ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ

July 11th, 08:03 am

ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ

June 14th, 08:37 pm

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಎಲ್ಲಾ ರಂಗಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಯೋಗದ ಅತ್ಯುತ್ತಮ ಬೆಳವಣಿಗೆ ಮತ್ತು ಆಳದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ರಕ್ಷಣಾ ವೇದಿಕೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಸಹ ವಿನ್ಯಾಸ ಸಹ ಅಭಿವೃದ್ಧಿಮತ್ತು ಸಹ ಉತ್ಪಾದನೆಗೆ ಒತ್ತು ನೀಡುವ ಮೂಲಕ ಇದನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಒಪ್ಪಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಹಕಾರದ ಸುದೀರ್ಘ ಪರಂಪರೆಯನ್ನು ಉಭಯ ನಾಯಕರು ನೆನೆದರು ಮತ್ತು ಮಾನವಸಹಿತ ಬಾಹ್ಯಾಕಾಶ ಯಾನ ಹಾಗೂ ಬಾಹ್ಯಾಕಾಶ ಪರಿಸ್ಥಿತಿಯ ಜಾಗೃತಿ ಕುರಿತು ಸಹಯೋಗವನ್ನು ಮುಂದುವರಿಸುವ ಬಗ್ಗೆ ಚರ್ಚಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಯೋಗವನ್ನು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು. ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ, ಭಾರತದ ಶಾಂತಿ ಕಾಯ್ದೆಯು ಸಣ್ಣ ಮತ್ತು ಸುಧಾರಿತ ಮಾಡ್ಯುಲರ್ ರಿಯಾಕ್ಟರ್ ಗಳು ಸೇರಿದಂತೆ ಹೊಸ ಸಹಯೋಗದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಗಮನಿಸಿದರು.

ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯನ್ನು ಒಳಗೊಂಡ ಒಂದು ಹೊಸ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 134 ಕಿಲೋಮೀಟರ್ ಗಳಷ್ಟು ಹೆಚ್ಚಿಸಲಿದೆ

May 13th, 03:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಅಹಮದಾಬಾದ್ (ಸರ್ಖೇಜ್) - ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು ಸುಮಾರು 20,667 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೇಯ ಮೊದಲ ಸೆಮಿ ಹೈ-ಸ್ಪೀಡ್ ಯೋಜನೆಯಾಗಿದ್ದು, ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಯೋಜಿಸಲಾಗಿದೆ.

ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ

February 26th, 07:41 pm

ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 12th, 12:49 pm

ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.

ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 11th, 02:45 pm

2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.

ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

January 11th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಅವರಿಂದ ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ

September 20th, 09:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ ನಡೆಸಿದರು. ಈ ಸಂಕೀರ್ಣದ ಕಾಮಗಾರಿ ಪೂರ್ಣಗೊಂಡ ನಂತರ ಇದು ವಿಶ್ವದ ಅತಿದೊಡ್ಡ ಕಡಲ ವಸ್ತುಸಂಗ್ರಹಾಲಯವಾಗಲಿದೆ. ಇದು ಪ್ರವಾಸೋದ್ಯಮ, ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯ ಕೇಂದ್ರವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಭಾರತದ ಪ್ರಾಚೀನ ಸಾಗರ ಸಾಂಪ್ರದಾಯಿಕತೆಗಳನ್ನೂ ಪ್ರದರ್ಶಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಸೆಪ್ಟೆಂಬರ್ 20ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 19th, 05:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 20ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಭಾವನಗರದಲ್ಲಿ ಬೆಳಗ್ಗೆ 10:30ರ ಸುಮಾರಿಗೆ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಫಲಪ್ರದ ಕಾರ್ಯಯೋಜನೆಗಳ ಪಟ್ಟಿ: ಪ್ರಧಾನಮಂತ್ರಿಯವರ ಥೈಲ್ಯಾಂಡ್‌ ಭೇಟಿ

April 03rd, 08:36 pm

ಭಾರತ-ಥೈಲ್ಯಾಂಡ್‌ ದೇಶಗಳ ನಡುವಿನ ಕಾರ್ಯತಂತ್ರದ ಹಾಗೂ ಸಹಭಾಗಿತ್ವ ಪ್ರಾರಂಭ ಕುರಿತು ಜಂಟಿ ಘೋಷಣೆ

ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣ ನಿರ್ಮಾಣದ ಬಗ್ಗೆ ಲಿಂಕ್ಡ್ ಇನ್ ಪೋಸ್ಟ್ ಮಾಡಿದ್ದಾರೆ

October 15th, 03:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣವನ್ನು ಅಭಿವೃದ್ಧಿಪಡಿಸುವ ವಿಷಯಗಳನ್ನು ವಿವರಿಸಿ ಲಿಂಕ್ಡ್ ಇನ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗುಜರಾತಿನ ಲೋಥಾಲ್ ನ ರಾಷ್ಟ್ರೀಯ ಸಾಗರ ಪರಂಪರೆಯ ಸಂಕೀರ್ಣ (ಎನ್.ಎಂ.ಹೆಚ್.ಸಿ) ಅಭಿವೃದ್ಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ

October 09th, 03:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಗುಜರಾತ್ ನ ಲೋಥಾಲ್ ನಲ್ಲಿರುವ ರಾಷ್ಟ್ರೀಯ ಸಾಗರ ಪರಂಪರೆಯ ಸಂಕೀರ್ಣ (ಎನ್.ಎಂ.ಹೆಚ್.ಸಿ) ಅಭಿವೃದ್ಧಿಗೆ ಅನುಮೋದನೆ ನೀಡಿದೆ. ಈ ಯೋಜನೆಯು ಎರಡು ಹಂತಗಳಲ್ಲಿ ಪೂರ್ಣಗೊಳ್ಳಲಿದೆ.

ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 17th, 11:10 am

3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.

​​​​​​​ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ

October 17th, 10:44 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.

We stamped out terrorism in the last eight years with resolute actions: PM Modi in Jamnagar

November 28th, 02:15 pm

Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.