಯಾಂಕಿಂಗ್ ವಲಯವನ್ನು ಪರಿವರ್ತಿಸುವಲ್ಲಿ ಪಿಎಸ್‌ಯು ಬ್ಯಾಂಕ್‌ಗಳ ಕೊಡುಗೆಗಳನ್ನು ಪ್ರಧಾನಮಂತ್ರಿ ಶ್ಲಾಘಿಸಿದರು
June 19th, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು MyGovIndia ಮೂಲಕ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ X ನಲ್ಲಿ ಥ್ರೆಡ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಬ್ಯಾಂಕಿಂಗ್ ವಲಯವನ್ನು ಪರಿವರ್ತಿಸುವಲ್ಲಿ PSU ಬ್ಯಾಂಕ್‌ಗಳ ಕೊಡುಗೆಗಳನ್ನು ಎತ್ತಿ ತೋರಿಸಿದ್ದಾರೆ.'ರಾಷ್ಟ್ರೀಯ ರಚನೆಕಾರರ ಪ್ರಶಸ್ತಿ' ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮನವಿ
February 11th, 08:28 pm
ಕೇಂದ್ರ ಸರ್ಕಾರದ 'MyGov' ವೆಬ್‌ಸೈಟ್‌ನಲ್ಲಿ ರಾಷ್ಟ್ರೀಯ ರಚನೆಕಾರರ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಯನ್ನು ಕೋರಿದ್ದಾರೆ.ಡಿಸೆಂಬರ್ 26 ರಂದು ‘ವೀರ್ ಬಾಲ್ ದಿವಸ್ʼಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
December 25th, 04:17 pm
ನವದೆಹಲಿಯ ಭಾರತ್ ಮಂಟಪದಲ್ಲಿ 2023 ರ ಡಿಸೆಂಬರ್ 26 ರಂದು ಬೆಳಿಗ್ಗೆ 10:30 ಕ್ಕೆ ನಡೆಯಲಿರುವ ‘ವೀರ್ ಬಾಲ್ ದಿವಸ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ದೆಹಲಿಯಲ್ಲಿ ಯುವಕರಿಂದ ಪಥಸಂಚಲನಕ್ಕೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ.ದೀಪಾವಳಿಯ ಶುಭ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳು ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ: ಪ್ರಧಾನಮಂತ್ರಿ
November 10th, 03:03 pm
ಹಲವಾರು ಸರ್ಕಾರಿ ಯೋಜನೆಗಳು ದೀಪಾವಳಿ ಶುಭ ಸಂದರ್ಭದಲ್ಲಿ ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ
September 24th, 11:30 am
ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.