ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 23rd, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಸಮಾಜದ ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಕೃಷಿಯ ಪ್ರಗತಿ ಮತ್ತು ರೈತರ ಸಮೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕೃತಜ್ಞ ರಾಷ್ಟ್ರವು ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.