“Maitri Parv” celebrates the friendship between India and Oman: PM Modi during community programme in Muscat
December 18th, 12:32 pm
While addressing a large gathering of members of the Indian community in Muscat, PM Modi remarked that co-existence and cooperation have been hallmarks of the Indian diaspora. He noted that over the last 11 years, India has witnessed transformational changes across perse fields. He reaffirmed India’s deep commitment to the welfare of the diaspora and invited students to participate in ISRO’s YUVIKA programme.Prime Modi addresses the Indian community in Oman
December 18th, 12:31 pm
While addressing a large gathering of members of the Indian community in Muscat, PM Modi remarked that co-existence and cooperation have been hallmarks of the Indian diaspora. He noted that over the last 11 years, India has witnessed transformational changes across perse fields. He reaffirmed India’s deep commitment to the welfare of the diaspora and invited students to participate in ISRO’s YUVIKA programme.ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು
November 03rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.ಅಸ್ಸಾಂನ ಗೋಲಾಘಾಟ್ ನಲ್ಲಿ ಪಾಲಿಪ್ರೊಪಿಲೀನ್ ಸ್ಥಾವರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 14th, 03:30 pm
ಭಾರತ್ ಮಾತಾ ಕೀ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಜೀ, ಹರ್ದೀಪ್ ಸಿಂಗ್ ಪುರಿ ಜೀ, ಅಸ್ಸಾಂ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಸ್ಸಾಂನ ಗೋಲಾಘಾಟ್ ನಲ್ಲಿ ಬಯೋಇಥೆನಾಲ್ ಸ್ಥಾವರವನ್ನು ಉದ್ಘಾಟನೆ, ಪಾಲಿಪ್ರೊಪಿಲೀನ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
September 14th, 03:00 pm
ಕಳೆದ ಎರಡು ದಿನಗಳಿಂದ ತಾವು ಈಶಾನ್ಯದಲ್ಲಿದ್ದು, ಪ್ರತಿ ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದಾಗಲೂ ಅಸಾಧಾರಣ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆಯುವುದಾಗಿ ಪ್ರಧಾನಮಂತ್ರಿಯವರು ಹೇಳಿದರು. ಅಸ್ಸಾಂನ ಈ ಭಾಗದಲ್ಲಿ ತಾವು ಅನುಭವಿಸುವ ವಿಶಿಷ್ಟವಾದ ಆತ್ಮೀಯತೆ ಮತ್ತು ಬಂಧುತ್ವದ ಭಾವನೆಯನ್ನು ಅವರು ಎತ್ತಿ ತೋರಿಸಿದರು ಮತ್ತು ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.ತಾಂತ್ರಿಕ ಶಿಕ್ಷಣದಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ಸಂಶೋಧನಾ ಸುಧಾರಣೆ (MERITE) ಯೋಜನೆಗೆ 4200 ಕೋಟಿ ರೂ.ಗಳ ಬಜೆಟ್ ಬೆಂಬಲಕ್ಕೆ ಸಂಪುಟದ ಅನುಮೋದನೆ
August 08th, 04:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 175 ಎಂಜಿನಿಯರಿಂಗ್ ಸಂಸ್ಥೆಗಳು ಮತ್ತು 100 ಪಾಲಿಟೆಕ್ನಿಕ್‌ಗಳನ್ನು ಒಳಗೊಂಡು 275 ತಾಂತ್ರಿಕ ಸಂಸ್ಥೆಗಳಲ್ಲಿ 'ತಾಂತ್ರಿಕ ಶಿಕ್ಷಣದಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ಸಂಶೋಧನಾ ಸುಧಾರಣೆ' (MERITE) ಯೋಜನೆಯನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ. ರಾಷ್ಟ್ರೀಯ ಶೈಕ್ಷಣಿಕ ನೀತಿ-2020 (NEP-2020) ಗೆ ಅನುಗುಣವಾಗಿ ಮಧ್ಯಪ್ರವೇಶಗಳನ್ನು ಅನುಷ್ಠಾನಗೊಳಿಸುವ ಮೂಲಕ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ತಾಂತ್ರಿಕ ಶಿಕ್ಷಣದಲ್ಲಿ ಗುಣಮಟ್ಟ, ಸಮಾನತೆ ಮತ್ತು ಆಡಳಿತವನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ
April 29th, 11:01 am
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
April 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಡಾ. ಕೆ. ಕಸ್ತೂರಿರಂಗನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
April 25th, 02:34 pm
ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ವಲಯದ ಅಗ್ರಮಾನ್ಯರಾದ ಡಾ. ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಡಾ. ಕೆ. ಕಸ್ತೂರಿರಂಗನ್ ಅವರು ಇಸ್ರೋಗೆ ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು, ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಮುನ್ನಡೆಸಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಕರಡು ರಚನೆಯ ಪ್ರಕ್ರಿಯೆಯಲ್ಲಿ ಹಾಗೂ ಭಾರತದಲ್ಲಿ ಕಲಿಕೆಯನ್ನು ಹೆಚ್ಚು ಸಮಗ್ರವಾಗಿಸಲು ಮತ್ತು ಮುನ್ನಡೆಸಲು ಡಾ. ಕಸ್ತೂರಿರಂಗನ್ ಅವರ ಪ್ರಯತ್ನಗಳಿಗಾಗಿ ಭಾರತ ಅವರಿಗೆ ಸದಾ ಚಿರ ಋಣಿಯಾಗಿರಲಿದೆ. ಅವರು ಅನೇಕ ಯುವ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಅತ್ಯುತ್ತಮ ಮಾರ್ಗದರ್ಶಕರಾಗಿದ್ದರು ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.Government is running a special campaign for the development of tribal society: PM Modi in Bilaspur, Chhattisgarh
March 30th, 06:12 pm
PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.