ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 08th, 12:30 pm

ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.

ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

December 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ರಾಷ್ಟ್ರೀಯ ಗೀತೆ "ವಂದೇ ಮಾತರಂ" ನ 150ನೇ ವರ್ಷದ ಸ್ಮರಣಾರ್ಥ ವರ್ಷಪೂರ್ತಿ ವಿಶೇಷ ಆಚರಣೆಯನ್ನು ನವೆಂಬರ್ 7, 2025 ರಂದು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ

November 06th, 02:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 7, 2025 ರಂದು ಬೆಳಿಗ್ಗೆ 9:30ರ ಸುಮಾರಿಗೆ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂ ನ ವರ್ಷಪೂರ್ತಿ ಸ್ಮರಣಾರ್ಥ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.