ಮಾರ್ಚ್ 7-8 ರಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಗುಜರಾತ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ
March 07th, 07:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 7 - 8 ರಂದು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶ ಮತ್ತು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಾರ್ಚ್ 7 ರಂದು ಸಿಲ್ವಾಸ್ಸಾಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ನಮೋ ಆಸ್ಪತ್ರೆಯನ್ನು (I ಹಂತ) ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:45 ರ ಸುಮಾರಿಗೆ, ಅವರು ಸಿಲ್ವಾಸ್ಸಾದಲ್ಲಿ 2580 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕೇಂದ್ರಾಡಳಿತ ಪ್ರದೇಶಕ್ಕಾಗಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಅವರು ಸೂರತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5 ಗಂಟೆಗೆ ಅವರು ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 8 ರಂದು, ಪ್ರಧಾನ ಮಂತ್ರಿ ನವಸಾರಿಗೆ ಪ್ರಯಾಣಿಸಲಿದ್ದಾರೆ ಮತ್ತು ಸುಮಾರು 11:30ಕ್ಕೆ, ಅವರು ಲಕ್ಷಪತಿ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ವಿವಿಧ ಯೋಜನೆಗಳ ಉದ್ಘಾಟನೆಯನ್ನು ಒಳಗೊಂಡ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.