ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಪ್ರಧಾನಮಂತ್ರಿ ಅವರಿಂದ ಇಟಲಿ ಅಧ್ಯಕ್ಷರ ಭೇಟಿ
May 20th, 07:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮ್ ನ ಅಧ್ಯಕ್ಷರ ಅರಮನೆಯಾದ ಕ್ವಿರಿನಾಲೆಯಲ್ಲಿ ಇಟಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ಭೇಟಿ ಮಾಡಿದರು.ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 11:49 pm
ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
May 18th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಸ್ವೀಡನ್ ದೇಶದ ಆಯ್ದ ವ್ಯಾಪಾರ ನಾಯಕರೊಂದಿಗೆ ಪ್ರಧಾನಮಂತ್ರಿ ಸಂವಾದ
May 17th, 11:16 pm
ಭಾರತ ಮತ್ತು ಸ್ವೀಡನ್ ಪ್ರಜಾಪ್ರಭುತ್ವ, ಪಾರದರ್ಶಕತೆ, ನಾವೀನ್ಯತೆ ಮತ್ತು ಸುಸ್ಥಿರತೆಯ ಹಂಚಿಕೆಯ ಮೌಲ್ಯಗಳಿಂದ ಬಲವಾದ ಸಂಬಂಧ ಹೊಂದಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಮುಖವಾಗಿ ಉಲ್ಲೇಖಿಸಿದರು. ಇದು ಮಹತ್ವಾಕಾಂಕ್ಷೆಯ ಮತ್ತು ಮುನ್ನೋಟದ ಆರ್ಥಿಕ ಪಾಲುದಾರಿಕೆಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದ ಅವರು,ಇಂದು ಭಾರತ-ಸ್ವೀಡನ್ ಪಾಲುದಾರಿಕೆ ಕೇವಲ ಆರ್ಥಿಕ ಸಂಬಂಧವಾಗಿಲ್ಲ, ಆದರೆ ಕಲ್ಪನೆಗಳು, ತಂತ್ರಜ್ಞಾನ, ನಾವೀನ್ಯತೆ ಮತ್ತು ಸಹ-ಸೃಷ್ಟಿಯ ಪಾಲುದಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಬೆಳವಣಿಗೆಗೆ ಸ್ವೀಡಿಷ್ ಕಂಪನಿಗಳ ದೀರ್ಘಕಾಲೀನ ಕೊಡುಗೆಯನ್ನು ಅವರು ಸ್ವಾಗತಿಸಿದರು ಮತ್ತು ಸಂಶೋಧನೆ, ನಾವೀನ್ಯತೆ, ಹಸಿರು ಪರಿವರ್ತನೆ ಮತ್ತು ಉತ್ಪಾದನಾ ವಲಯದಲ್ಲಿ ಗಾಢವಾದ ಸಹಯೋಗಕ್ಕೆ ಉತ್ತೇಜನ ನೀಡಿದರು.ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ
May 06th, 05:24 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ
May 06th, 03:44 pm
ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
May 06th, 01:00 pm
ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.ಭಾರತ-ಕೊರಿಯಾ ಗಣರಾಜ್ಯ (ಆರ್‌ಒಕೆ-ದಕ್ಷಿಣ ಕೊರಿಯಾ) ವಿಶೇಷ ಕಾರ್ಯತಂತ್ರ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರ ದೃಷ್ಟಿಕೋನ
April 20th, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೊರಿಯಾ ಗಣರಾಜ್ಯದ(ದಕ್ಷಿಣ ಕೊರಿಯಾ-ಆರ್‌ಒಕೆ) ಅಧ್ಯಕ್ಷ ಗೌರವಾನ್ವಿತ ಲೀ ಜೇ ಮ್ಯುಂಗ್ ಅವರು 2026 ಏಪ್ರಿಲ್ 19ರಿಂದ 21ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಇದು ಕೊರಿಯಾದ ಅಧ್ಯಕ್ಷರೊಬ್ಬರು ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯಾಗಿದೆ. ಅಧ್ಯಕ್ಷ ಲೀ ಜೇ ಮ್ಯುಂಗ್ ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ಕೊರಿಯಾ ಉದ್ಯಮ ರಂಗದ ಪ್ರಮುಖ ಸಿಇಒಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು.ಫಿನ್ಲೆಂಡ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
March 05th, 11:55 am
ಫಿನ್ಲೆಂಡ್ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಸ್ಟಬ್ ಅವರಿಗೆ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಅಧ್ಯಕ್ಷ ಸ್ಟಬ್ ಅವರು ಪ್ರಸಿದ್ಧ ಜಾಗತಿಕ ನಾಯಕ ಮಾತ್ರವಲ್ಲ, ಗೌರವಾನ್ವಿತ ಚಿಂತಕ ಮತ್ತು ಲೇಖಕರೂ ಆಗಿದ್ದಾರೆ.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಗುಜರಾತ್ ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 02:45 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಮೈಕ್ರಾನ್ ಟೆಕ್ನಾಲಜಿಯ ಸಿಇಒ ಸಂಜಯ್ ಮೆಹ್ರೋತ್ರಾ ಜೀ, ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್, ಉಪಮುಖ್ಯಮಂತ್ರಿ ಹರ್ಷ ಸಂಘವಿ ಜೀ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ.ಗುಜರಾತ್‌ನ ಸನಂದ್‌ನಲ್ಲಿ ಮೈಕ್ರಾನ್ ಟೆಕ್ನಾಲಜಿಯ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 28th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಕ್ರಾನ್ ಎಟಿಎಂಪಿಯನ್ನು ಉದ್ಘಾಟಿಸಿದರು (ಅಸೆಂಬ್ಲಿ, ಟೆಸ್ಟ್, ಮಾರ್ಕಿಂಗ್, ಮತ್ತು ಪ್ಯಾಕೇಜಿಂಗ್) ಸೌಲಭ್ಯವನ್ನು ಗುಜರಾತ್‌ನ ಸನಂದ್‌ನಲ್ಲಿ ಸ್ಥಾಪಿಸಲಾಗಿದೆ. ವಾಣಿಜ್ಯ ಉತ್ಪಾದನೆಯ ಆರಂಭವನ್ನು ಗುರುತಿಸುವ ಈ ಮಹತ್ವದ ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕತ್ವದತ್ತ ಭಾರತದ ಪ್ರಯಾಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಆಗಿದೆ.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ
February 26th, 07:41 pm
ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 26th, 03:30 pm
ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.ಫ್ರೆಂಚ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿಯ ಫಲಶ್ರುತಿಯ ವಿವರಗಳು ಹೀಗಿವೆ
February 17th, 07:00 pm
ಭಾರತ-ಫ್ರಾನ್ಸ್ ಸಂಬಂಧವನ್ನು ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಮೇಲ್ದರ್ಜೆಗೇರಿಸುವುದು