ಭಯೋತ್ಪಾದನೆಯು ಭಾರತದ ಚೈತನ್ಯವನ್ನು ಮುರಿಯುವುದಿಲ್ಲ: ಪ್ರಧಾನಿ ಮೋದಿ

April 24th, 03:36 pm

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಅಮಾಯಕರ ಜೀವಗಳ ದುರಂತ ನಷ್ಟಕ್ಕೆ ಭಾರತ ದುಃಖಿಸುತ್ತಿದೆ. ಬಿಹಾರದ ಮಧುಬನಿಯಲ್ಲಿ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ, ಪ್ರಧಾನಿ ಮೋದಿ ಅವರು ದೇಶಾದ್ಯಂತ ಶೋಕದ ನೇತೃತ್ವ ವಹಿಸಿ, ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದರು. ಬಲಿಪಶುಗಳನ್ನು ಗೌರವಿಸಲು ಎರಡು ನಿಮಿಷಗಳ ಮೌನ ಆಚರಿಸಲಾಯಿತು, ಇಡೀ ರಾಷ್ಟ್ರವು ಸಂತ್ರಸ್ತ ಕುಟುಂಬಗಳೊಂದಿಗೆ ಒಗ್ಗಟ್ಟಿನಿಂದ ನಿಂತಿತ್ತು.

ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 12:00 pm

ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು

April 24th, 11:50 am

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.

ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

April 23rd, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಏಪ್ರಿಲ್ 24 ಮತ್ತು 15ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ

April 21st, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 24 ಮತ್ತು 25ರಂದು ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಭೇಟಿ ನೀಡಲಿದ್ದಾರೆ.

ಪಂಚಾಯತ್ ರಾಜ್ ದಿನದಂದು ಗ್ರಾಮಸಭೆಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ

April 24th, 11:31 am

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜಿ, ನನ್ನ ಸಂಪುಟ ಸಹೋದ್ಯೋಗಿ ಗಿರಿರಾಜ್ ಸಿಂಗ್ ಜಿ, ಈ ಮಣ್ಣಿನ ಮಗ ಮತ್ತು ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಜಿ, ನನ್ನ ಸಂಸದೀಯ ಸಹೋದ್ಯೋಗಿ ಶ್ರೀ ಜುಗಲ್ ಕಿಶೋರ್ ಜಿ, ಜಮ್ಮು-ಕಾಶ್ಮೀರ ಸೇರಿದಂತೆ ಇಡೀ ದೇಶದಿಂದ ಸಂಪರ್ಕ ಹೊಂದಿರುವ ಪಂಚಾಯತ್ ರಾಜ್ ಸಂಸ್ಥೆಗಳ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳೆ, ಸಹೋದರ ಸಹೋದರಿಯರೆ!

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

April 24th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನುದ್ದೇಶಿಸಿ ಮಾತನಾಡಿದರು. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೆ ಭೇಟಿ ಅವರು ನೀಡಿದರು. ಸುಮಾರು 20,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ʻಅಮೃತ ಸರೋವರʼ ಯೋಜನೆಗೂ ಅವರು ಚಾಲನೆ ನೀಡಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಡಾ. ಜಿತೇಂದ್ರ ಸಿಂಗ್ ಮತ್ತು ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

April 24th, 09:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಪಂಚಾಯತ್‌ ಗಳು ಭಾರತೀಯ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ ಎಂದು ಹೇಳಿದರು.

PM to launch physical distribution of Property Cards under the SVAMITVA Scheme on 11th October

October 09th, 01:31 pm

In a historic move set to transform rural India and empower millions of Indians, PM Narendra Modi will launch the physical distribution of Property Cards under the SVAMITVA Scheme on 11th October. The launch will enable around one lakh property holders to download their Property Cards through the SMS link delivered on their mobile phones.