ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 19th, 10:00 am

ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ

February 19th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.