ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 02:00 pm

ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

April 24th, 01:30 pm

ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.

ಸೋಶಿಯಲ್ ಮೀಡಿಯಾ ಕಾರ್ನರ್ - ಮೇ 4

May 04th, 08:43 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ರಾಷ್ಟ್ರೀಯ ಉಕ್ಕಿನ 2017 ರ ನೀತಿಗೆ ಸಂಪುಟ ಅನುಮೋದನೆ ನೀಡಿದೆ

May 03rd, 08:16 pm

ಉಕ್ಕು ವಲಯಕ್ಕೆ ಪ್ರೋತ್ಸಾಹ ನೀಡಲು ಸರ್ಕಾರದ ದೀರ್ಘಕಾಲದ ದೃಷ್ಟಿಗೆ ಒಳಪಡುವ ರಾಷ್ಟ್ರೀಯ ಉಕ್ಕು ನೀತಿಯನ್ನು 2017 ನ್ನು ಸಂಪುಟ ಅಂಗೀಕರಿಸಿದೆ. ದೇಶೀಯ ಉಕ್ಕಿನ ಬಳಕೆಯನ್ನು ಹೆಚ್ಚಿಸಲು ಮತ್ತು ಉನ್ನತ ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತಾಂತ್ರಿಕವಾಗಿ ಮುಂದುವರಿದ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಉಕ್ಕಿನ ಉದ್ಯಮವನ್ನು ರಚಿಸಲು ಇದು ಪ್ರಯತ್ನಿಸುತ್ತದೆ.