Prime Minister chairs DGP/IGP Conference in Raipur
November 29th, 08:25 pm
Prime Minister Shri Narendra Modi chaired the first day of the Conference of Directors General and Inspectors General of Police in Raipur today. He remarked that the conference witnessed extensive deliberations on different aspects of India’s security system.ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಕುರಿತು ಸಂಪುಟ ನಿರ್ಣಯ ಅಂಗೀಕರಿಸಿತು
November 12th, 08:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025ರ ನವೆಂಬರ್ 10ರ ಸಂಜೆ ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟದ ಭಯೋತ್ಪಾದಕ ಘಟನೆಯಲ್ಲಿ ಜೀವಹಾನಿಯಾದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿತು. ಘಟನೆಯಲ್ಲಿ ಬಲಿಯಾದ ಅಮಾಯಕ ಜೀವಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಸಚಿವ ಸಂಪುಟ ಎರಡು ನಿಮಿಷಗಳ ಮೌನ ಆಚರಿಸಿತು.ಭಾರತದ ಪ್ರಧಾನಮಂತ್ರಿ ಭೂತಾನ್ ಭೇಟಿಯ ಕುರಿತು ಜಂಟಿ ಪತ್ರಿಕಾ ಪ್ರಕಟಣೆ
November 12th, 10:00 am
ಭೂತಾನ್ ನ ದೊರೆ ಗೌರವಾನ್ವಿತ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 11-12, ರವರೆಗೆ ಭೂತಾನ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದರು.Mahagathbandhan is a bundle of lies: PM Modi in Arrah, Bihar
November 02nd, 02:00 pm
Massive crowd attended PM Modi’s public rally in Arrah, Bihar, today. Addressing the gathering, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.PM Modi addresses large public gatherings in Arrah and Nawada, Bihar
November 02nd, 01:45 pm
Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ಹಡಗು ನಿರ್ಮಾಣ, ಸಾಗರ ಹಣಕಾಸು ಮತ್ತು ದೇಶೀಯ ಸಾಮರ್ಥ್ಯ ಬಲವರ್ಧನೆಗೆ ಸಮಗ್ರ 4-ಸ್ತಂಭ ವಿಧಾನ
September 24th, 03:08 pm
ಸಾಗರ ವಲಯದ ಕಾರ್ಯತಂತ್ರ ಮತ್ತು ಆರ್ಥಿಕ ಪ್ರಾಮುಖ್ಯತೆಯನ್ನು ಗುರುತಿಸಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟವು ಭಾರತದ ಹಡಗು ನಿರ್ಮಾಣ ಮತ್ತು ಸಾಗರ ಪೂರಕ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು 69,725 ಕೋಟಿ ರೂಪಾಯಿಗಳ ಸಮಗ್ರ ಪ್ಯಾಕೇಜ್‌ಗೆ ಅನುಮೋದನೆ ನೀಡಿದೆ. ದೇಶೀಯ ಸಾಮರ್ಥ್ಯ ಬಲವರ್ಧನೆಗೊಳಿಸುವುದು, ದೀರ್ಘಕಾಲೀನ ಹಣಕಾಸು ಸುಧಾರಣೆ, ಗ್ರೀನ್‌ಫೀಲ್ಡ್ ಮತ್ತು ಬ್ರೌನ್‌ಫೀಲ್ಡ್ ಶಿಪ್‌ಯಾರ್ಡ್ ಅಭಿವೃದ್ಧಿಗೆ ಉತ್ತೇಜನ, ತಾಂತ್ರಿಕ ಸಾಮರ್ಥ್ಯಗಳು ಮತ್ತು ಕೌಶಲ್ಯ ವೃದ್ಧಿ ಮತ್ತು ಉತ್ಕೃಷ್ಟ ಕಡಲ ಮೂಲಸೌಕರ್ಯವನ್ನು ಸೃಷ್ಟಿಸಲು ಕಾನೂನು, ತೆರಿಗೆ ಮತ್ತು ನೀತಿ ಸುಧಾರಣೆಗಳನ್ನು ಜಾರಿಗೆ ತರಲು ರೂಪಿಸಲಾದ ನಾಲ್ಕು ಸ್ತಂಭಗಳ ವಿಧಾನವನ್ನು ಈ ಪ್ಯಾಕೇಜ್ ಒಳಗೊಂಡಿದೆ.ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.25ನೇ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
September 01st, 10:14 am
ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 25ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನನಗೆ ಸಂತಸವಾಗಿದೆ. ಸಂಭ್ರಮದಿಂದ ಸ್ವಾಗತಿಸಿ, ಸಂತೋಷದಿಂದ ಆತಿಥ್ಯ ಸತ್ಕಾರ ನೀಡಿದ ಅಧ್ಯಕ್ಷರಾದ ಕ್ಸಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಚೀನಾದ ಟಿಯಾಂಜಿನ್ ನಲ್ಲಿ ನಡೆದ 25ನೇ ʻಎಸ್‌ಸಿಒʼ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
September 01st, 10:00 am
2025ರ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 25ನೇ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಶೃಂಗಸಭೆಯು ʻಎಸ್‌ಸಿಒʼ ಅಭಿವೃದ್ಧಿ ಕಾರ್ಯತಂತ್ರ, ಜಾಗತಿಕ ಆಡಳಿತದ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಶಾಂತಿ ಮತ್ತು ಭದ್ರತೆ, ಆರ್ಥಿಕ ಮತ್ತು ಹಣಕಾಸು ಸಹಕಾರ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತು ನಿರ್ಮಾಣಾತ್ಮಕ ಚರ್ಚೆಗಳಿಗೆ ಸಾಕ್ಷಿಯಾಯಿತು.ತಿಯಾನ್ ಜಿನ್ ನಲ್ಲಿ ಚೀನಾ ಅಧ್ಯಕ್ಷರಾದ ಕ್ಸಿ ಜಿನ್ ಪಿಂಗ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
August 31st, 11:06 am
ನಿಮ್ಮ ಆತ್ಮೀಯ ಸ್ವಾಗತಕ್ಕೆ ನನ್ನ ಹೃತ್ಪೂರ್ವಕ ವಂದನೆಗಳು. ಕಜಾನ್ ನಲ್ಲಿ ಕಳೆದ ವರ್ಷ ನಾವು ನಡೆಸಿದ ಅರ್ಥಪೂರ್ಣ ಚರ್ಚೆಯು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ದಿಶೆಯನ್ನು ನೀಡಿದೆ. ಗಡಿಯಲ್ಲಿ ಯುದ್ಧದ ಸನ್ನಿವೇಶದಿಂದ ಹಿಂದಕ್ಕೆ ಸರಿದ ನಂತರ ಶಾಂತಿ ಮತ್ತು ಸ್ಥಿರತೆಯ ವಾತಾವರಣ ನೆಲೆಸಿದೆ. ನಮ್ಮ ವಿಶೇಷ ಪ್ರತಿನಿಧಿಗಳು ಗಡಿ ನಿರ್ವಹಣೆಯ ಕುರಿತು ಒಮ್ಮತದ ತಿಳುವಳಿಕೆ ಹೊಂದಿದ್ದಾರೆ. ಕೈಲಾಸ ಮಾನಸ ಸರೋವರ ಯಾತ್ರೆಯು ಪುನರಾರಂಭಗೊಂಡಿದೆ ಮತ್ತು ಎರಡೂ ದೇಶಗಳ ನಡುವೆ ನೇರ ವಿಮಾನ ಸೇವೆಯನ್ನೂ ಸಹ ಪ್ರಾರಂಭಿಸಲಾಗುತ್ತಿದೆ. ನಮ್ಮ ನಡುವಿನ ಸಹಕಾರವು ನಮ್ಮ ಎರಡೂ ರಾಷ್ಟ್ರಗಳ 2.8 ಶತಕೋಟಿ ಜನರ ಹಿತಾಸಕ್ತಿಗಳಿಗೆ ಸಂಬಂಧಿಸಿದೆ. ಇದು ಎಲ್ಲಾ ಮಾನವೀಯ ಕಲ್ಯಾಣಕ್ಕೂ ದಾರಿ ಮಾಡಿಕೊಡಲಿದೆ. ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮ ಭಾವನಾತ್ಮಕತೆಯ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ.ಭಾರತ-ಫಿಜಿ ಜಂಟಿ ಹೇಳಿಕೆ: ʻವೀಲೋಮನಿ ದೋಸ್ತಿʼಯ ಸ್ಫೂರ್ತಿಯೊಂದಿಗೆ ಪಾಲುದಾರಿಕೆ
August 25th, 01:52 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಜಿ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಸಿಟಿವೇನಿ ರಬೂಕಾ ಅವರು 2025ರ ಆಗಸ್ಟ್ 24 ರಿಂದ 26ರವರೆಗೆ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಸ್ತುತ ತಮ್ಮ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ರಬುಕಾ ಅವರು ತಮ್ಮ ಪತ್ನಿಯ ಸಂಗಡವಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ. ಫಿಜಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳ ಸಚಿವರಾದ ಗೌರವಾನ್ವಿತ ಶ್ರೀ ಆಂಟೋನಿಯೊ ಲಾಲಬಲಾವು ಮತ್ತು ಫಿಜಿ ಗಣರಾಜ್ಯದ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಅವರ ಜೊತೆಯಲ್ಲಿದೆ.ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
August 25th, 12:30 pm
ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.